ಆಗಸ್ಟ್ 5ರಿಂದ ಉದಯ ಟಿವಿಯಲ್ಲಿ ಹೊಸ ಧಾರಾವಾಹಿ “ನಾನು ನನ್ನ ಕನಸು”. – PopcornKannada
Connect with us

News

ಆಗಸ್ಟ್ 5ರಿಂದ ಉದಯ ಟಿವಿಯಲ್ಲಿ ಹೊಸ ಧಾರಾವಾಹಿ “ನಾನು ನನ್ನ ಕನಸು”.

Published

on

ಕನ್ನಡ ಪ್ರೇಕ್ಷಕರನ್ನು ಕಳೆದ 25 ವರ್ಷದಿಂದಲೂ ರಂಜಿಸುತ್ತಿರುವ ಒಂದೇ ಹೆಸರು ಉದಯ ಟಿವಿ. ಪ್ರೇಕ್ಷಕರ ನಾಡಿಮಿಡಿತ ಅರಿತಿರುವ ಉದಯ ಟಿವಿ, ಒಂದಕ್ಕಿಂತ ಒಂದು ಮನೋರಂಜನಾತ್ಮಕ ಕಾಯಕ್ರಮಗಳನ್ನು ಪ್ರಸರಿಸುತ್ತಾ ಬಂದಿದೆ. ಉದಯ ಟಿವಿಯ ಧಾರಾವಾಹಿಗಳು ಕರ್ನಾಟಕದ ಮನೆಮನಗಳಿಗೆ ಅಪಾರ ಮೆಚ್ಚುಗೆಗಳಿಸಿವೆ. ರೋಚಕ ಫ್ಯಾಂಟಸಿ ಕಥೆಯಾದ ನಂದಿನಿ, ಗಂಡನನ್ನು ಕಾಪಾಡಿಕೊಳ್ಳುವ ಇಂದಿನ ಸತಿ ಸಾವಿತ್ರಿಯಂತಿರುವ ದೇವಯಾನಿ, ಜೀವನದ ಸವಾಲುಗಳನ್ನು ಎದುರಿಸಿ ಗೆಲ್ಲುವ ನಾಯಕಿ, ಹೀಗೆ ಒಂದೊಂದು ಕಥೆಯೂ ಕೂಡ ವಿಭಿನ್ನ.

ಈ ಧಾರಾವಾಹಿಗಳ ಸಾಲಿಗೆ ಮತ್ತೊಂದು ವಿಶಿಷ್ಟವಾದ ಪ್ರಯತ್ನ “ನಾನು ನನ್ನ ಕನಸು” ಸೇರಿಕೊಳ್ಳಲಿದೆ. ತಂದೆ, ಮಗಳಿಗೆ ಹೇಳಿರುವ ಒಂದು ಸುಳ್ಳು ಅವಳÀ ಕನಸಿಗೆ ಸ್ಫೂರ್ತಿಯಾಗಿರುತ್ತದೆ. ತಾನು ದೊಡ್ಡವಳಾಗಿ ಒಬ್ಬ ಡಾಕ್ಟರ್ ಆಗಬೇಕೆಂಬುದೇ ನಮ್ಮ ಪುಟ್ಟ ಕಥಾನಾಯಕಿ ಅನುಳ ದೊಡ್ಡ ಕನಸು. ವಿಧಿಯ ಲೀಲೆಯಂತೆ, ತಂದೆಗೆ ಪೂರ್ಣ ಮಾಡಲಾಗದ ಆ ಕನಸನ್ನ ಪುಟ್ಟ ಮಗಳು ತನ್ನದಾಗಿಸಿಕೊಂಡು ಅದನ್ನ ನನಸಾಗಿಸುವ ಕಥೆಯೇ ಈ “ನಾನು ನನ್ನ ಕನಸು”. ಆದರೆ ಕನಸಿನ ದಾರಿಯಲ್ಲಿ ಎಲ್ಲವೂ ಸುಗಮವಾಗಿರದೆ, ದೊಡ್ಡ ಆಘಾತವೊಂದನ್ನ ಅನು ಎದುರಿಸಬೇಕಾಗುತ್ತದೆ. ಅನುಳ ಕನಸಿಗೆ ಅಡ್ಡಗಾಲಾಗಿರುವ ವಿಲನ್‍ಗಳು ಹೆಜ್ಜೆ ಹೆಜ್ಜೆಗೂ ಸವಾಲುಗಳನ್ನೇ ಎಸೆಯುತ್ತಿದ್ದಾರೆ. ಆ ಎಲ್ಲ ಅಡೆತಡೆಗಳನ್ನ ಎದುರಿಸಿ ತನ್ನ ಕನಸನ್ನ ಹೇಗೆ ಸಾಕಾರಗೊಳಿಸಿಕೊಳ್ಳುತ್ತಾಳೆ ಎಂಬುದೇ ಈ ಕಥೆಯ ಜೀವಾಳ. ಹಾಗಂತ ಬಹುತೇಕ ಧಾರಾವಾಹಿಗಳಂತೆ, ಹೆಣ್ಣೊಬ್ಬಳ ಗೋಳಿನ ಕಥೆಯಂತೂ ಖಂಡಿತ ಅಲ್ಲ. ಕಷ್ಟಗಳನ್ನು ಧೈರ್ಯವಾಗಿ ಎದುರಿಸುತ್ತಾ ಲವಲವಿಕೆಯಿಂದ ಇರುವ ಹುಡುಗಿ ನಮ್ಮ ಅನು.

ಕಿರುತೆರೆಯಲ್ಲಿ ಮಿಂಚಿದ ಪುಟಾಣಿ ತಾರೆ “ಶೃತಾ” ಅನು ಪಾತ್ರ ನಿರ್ವಹಿಸುತ್ತಿದ್ದರೆ, ಕನಸನ್ನ ಹೇಳಿಕೊಟ್ಟ ತಂದೆಯಾಗಿ ಸಿನಿಮಾದ ಖ್ಯಾತ ನಟರಾದ ರಾಜೇಶ್ ನಟರಂಗ ಅವರು ನಿರ್ವಹಿಸುತ್ತಿದ್ದಾರೆ. ಅನುವಿನ ತಾಯಿಯಾಗಿ ಆರತಿ ಕುಲಕರ್ಣಿ ನಟಿಸುತ್ತಿದ್ದರೆ, ಅನುವಿನ ಕನಸಿಗೆ ಅಡ್ಡವಾಗಿರುವ ಮುಖ್ಯ ಖಳರಾಗಿ ನಿಶಿತಾ ಗೌಡ ನಟಿಸುತ್ತಿದ್ದಾರೆ. ಬಹಳ ವರ್ಷಗಳ ವಿರಾಮದ ನಂತರ ನಿಶಿತಾ ಗೌಡ ಮತ್ತೆ ಕಿರುತೆರೆಯಲ್ಲಿ ನಟಿಸುತ್ತಿರುವುದು ವಿಶೇಷ. ಇತರ ಮುಖ್ಯಪಾತ್ರಗಳಲ್ಲಿ ವಿಶಾಲ್ ರಘು, ಹರೀಶ್,ಬಾಲನಟರಾಗಿ ಸ್ಕಂದ ನಟಿಸುತ್ತಿದ್ದಾರೆ.

ಇಷ್ಟೇ ಅಲ್ಲದೆ, ನಾನು ನನ್ನ ಕನಸು ಧಾರಾವಾಹಿಯ ಪ್ರಮೋಷನ್‍ಗೆ ಖ್ಯಾತ ಸಿನೆಮಾತಾರೆ “ಪ್ರಿಯಾಂಕ ಉಪೇಂದ್ರ” ಅವರು ಭಾಗಿಯಾಗಿರುವುದು ದೊಡ್ಡ ವಿಶೇಷ. ಇದರ ಪ್ರೋಮೋಗಳಲ್ಲಿ ಕಾಣಿಸಿಕೊಂಡಿರುವುದಷ್ಟೇ ಅಲ್ಲದೆ, ಕಥೆಯ ಮುಖ್ಯ ಘಟ್ಟಗಳನ್ನು ತೆರೆಯ ಮೇಲೆ ಬಂದು ಹೇಳಲಿದ್ದಾರೆ.

ಹಿಂದಿ ಟೆಲಿವಿಷನ್‍ನ ಬಹುಪ್ರಸಿದ್ಧ ಸಂಸ್ಥೆಯಾದ “ಶಶಿ ಸುಮೀತ್ ಗ್ರೂಪ್”, ನಾನು ನನ್ನ ಕನಸು ಧಾರಾವಾಹಿಯ ನಿರ್ಮಾಣದ ಹೊಣೆ ಹೊತ್ತುಕೊಂಡಿದೆ. ಹೈದರಾಬಾದ್‍ನ ಅದ್ದೂರಿ ಸೆಟ್‍ನಲ್ಲಿ ಚಿತ್ರೀಕರಣ ಭರದಿಂದ ಸಾಗಿದೆ. ಇಡೀ ಕನ್ನಡ ಟೆಲಿವಿಷನ್‍ನಲ್ಲಿ ಇಂಥಾ ಒಂದು ಸೆಟ್ ಇದೇ ಮೊದಲ ಬಾರಿಗೆ ನೋಡಲು ಸಿಗುತ್ತಿದೆ ಎಂಬುದು ಉದಯ ಟಿವಿಯ ಹೆಮ್ಮೆ. ಈ ಸೆಟ್ ನೋಡುಗರನ್ನ ನಿಬ್ಬೆರಗಾಗಿಸುವುದು ಖಂಡಿತ ಎನ್ನುತ್ತದೆ ತಂಡ.

ಕಿರುತೆರೆಯಲ್ಲಿ ದೊಡ್ಡ ಹೆಸರಾಗಿರುವ ಛಾಯಾಗ್ರಾಹಕ ಮತ್ತು ನಿರ್ದೇಶಕರಾದ ಬಿ.ಕುಮಾರ್ ಈ ಧಾರಾವಾಹಿಯನ್ನು ನಿರ್ದೇಶಿಸುತ್ತಿದ್ದಾರೆ. ತಮ್ಮ ಡೈಲಾಗ್ ಪಂಚ್‍ಗಳಿಗೆ ಹೆಸರುವಾಸಿಯಾದ ಶ್ರೀಕಾಂತ್ ಅವರು ಇದಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ. ಇನ್ನೂ ವಿಶೇಷವೆಂದರೆ, ಇದಕ್ಕೆ ಸಿನೆಮಾ ಸಾಹಿತಿಯಾದ ಡಾ. ನಾಗೇಂದ್ರ ಪ್ರಸಾದ್ ಅವರು ಸೊಗಸಾಗಿ ಶೀರ್ಷಿಕೆಗೀತೆ ಬರೆದುಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ, ಕನ್ನಡ ಸಿನೆಮಾದ ಬಹುಬೇಡಿಕೆಯ ಮ್ಯೂಸಿಕ್ ಡೈರೆಕ್ಟರ್ ಆದ ಶ್ರೀಧರ್ ಸಂಭ್ರಮ್ ಅವರು ಸಂಗೀತ ಸಂಯೋಜನೆ ಮಾಡಿರುವುದು ವಿಶೇಷ. ಹಿರಿತೆರೆಯ ಜನಪ್ರಿಯ ಹಾಡಾದ “ಅಪ್ಪಾ ಐ ಲವ್ ಯೂ ಪಾ” ತರಹವೇ “ನಾನು ನನ್ನ ಕನಸು” ಶೀರ್ಷಿಕೆ ಗೀತೆ ಹಿಟ್ ಆಗುವುದರಲ್ಲಿ ಸಂದೇಹವಿಲ್ಲ ಎನ್ನುತ್ತದೆ ತಂಡ.

ಗೋಲ್ಡ್ ವೋಚರ್ ಸ್ಪರ್ಧೆ : “ನಾನು ನನ್ನ ಕನಸು” ಧಾರಾವಾಹಿಯ ವೀಕ್ಷಕರಿಗೆ ಸುವರ್ಣ ಅವಕಾಶವನ್ನು ಉದಯ ಟಿವಿ ಇದೇ ಆಗಸ್ಟ್ 5ರಿಂದ 9ರವರೆಗೆ “ಗೋಲ್ಡ್ ವೋಚರ್’ ಸ್ಪರ್ಧೆಯ ಮುಖಾಂತರ ಏರ್ಪಡಿಸಿದೆ. ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ಧಾರಾವಾಹಿಯನ್ನು ವೀಕ್ಷಿಸಿ ಕೇಳುವ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನು ನೀಡಿ ಬಹುಮಾನವನ್ನು ಗೆಲ್ಲಬಹುದು.

ಒಟ್ಟಾರೆ ಕನ್ನಡ ಕಿರುತೆರೆಯಲ್ಲಿ “ನಾನು ನನ್ನ ಕನಸು” ಧಾರಾವಾಹಿಯು ನೋಡುಗರ ಮನಸೆಳೆದು ಮನರಂಜಿಸುವುದಕ್ಕೆ ಕಾತುರವಾಗಿದೆ. ಇದೇ ಆಗಸ್ಟ್ 5 ರಿಂದ, ಸೋಮವಾರದಿಂದ ಶುಕ್ರವಾರ ರಾತ್ರಿ 8 ಗಂಟೆಗೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.

Spread the love

Continue Reading
Click to comment

Leave a Reply

Your email address will not be published. Required fields are marked *

Cinema News

“ರಾಣ” ಟೀಸರ್ ಬಿಡುಗಡೆ ಮಾಡಿದ ರಿಯಲ್ ಸ್ಟಾರ್ ಉಪೇಂದ್ರ

Published

on

By

ರಿಯಲ್ ಸ್ಟಾರ್ ಉಪೇಂದ್ರ ಅವರು ಶ್ರೇಯಸ್ಸ್ ಕೆ ಮಂಜು ಅಭಿನಯದ “ರಾಣ” ಚಿತ್ರದ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆ ಮಾಡಿದರು.

ಶ್ರೇಯಸ್ಸ್ ಹೆಸರಿನಲ್ಲೇ ಶ್ರೇಯಸ್ಸು ಇದೆ. ಅವನ ಮಾತು ಕೇಳಿ ಸಂತೋಷವಾಯಿತು. ತಂದೆಯನ್ನು ಮೀರಿಸಿದ ಮಗ ಶ್ರೇಯಸ್ಸ್. ಅವನಿಗೆ ಹಾಗೂ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಉಪೇಂದ್ರ ಹರಸಿದರು. ಕಂಪ್ಲಿ ಶಾಸಕರಾದ J.N ಗಣೇಶ್ ಅವರು ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಟೀಸರ್ ಗೆ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಟೀಸರ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

ಚಿತ್ರೀಕರಣ ಬಹುತೇಕ ಮುಗಿದಿದೆ. ಕೋವಿಡ್ ನಿಯಮಾವಳಿಗಳು ಜಾರಿಯಿರುವುದರಿಂದ ಕೆಲವು ಜಾಗಗಳಲ್ಲಿ ಚಿತ್ರೀಕರಣ ನಡೆಸಲು ಅನುಮತಿ ಸಿಕ್ಕಿದ್ದು ತಡವಾಯಿತು. ಇಲ್ಲದಿದ್ದರೆ, ನಮ್ಮ ಚಿತ್ರ ಈ ವೇಳೆಗೆ ಸಿದ್ದವಿರುತ್ತಿತ್ತು. ಚಿತ್ರ ಉತ್ತಮವಾಗಿ ಬರಲು ಸಹಕರಿಸುತ್ತಿರುವ ಚಿತ್ರತಂಡದ ಸದಸ್ಯರಿಗೆ ನನ್ನ ಧನ್ಯವಾದ ಎಂದರು ನಿರ್ದೇಶಕ ನಂದಕಿಶೋರ್‌ .

ಚಿತ್ರದ ಹಾಡುಗಳು ಚೆನ್ನಾಗಿದೆ. ಹಾಡುಗಳ ವಿಡಿಯೋ ಯಾವಾಗ ಬರುವುದೋ ಎಂದು ಕಾತುರದಿಂದ ಕಾಯುತ್ತಿದ್ದೇನೆ.. ಚಿತ್ರತಂಡಕ್ಕೆ ಹಾಗೂ ಆಡಿಯೋ ಹಕ್ಕು ಪಡೆದಿರುವ ಆನಂದ್ ಆಡಿಯೋ ಸಂಸ್ಥೆಗೆ ಧನ್ಯವಾದ ತಿಳಿಸಿದರು ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ.

ನಾನು ಚಿಕ್ಕ ವಯಸ್ಸಿನಿಂದಲೂ ಉಪೇಂದ್ರ ಅವರ ಹುಚ್ಚು ಅಭಿಮಾನಿ. ನಾನು ಅವರಿಂದ ಕಲತಿರುವುದು ಸಾಕಷ್ಟು. ಚಿತ್ರರಂಗಕ್ಕೆ ಹೊಸದಾಗಿ ಬರುತ್ತಿರುವ ನೂತನ ಪ್ರತಿಭೆಗಳಿಗೆ ಅವರು ನೀಡುವ ಪ್ರೋತ್ಸಾಹಕ್ಕೆ ಚಿರ ಋಣಿ. ಶಿವರಾಜಕುಮಾರ್ ಅವರು ಸಹ ನನಗೆ ಈ ಚಿತ್ರದಲ್ಲಿ ಲಾಂಗ್ ಹಿಡಿಯುವುದನ್ನು ಹೇಳಿಕೊಟ್ಟಿದ್ದಾರೆ. ನಾನು ಏನಾದರೂ ಉತ್ತಮವಾಗಿ ನಟಿಸಿದ್ದೇನೆಂದರೆ ಅದಕ್ಕೆ ಕಾರಣ ನಿರ್ದೇಶಕ ನಂದಕಿಶೋರ್ ಹಾಗೂ ಛಾಯಾಗ್ರಹಕ ಛಾಯಾಗ್ರಹಕ ಶೇಖರ್ ಚಂದ್ರ. ಹಿರಿಯ ಕಲಾವಿದರಿಗೆ, ನಿರ್ಮಾಪಕರಿಗೆ, ನನ್ನ ಅಪ್ಪ ಕೆ.ಮಂಜು ಅವರಿಗೆ ಹಾಗೂ ಇಡೀ ತಂಡಕ್ಕೆ ನಾಯಕ ಶ್ರೇಯಸ್ಸ್ ವಿಶೇಷ ಧನ್ಯವಾದ ತಿಳಿಸಿದರು.

ನಾನು ಚಿತ್ರ ನಿರ್ಮಾಣ ಮಾಡಲು ಪ್ರಮುಖ ಕಾರಣ ಕೆ.ಮಂಜು. ಅವರಿಗೆ ನಾನು ಆಭಾರಿ. ಚಿತ್ರ ಉತ್ತಮವಾಗಿ ಮೂಡಿ ಬರಲು ಇಡೀ ತಂಡ ಸಾಕಷ್ಟು ಶ್ರಮಿಸುತ್ತಿದೆ. ನಿಮ್ನೆಲ್ಲರ ಹಾರೈಕೆ ನಮಗಿರಲಿ ಎಂದರು ನಿರ್ಮಾಪಕ ಗುಜ್ಜಲ್ ಪುರುಷೋತ್ತಮ್.

ನಿರ್ಮಾಪಕ ಪುರುಷೋತ್ತಮ್ ನನಗೆ ಒಳ್ಳೆಯ ಸ್ನೇಹಿತರು. ಈ ಚಿತ್ರವನ್ನು ನನ್ನದೇ ನಿರ್ಮಾಣದ ಚಿತ್ರದ ತರಹ ನಿಂತು ಎಲ್ಲವನ್ನೂ ನೋಡಿಕೊಳ್ಳುತ್ತಿದ್ದೇನೆ. ಉಪೇಂದ್ರ‌ ಅವರು ಮುಹೂರ್ತ ದಿನದಂದು ಬಂದು ಶುಭ ಹಾರೈಸಿದ್ದರು. ಟೀಸರ್ ಸಹ ಅವರಿಂದಲೇ ಬಿಡುಗಡೆ ಮಾಡಿಸಬೇಕು ಎನ್ನುವ ಆಸೆಯಿತ್ತು. ಬಿಡುಗಡೆ ಮಾಡಿ ಕೊಟ್ಟಿದ್ದಾರೆ. ಉಪೇಂದ್ರ ಅವರಿಗೆ ತುಂಬು ಹೃದಯದ ಧನ್ಯವಾದ. ನನ್ನ ಮಗ ಶ್ರೇಯಸ್ಸ್, ನಿರ್ದೇಶಕ ನಂದಕಿಶೋರ್ ಸೇರಿದಂತೆ ಇಡೀ ಚಿತ್ರತಂಡದ ಸದಸ್ಯರಿಗೆ ಒಳ್ಳೆಯದಾಗಲಿ ಎಂದರು ನಿರ್ಮಾಪಕ ಕೆ.ಮಂಜು.

ನಾಯಕಿಯರಾದ ರೀಷ್ಮಾ ನಾಣಯ್ಯ, ರಜನಿ ಭಾರದ್ವಾಜ್, ಛಾಯಾಗ್ರಹಕ ಶೇಖರ್ ಚಂದ್ರ, ಆನಂದ್ ಆಡಿಯೋ ಶ್ಯಾಮ್ ಅವರು ಚಿತ್ರದ ಬಗ್ಗೆ ಮಾತನಾಡಿದ್ದರು. ನಿರ್ಮಾಪಕರಾದ ರಮೇಶ್ ರೆಡ್ಡಿ ಅವರು ಸೇರಿದಂತೆ ಅನೇಕ ಗಣ್ಯರು ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಈ ಚಿತ್ರದಲ್ಲಿ ಶ್ರೇಯಸ್ಸ್ ಗೆ ನಾಯಕಿಯರಾಗಿ‌ ರೀಷ್ಮಾ ನಾಣಯ್ಯ ಹಾಗೂ ರಜನಿ ಭಾರದ್ವಾಜ್ ನಟಿಸುತ್ತಿದ್ದಾರೆ.

ಕೆ ಮಂಜು ಅರ್ಪಿಸುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಸಂಕಲನವಿದೆ. ವಿಶ್ವ ಕಲಾ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನವಿರುವ “ರಾಣ” ಚಿತ್ರಕ್ಕೆ ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿದ್ದಾರೆ‌.

Spread the love
Continue Reading

Cinema News

Megastar Chiranjeevi’s Vintage Look For his 154th film in collaboration with Bobby and Mythri Movie Makers

Published

on

By

Megastar Chiranjeevi’s 154th film under the direction of Bobby was announced officially yesterday with a picture that hinted the film’s story is set in the backdrop of sea. The makers have unveiled another poster on Chiranjeevi’s birthday that presents Chiranjeevi in a mass avatar.

Sporting red towel, smoking a beedi, lungi-clad Chiranjeevi looks oora mass in the poster, as he carries an anchor standing on a ship. The flag shows the image of Chiranjeevi’s favorite god- Hanuman. Chiranjeevi is shown as rising sun, as the sun is just about to rise in the poster.

Few men are seen around the ship and they are about to go for fishing in sea. The look of Chiranjeevi reminds us of his vintage look in Mutha Mestri, Gharana Mogudu, Rowdy Alludu etc. Poonakalu Loading is the right word to describe the poster and Chiru’s look.

A die-hard fan of Chiranjeevi, Bobby has penned a powerful script for the megastar and it will be made on grand scale by the most happening production house Mythri Movie Makers.

#Mega154 will have music by Rockstar Devi Sri Prasad who provided several chartbuster albums to Chiranjeevi. Naveen Yerneni and Y Ravi Shankar are producing the film, while GK Mohan is the co-producer.

CAST & CREW DETAILS

Cast: Chiranjeevi

Technical Crew:
Director: KS Ravindra (Bobby)
Producers: Naveen Yerneni and Y Ravi Shankar
Banner: Mythri Movie Makers
Co-Producer: GK Mohan
Music Director: Devi Sri Prasad
PRO: Vamsi-Shekar

Spread the love
Continue Reading

News

ಆಗಷ್ಟ್‌ 23 ರಿಂದ ಉದಯ ಟಿವಿಯಲ್ಲಿ 2 ಹೊಸ ಧಾರಾವಾಹಿಗಳು

Published

on

By

ಕೌತುಕಗಳೊಂದಿಗೆ ಸೃಜನಾತ್ಮಕ ಧಾರಾವಾಹಿಗಳನ್ನನೀಡುತ್ತ ಬಂದಿರೋ ಉದಯ ಟಿವಿ, ಡ್ರಾಮಾ , ಆಕ್ಷನ್‌ , ಹಾರರ್‌ ಹೀಗೆ ಎಲ್ಲಾ ಬಗೆಯ ಕಾರ್ಯಕ್ರಮಗಳನ್ನ ನೀಡಿ ವೀಕ್ಷಕರನ್ನು ರಂಜಿಸುತ್ತಿದೆ. ಹೊಸ ಪ್ರಯತ್ನಗಳ ಮೂಲಕ ಜನರ ಮನಗೆದ್ದಿರೋ ಈ ವಾಹಿನಿ ಇದೀಗ ಮತ್ತೆ ಹೊಸ ೨ ಧಾರಾವಾಹಿಗಳನ್ನು ನೀಡಲು ಸಜ್ಜಾಗಿದೆ.

ಕಾದಂಬರಿ: ಸೋಮವಾರದಿಂದ ಶನಿವಾರ ಮಧ್ಯಾಹ್ನ ೨ಗಂಟೆಗೆ

ಶ್ರೀ ದುರ್ಗಾ ಕ್ರೀಯೇಷನ್ಸ್‌ ವಿಭಿನ್ನ ಕಥಾಹಂದರವುಳ್ಳ “ಕಾದಂಬರಿ” ಎಂಬ ಧಾರಾವಾಹಿಯನ್ನು ಪ್ರೇಕ್ಷಕರೆದುರಿಡಲು ಸಿದ್ಧವಾಗಿದೆ.
“ಕಾದಂಬರಿ” ಒಂದು ಕೆಳಮಧ್ಯಮ ವರ್ಗದ ಹುಡುಗಿ. ಹೊರದೇಶಕ್ಕೆ ತೆರಳಿ ದುಡಿದು ಬರುವುದಾಗಿ ಎಂದು ಹೇಳಿ ಹೋದ ಅಪ್ಪನ ಸುಳಿವಿಲ್ಲ. ಇದ್ದೊಬ್ಬ ಪ್ರೀತಿಯ ಅಣ್ಣ ಜೀವನದಲ್ಲಿ ಸೋತು ಸರಾಯಿಯ ಸೆರೆಯಾಗಿದ್ದಾನೆ. ಹೀಗಿರುವಾಗ ತುಂಬು ಕುಟುಂಬಕ್ಕೆ ಆಧಾರವಾಗಿ ಇವಳೊಬ್ಬಳದೇ ದುಡಿಮೆ. ಮನೆಯನ್ನು ನೀಯಂತ್ರಿಸಲು ಹಗಲಿರುಳು ಗಾರ್ಮೆಂಟ್‌ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಾಳೆ. ಇವಳ ಶ್ರದ್ಧೆ, ಪರಿಶ್ರಮ ಕಂಡು ಇವಳ ಬಾಸ್‌ ಸುದರ್ಶನ್‌ ಚಕ್ರವರ್ತಿಗೆ ಇವಳ ಮೇಲೆ ಅಭಿಮಾನ, ಅಪಾರ ನಂಬಿಕೆ.

ಮನೆ ಮಗನಂತೆ ದುಡಿತಿರೋ ಕಾದಂಬರಿಗೆ ತನ್ನದೇ ಪುಟ್ಟ ಕನಸಿನ ಗೂಡಿದೆ. ಈಗಿನ ಕಾಲದ ಹುಡಿಗಿಯರಿಗೆಲ್ಲಾ ಬಣ್ಣ-ಬಣ್ಣದ ಕನಸುಗಳಿದ್ದರೆ, ಇವಳಿಗೊಂದೇ ಆಸೆ. ಇವಳ ಮನಸನ್ನ ಅರ್ಥ ಮಾಡಿಕೊಳ್ಳೋ ಒಬ್ಬ ಸಂಗಾತಿಯ ಕೈಹಿಡಿದು, ೨ ಮುದ್ದಾದ ಮಕ್ಕಳನ್ನು ಹೆತ್ತು ಗೃಹಿಣಿಯಾಗಿ ಸಂಸಾರ ತೂಗಿಸಬೇಕು ಅಂತ. ಆದರೆ ಬೆನ್ನೇರಿರೋ ಮನೆ ಜವಾಬ್ದಾರಿ ಇವಳ ಕನಸನ್ನು ನನಸು ಮಾಡುತ್ತಾ? ಎಂಬುದು ಈ ಧಾರಾವಾಹಿಯ ಸಾರಾಂಶ.
“ಎಲ್ಲಾ ಧಾರಾವಾಹಿಗಳಲ್ಲಿ ತೋರಿಸೋ ದ್ವೇಷ ಅಸೂಯೆಗಳ ಕಿತ್ತಾಟವಿಲ್ಲದೆ, ಮಮತೆಗೆ ಕರಗೋ ಮಿಡ್ಲ್‌ ಕ್ಲಾಸ್‌ ಫ್ಯಾಮಿಲಿಯ ಹೈಕ್ಲಾಸ್‌ ಕಥೆ ಇದಾಗಿದೆ” ಎಂದು ಎನ್ನುತ್ತಾರೆ ನಿರ್ದೇಶಕ ದರ್ಶಿತ್‌ ಭಟ್.

ಪ್ರಸಿದ್ಧ ಧಾರಾವಾಹಿಗಳನ್ನು ನೀಡಿರುವ ಗಣಪತಿ ಭಟ್‌ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಸುನಾದ್‌ ಗೌತಮ್ ಸಂಗೀತ ಸಂಯೋಜನೆ, ಕೃಷ್ಣ ಕಂಚನಹಳ್ಳಿಯವರ ಛಾಯಾಗ್ರಹಣ, ಗಿರೀಶ್‌ ಚಿತ್ರಕಥೆ ಮತ್ತು ತುರುವೆಕೆರೆ ಪ್ರಸಾದ್‌ ಸಂಭಾಷಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ.
ನಾಯಕಿಯಾಗಿ ಪವಿತ್ರ ನಾಯಕ್ ಮತ್ತು ನಾಯಕನಾಗಿ ರಕ್ಷಿತ್‌ ನಟಿಸುತ್ತಿದ್ದಾರೆ. ನಾಗೇಂದ್ರ ಶಾ, ಮಾಲತಿ ಸರ್ ದೇಶಪಾಂಡೆ, ಸುರೇಶ್ ರೈ, ಗಾಯಿತ್ರಿ ಪ್ರಭಾಕರ್, ಪ್ರಥಮಾ ರಾವ್, ನಿರಂಜನ್, ಶ್ವೇತಾ, ಪ್ರಗತಿ, ಅರ್ಪಿತ, ಪೃಥ್ವಿ ಯುವಸಾಗರ್, ಲಿಖಿತ, ಅಶೋಕ್ ಬಿ.ಎ, ರಾಧಿಕಾ ಶೆಟ್ಟಿ, ಆನಂದ್ ಹೀಗೆ ಹಲವಾರು ಕಲಾವಿದರನ್ನು ಒಳಗೊಂಡಿದೆ ಈ ಧಾರಾವಾಹಿ.
“ಕಾದಂಬರಿ”ಇದೇ ೨೩ರಿಂದ ಸೊಮವಾರದಿಂದ ಶನಿವಾರ ಮದ್ಯಾಹ್ನ ೨ಗಂಟೆಗೆ ಉದಯಟಿವಿಯಲ್ಲಿ ಪ್ರಸಾರವಾಗಲಿದೆ.

ನಿನ್ನಿಂದಲೇ : ಸೋಮವಾರದಿಂದ ಶನಿವಾರ ಮಧ್ಯಾಹ್ನ ೨.೩೦ಕ್ಕೆ :

ಪ್ರಖ್ಯಾತ ನಟ , ರಾಜೇಶ ನಟರಂಗ ನಿರ್ಮಾಣದಲ್ಲಿ ತಯಾರಾಗುತ್ತಿದೆ ನಿನ್ನಿಂದಲೇ ಧಾರಾವಾಹಿ. ಇದೊಂದು ಪ್ರೇಮ ಕಥೆ. ಸುಮಧುರ ಸ್ನೇಹಕ್ಕೆ ಪ್ರೀತಿಯ ಕರೆಯೋಲೆ ಈ ನಿನ್ನಿಂದಲೇ. ಧ್ವನಿ ಕ್ರಿಯೇ಼ಷನ್ಸ್‌ ಲಾಂಚನದಲ್ಲಿ ಮೊದಲ ಬಾರಿಗೆ ನಿರ್ಮಾಣಕ್ಕೆ ಕೈ ಹಾಕುತಿರೋ ರಾಜೇಶ , ಈ ಪ್ರೇಮ ಕಥೆಯಲ್ಲಿ ಸಾಕಷ್ಟು ಕೌಟುಂಬಿಕ ಆಂಶಗಳನ್ನ ಸೇರಿಸಿದ್ದಾರೆ.

ರಾಜಲಕ್ಷ್ಮಿಯ ದೊಡ್ಡ ಕುಟುಂಬ , ಅಳಿಯನ ಮನೆಯವರ ಜೊತೆಗೆ ಆದ ಮನಸ್ತಾಪದಿಂದ , ಎರಡು ಕುಟುಂಬ ದೂರವಿರುತ್ತೆ . ಈ ಸಂಬಂದಗಳನ್ನ ಒಂದು ಮಾಡೋಕೆ ಇರೋ ದಾರಿ ತನ್ನ ಮೊಮ್ಮಕಳಾದ ಅನನ್ಯ ಮತ್ತು ವರು಼ಣ್‌ನ ಮದುವೆ. ನಾಯಕಿಯಾಗಿರೊ ಅನನ್ಯಾಳಿಗೆ ನಾಯಕ ವರುಣ್‌ ಅಂದ್ರೆ ಪಂಚಪ್ರಾಣ , ಈ ಪವಿತ್ರ ಸ್ನೇಹದಲ್ಲಿ ಪ್ರೀತಿಯ ಅಲೆ ಹೊಮ್ಮಲಿದೆಯಾ? ಎಂಬುದು ಈ ಧಾರಾವಾಹಿಯ ಸಾರಾಂಶ.
ಶರತ್‌ ಪರ್ವತವಾಣಿಯವರ ಕಥೆಗೆ , ವಿನೋದ್‌ ಸಂಭಾಷಣೆ ಬರೆಯುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿಯನ್ನ ದಿಲೀಪ್‌ ಹೊತ್ತಿದ್ದಾರೆ. ನಾಯಕಿಯಾಗಿ ಚಿತ್ರಶ್ರಿ ಮತ್ತು ನಾಯಕನ ಪಾತ್ರದಲ್ಲಿ ದೀಪಕ್‌ ಬಣ್ಣ ಹಚ್ಚುತ್ತಿದ್ದಾರೆ., ಇವರ ಜೊತೆಗೆ ನಟಿ ಜಯಶ್ರಿ , ಲಲಿತಾಂಜಲಿ , ನಮಿತಾ ದೇಸಾಯಿ , ಪ್ರಶಾಂತ್‌ , ನಂದೀಶ , ಶೋಭಿತಾ ಮುಖ್ಯ ಪಾತ್ರಗಳನ್ನ ವಹಿಸಿದ್ದಾರೆ.

ನಿನ್ನಿಂದಲೇ ಹಾಡಿಗೆ ಸಾಹಿತ್ಯ ಬರೆದಿರುವುದು ಸಾಹಿತಿ ಜಯಂತ್‌ ಕಾಯ್ಕಿಣಿ. ಸಂಗೀತ ಸಂಯೋಜನೆ ಮಾಡಿರಿವುದು ವಸಂತ್‌ ದನಿಯಾಗಿರೋದು ಮಾನಸ ಹೊಲ್ಲಾ.
“ನಿನ್ನಿಂದಲೇ”ಇದೇ ೨೩ರಿಂದ ಸೊಮವಾರದಿಂದ ಶನಿವಾರ ಮದ್ಯಾಹ್ನ ೨.೩೦ಕ್ಕೆ ಉದಯಟಿವಿಯಲ್ಲಿ ಪ್ರಸಾರವಾಗಲಿದೆ.

Spread the love
Continue Reading

Cinema News

ರಾಜೀವ್ ನಟನೆಯ “ಉಸಿರೇ ಉಸಿರೇ” ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ ಬಾದ್ ಶಾ ಕಿಚ್ಚ ಸುದೀಪ

Published

on

By

ಬಿಗ್ ಬಾಸ್ ನಲ್ಲಿ ಭಾಗವಹಿಸಿ ಜನಮಸೂರೆಗಂಡಿದ್ದ ರಾಜೀವ್”ಉಸಿರೇ ಉಸಿರೇ” ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು.

ಬಾದ್ ಶಾ ಕಿಚ್ಚ ಸುದೀಪ ‌ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದರು.

ನಾನು ಈ ಸಮಾರಂಭಕ್ಕೆ ಬರಲು ಮುಖ್ಯ ಕಾರಣ ರಾಜೀವ. ಅವನಲ್ಲಿ ಈಗಲೂ ಏನೋ ಒಂಥರ ಮುಗ್ಧತೆ ಇದೆ. ಯಾವುದನ್ನು ಬೇಗ ನಂಬಿ ಬಿಡುತ್ತಾನೆ. ಪುಣ್ಯ. ಅವನ ಪಕ್ಕದಲ್ಲಿರುವ ಹೆಂಡತಿ ಜಾಣೆ. ಆ ಹುಡುಗಿ ಇವನಿಗೆ ಎಲ್ಲವನ್ನೂ ಹೇಳಿ ಕೊಡುತ್ತಿದ್ದಾರೆ. ಸಿ.ಸಿ.ಎಲ್ ದಿನಗಳಿಂದಲೂ ನನಗೆ ಈತ ಪರಿಚಯ. ಅವನು ಕ್ರಿಕೆಟ್ ಸರಿಯಾಗಿ ಅಭ್ಯಾಸ ಮಾಡಿದ್ದರೆ, ಇಷ್ಟೊತ್ತಿಗೆ ರಾಜ್ಯ ಮಟ್ಟದಲ್ಲಿ ಆಡುತ್ತದ್ದ. ಈ ಸಿನಿಮಾದಿಂದ ರಾಜೀವ್ ಗೆ ಒಳ್ಳೆದಾಗಲಿ ಎಂದ ಕಿಚ್ಚ ಸುದೀಪಇಂತಹ ಸಂದರ್ಭದಲ್ಲಿ ದೊಡ್ಡ ದೊಡ್ಡ ನಿರ್ಮಾಪಕರೇ ಚಿತ್ರ ನಿರ್ಮಾಣಕ್ಕೆ ಮುಂದಾಗುತ್ತಿಲ್ಲ. ಪ್ರದೀಪ್ ಅವರು ಈ ಸಮಯದಲ್ಲಿ ಚಿತ್ರ ನಿರ್ಮಿಸುತ್ತಿರುವುದು ತುಂಬಾ ಸಂತೋಷವಾಗಿದೆ. ಒಳ್ಳೆಯವರೆಲ್ಲಾ ಸೇರಿ ಮಾಡುವ ಕೆಲಸ ಒಳ್ಳೇಯದೇ ಆಗಿರುತ್ತದೆ ಎಂದು ಹಾರೈಸಿದ ಸುದೀಪ್, ತಮಗೆ ಚಿತ್ರತಂಡ ಉಡುಗೊರೆಯಾಗಿ ನೀಡಿದ ಬೆಳ್ಳಿ ಪೆನ್ನನ್ನು ನಿರ್ದೇಶಕರಿಗೆ ನೀಡಿ, ನಿಮ್ಮ ಮಾತುಗಳು ತುಂಬಾ ಚೆನ್ನಾಗಿತ್ತು, ನಿಮ್ಮ ಮುಂದಿನ ಕೆಲಸಗಳೆಲ್ಲಾ ಸುಲಲಿತವಾಗಿ ನಡೆಯಲಿ ಎಂದು ಹಾರೈಸಿದರು.

ನಾನು ಈ ತನಕ ಕೆಲವು ಚಿತ್ರಗಳಲ್ಲಿ ನಿಟಿಸಿದ್ದರೂ, ಇಂತಹ ವೇದಿಕೆ ಸಿಗಲು 10 ವರ್ಷ ಬೇಕಾಯಿತು. ಈ ಅವಕಾಶ ಮಾಡಿಕೊಟ್ಟ ನಿರ್ಮಾಪಕ, ನಿರ್ದೇಶಕರಿಗೆ ಧನ್ಯವಾದ ಎಂದು ಮಾತು ಆರಂಭಿಸಿದ ರಾಜೀವ್, ಮೋಷನ್ ಪೋಸ್ಟರ್ ಬಿಡುಗಡೆಗೆ ಆಗಮಿಸಿರುವ ಸುದೀಪ್ ಅವರಿಗೆ ವಿಶೇಷ ಧನ್ಯವಾದ ತಿಳಿಸಿದರು .

ನಾನು ಸುದೀಪ್ ಸರ್ ಜೊತೆ ಕಾರಿನಲ್ಲಿ ಬರುತ್ತಿದ್ದಾಗ, ಅವರ ನಟನೆಯ ಚಿತ್ರದ “ಉಸಿರೇ ಉಸಿರೇ” ಹಾಡು ಕೇಳಿದ್ದೆ. ನನಗೆ ಈ ಚಿತ್ರದ ಗೊತ್ತಿದ್ದರಿಂದ ನಿರ್ದೇಶಕರಿಗೆ ಫೋನ್ ಮಾಡಿ ನಮ್ಮ ಚಿತ್ರಕ್ಕೆ ಇದೇ ಶೀರ್ಷಿಕೆ ಇಡೋಣ. ಈಗಲೇ ನೊಂದಾಯಿಸಿ ಎಂದು ಹೇಳಿದೆ. ಚಿತ್ರಕ್ಕಾಗಿ ನಾನು ಹೆಚ್ಚು ವರ್ಕ್ ಔಟ್ ಏನು ಮಾಡಿಲ್ಲ. ಸಹಜವಾಗಿರುವ ಪಾತ್ರ. ನಮ್ಮ ನಾಲ್ಕುವರ್ಷಗಳ ಶ್ರಮಕ್ಕೆ ಈಗ ಉತ್ತಮ ಕಾಲ ಕೂಡಿ ಬಂದಿದೆ.‌ ಎಲ್ಲರ ಹಾರೈಕೆಯು ನಮಗಿರಲಿ ಎಂದರು ರಾಜೀವ್.

ಇದು ನನ್ನ‌ ಅಕ್ಷರಗಳು ಅನ್ನವಾಗುತ್ತಿರುವ ಸಮಯ. ಇದೊಂದು ಪಕ್ಕಾ ಪ್ರೇಮಕಥೆ.‌ ಇಲ್ಲಿಯವರೆಗೂ ಅನೇಕ ಪ್ರೇಮಕಥೆಯುಳ್ಳ ಚಿತ್ರಗಳು ಬಂದಿವೆಯಾದರೂ ಇದು ವಿಭಿನ್ನ.

ಅಮರಪ್ರೇಮಿಗಳು ಎಂದರೆ ಎಲ್ಲರೂ ರೋಮಿಯೋ – ಜೂಲಿಯಟ್, ಸಲೀಂ – ಅನಾರ್ಕಲಿ ಅನ್ನುತ್ತಾರೆ. ಈ ಚಿತ್ರ ನೋಡಿದ ಮೇಲೆ ಪ್ರೇಕ್ಷಕರು ನಮ್ಮ ಕಥಾನಾಯಕ – ನಾಯಕಿಯನ್ನು ಈ ಸಾಲಿಗೆ‌ ಸೇರಿಸಬಹುದು ಎಂದ ನಿರ್ದೇಶಕ ಸಿ.ಎಂ.ವಿಜಯ್ ಸೆಪ್ಟೆಂಬರ್ ಅಂತ್ಯದಲ್ಲಿ ಚಿತ್ರೀಕರಣ ಆರಂಭಿಸುವುದಾಗಿ ಹೇಳಿದ್ದಾರೆ.

ಎನ್ ಗೊಂಬೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಈ ಚಿತ್ರ‌ ನಿರ್ಮಾಣ ಮಾಡುತ್ತಿರುವ ನಿರ್ಮಾಪಕ ಪ್ರದೀಪ್ ಯಾದವ್ ಮಾತನಾಡಿ, ನಾನು ಅನೇಕ‌ ಕಥೆಗಳನ್ನು ಕೇಳಿದ್ದೀನಿ. ರಾಜೀವ್ ಹಾಗೂ ವಿಜಯ್ ಬಂದು ಹೇಳಿದ ಈ ಕಥೆ ನನ್ನ ಹೃದಯಕ್ಕೆ ಹತ್ತಿರವಾಯಿತು. ಹಾಗಾಗಿ ಚಿತ್ರ‌ ನಿರ್ಮಾಣಕ್ಕೆ ಮುಂದಾದೆ ಎಂದರು.

ರಾಜೀವ್ ಗೆ ನಾಯಕಿಯಾಗಿ ಶ್ರೀಜಿತ ಘೋಷ್ ನಟಿಸುತ್ತಿದ್ದು, ಅವರು ಸಹ ತಮ್ಮ ಪಾತ್ರದ ಬಗ್ಗೆ ಮೆಚ್ಚುಗೆ ಮಾತನಾಡಿದರು.‌ ಬೇರೆ ಭಾಷೆಯ ಚಿತ್ರಗಳಲ್ಲಿ ನಟಿಸಿರುವ ಶ್ರೀಜಿತ ಅವರಿಗೆ ಕನ್ನಡದಲ್ಲಿ ಇದು ಚೊಚ್ಚಲ ಚಿತ್ರ.

ಖ್ಯಾತ ನಟ ಅಲಿ ಅವರು ಸಹ ಚಿತ್ರದ ಕಥೆ ಇಷ್ಟವಾಯಿತು. ಹಾಗಾಗಿ ನಟಿಸಲು ಒಪ್ಪಕೊಂಡೆ. ಒಳ್ಳೆಯ ತಂಡದೊಂದಿಗೆ ಕೆಲಸ ಮಾಡುತ್ತಿರುವ ಖುಷಿ ಇದೆ ಎಂದರು. 83ನೇ ಇಸವಿಯಲ್ಲಿ ಅಂಬರೀಶ್ ಅವರ ಏಕಲವ್ಯ ಚಿತ್ರದಲ್ಲಿ ನಟಿಸಿದ್ದ ದಿನಗಳನ್ನು ಅಲಿ ನೆನಪಿಸಿಕೊಂಡರು.

ಸುಮಧುರ ಹಾಡುಗಳಿರುವ ಈ ಚಿತ್ರಕ್ಕೆ ವಿವೇಕ್ ಚಕ್ರವರ್ತಿ ಸಂಗೀತ ನೀಡುತ್ತಿದ್ದಾರೆ. ಸರವಣನ್ ಛಾಯಾಗ್ರಹಣ ಮಾಡುತ್ತಿದ್ದಾರೆ. 

Spread the love
Continue Reading

News

ಮತ್ತೆ ಬರುತ್ತಿದೆ “ಎದೆ ತುಂಬಿ ಹಾಡುವೆನು”

Published

on

By

ಗಾನ ಗಾರುಡಿಗ ದಿ||ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಕಳೆದ ಕೆಲವು ವರ್ಷಗಳ ಹಿಂದೆ ನಡೆಸಿಕೊಡುತ್ತಿದ್ದ ಜನಪ್ರಿಯ ಕಾರ್ಯಕ್ರಮ ” ಎದೆ ತುಂಬಿ ಹಾಡುವೆನು”.

ಈಗ ಈ ಜನಪ್ರಿಯ ಕಾರ್ಯಕ್ರಮ ಮತ್ತೆ ಆರಂಭವಾಗಲಿದೆ ಎಸ್ ಪಿ ಬಿ ಅವರ ನೆನಪಿನಲ್ಲಿ.
ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಲರ್ಸ್ ಕನ್ನಡದ ಮುಖ್ಯಸ್ಥ ಪರಮೇಶ್ವರ ಗುಂಡ್ಕಲ್ ನೀಡಿದರು.
ನಾನು ಮೂರುವರ್ಷಗಳ ಹಿಂದೆ ಚೆನ್ನೈ ನಲ್ಲಿ ಎಸ್ ಪಿ ಬಿ ಅವರನ್ನು ಭೇಟಿ ಮಾಡಿ, “ಎದೆ ತುಂಬಿ ಹಾಡುವೆನು” ಕಾರ್ಯಕ್ರಮ ಪುನಃ ಆರಂಭಿಸೋಣ ಎಂದು ಕೇಳಿದ್ದೆ. ಆಗ ಅವರು ನನ್ನ ಶೆಡ್ಯುಲ್ ನೋಡಿ ತಿಳಿಸುತ್ತೀನಿ ಅಂದರು. ಆನಂತರ ಅವರಿಂದ ನನಗೊಂದು ಕಾಗದ ಬಂತು. ನನ್ನ ಬೇರೆ ಕಾರ್ಯಕ್ರಮಗಳು ಈಗಾಗಲೇ ನಿಗದಿಯಾಗಿರುವುದರಿಂದ ೨೦೧೯ ರಲ್ಲಿ “ಎದೆ ತುಂಬಿ ಹಾಡುವೆನು” ಕಾರ್ಯಕ್ರಮ ಆರಂಭಿಸೋಣ ಅಂತ ಬರೆದಿದ್ದರು.

ನಂತರ ಕಾರ್ಯಕ್ರಮದ ರೂಪುರೇಷೆ ಸಿದ್ದಗೊಂಡು, ಆರಂಭ ಮಾಡೋಣ ಅಂದುಕೊಳ್ಳುತ್ತದಾಗ “ಕೊರೋನ” ಆರಂಭವಾಯಿತು. ನಂತರದ ದಿನಗಳಲ್ಲಿ ಎಸ್ ಪಿ ಬಿ ನಮ್ಮಿಂದ ದೂರವಾದರು.
ಈಗ ಅವರ ನೆನಪಲ್ಲಿ ಈ ಕಾರ್ಯಕ್ರಮ ಇದೇ ಆಗಸ್ಟ್ ೧೪ ರಿಂದ ಆರಂಭವಾಗಲಿದೆ. ರಾಜೇಶ್ ಕೃಷ್ಣನ್, ವಿ.ಹರಿಕೃಷ್ಣ ಹಾಗೂ ರಘು ದೀಕ್ಷಿತ್ ಈ ಕಾರ್ಯಕ್ರಮದ ತೀರ್ಪುಗಾರರು. ವಿಶೇಷ ತೀರ್ಪುಗಾರರಾಗಿ ಎಸ್ ಪಿ ಬಿ ಅವರ ಪುತ್ರ ಎಸ್ ಪಿ ಚರಣ್ ಇರುತ್ತಾರೆ.
ಈಗಾಗಲೇ ಆಡಿಷನ್ ಮೂಲಕ ಹದಿನಾರರಿಂದ, ಹದಿನೆಂಟು ಗಾಯಕರನ್ನು ಆಯ್ಕೆ ಮಾಡಲಾಗಿದೆ ಎಂದರು ಪರಮೇಶ್ವರ ಗುಂಡ್ಕಲ್.

ನಾನು ಚಿಕ್ಕವನಾಗಿದಾಗ ನಮ್ಮಮ್ಮ ರೆಡಿಯೋ ಹಾಕಿದ ತಕ್ಷಣ ಎಸ್ ಪಿ ಬಿ ಅವರ ಹಾಡು ಬರುತಿತ್ತು. ಆಗಿನಿಂದ ಅವರ ಕಂಠಕ್ಕೆ ಅಭಿಮಾನಿ ನಾನು. ಅಂತಹ ಮಹಾನ್ ಗಾಯಕ ನಡೆಸುಕೊಡುತ್ತಿದ್ದ ಕಾರ್ಯಕ್ರಮಕ್ಕೆ ನೀವು ತೀರ್ಪುಗಾರರಾಗಬೇಕು ಎಂದು ಪರಮೇಶ್ವರ್ ಅವರು ಹೇಳಿದಾಗ ನನ್ನ ಆನಂದಕ್ಕೆ ಪಾರವೇ ಇರಲಿಲ್ಲ ಎಂದರು ರಘು ದೀಕ್ಷಿತ್.

ಎಸ್ ಪಿ ಬಿ ಅವರ ಮಾನಸ ಪುತ್ರರೆಂದೇ ಖ್ಯಾತರಾಗಿರುವ ರಾಜೇಶ್ ಕೃಷ್ಣನ್ ಮಾತನಾಡಿ, ಈ ಕಾರ್ಯಕ್ರಮವನ್ನು ಎಸ್ ಪಿ ಬಿ ಅವರೆ ನಮ್ಮಲ್ಲಿ ನಿಂತು ನಡೆಸಿಕೊಡುತ್ತಾರೆ. ಅವರಿಂದ ನಾವು ತಿಳಿದುಕೊಂಡದ್ದನ್ನು, ಈಗಿನ ಗಾಯಕರಿಗೆ ತಿಳಿಸುವ ಪ್ರಯತ್ನ ಮಾಡುತ್ತಿದ್ದೇವೆ.
ನಾನು ಹಂಸಲೇಖ ಅವರ ಬಳಿ ಟ್ರ್ಯಾಕ್ ಹಾಡುವ ಕಾಲದಲ್ಲಿ ನಾನು ಎಸ್ ಪಿ ಬಿ ಅವರು ಇಲ್ಲಿಗೆ ಬಂದಾಗ ತುಂಬಾ ಹತ್ತಿರದಿಂದ ನೋಡಿದವನು ನಾನು ಅವರು ನೀನು ಏಕೆ ನನ್ನ ಹಾಗೆ ಹಾಡುತ್ತೀಯಾ? ಎಂದು ಕೇಳಿದ್ದು ಉಂಟು..‌ಅವರು ನನ್ನ ಮೇಲಿಟ್ಟಿದ ಪ್ರೀತಿ ಅಪಾರ. ಹೀಗೆ ಎಸ್ ಪಿ ಬಿ ಅವರೊಂದಿಗಿನ ಒಡನಾಟವನ್ನು ರಾಜೇಶ್ ಕೃಷ್ಣನ್ ನೆನಪಿಸಿಕೊಂಡರು.

ಕೆಲವು ವರ್ಷಗಳ ಹಿಂದೆ ಭಾನುವಾರ ರಾಮಾಯಣ ಹಾಗೂ ಮಹಾಭಾರತ ಎಂಬ ಎರಡು ಮಹಾನ್ ಧಾರಾವಾಹಿಗಳು ದೂರದರ್ಶನದಲ್ಲಿ ಬರುತ್ತಿದ್ದವು.‌ ಕೋಟ್ಯಾಂತರ ಜನ ಅದನ್ನು ವೀಕ್ಷಿಸುತ್ತಿದ್ದರು. ಆನಂತರ ಅಷ್ಟೇ ಜನಪ್ರಿಯವಾಗಿದ್ದು “ಎದೆ ತುಂಬಿ ಹಾಡುವೆನು”.‌ ನಾನು ಈಗ ಅವರು ನಡೆಸಿಕೊಡುತ್ತಿದ್ದ ಕಾರ್ಯಕ್ರಮದ ವಿಟಿ ನೋಡಿದಾಗ ಭಯವಾಗುತ್ತಿದೆ.
ಅಲ್ಲಿ ಬರುವ ಹೊಸ ಗಾಯಕರಿಗಿಂತ ನಾವು ತಿಳಿದುಕೊಳ್ಳುವುದು ಸಾಕಷ್ಟಿದೆ. ತೀರ್ಪುಗಾರರಾಗಿ ಎಸ್ ಪಿ ಬಿ ಅವರು ಕಾರ್ಯಕ್ರಮ ನಡೆಸಿಕೊಡುತ್ತಿದ್ದ ರೀತಿ ಅನುಕರಣೀಯ. ಅವರ ಹೆಸರಿಗೆ ತೊಂದರೆಯಾಗದಂತೆ ಕಾರ್ಯಕ್ರಮ ನಡೆಸಿಕೊಡುವುದು ನಮ್ಮ ಕರ್ತವ್ಯ ಎಂದರು ವಿ.ಹರಿಕೃಷ್ಣ.

ಅಪ್ಪನ ನೇತೃತ್ವದಲ್ಲಿ ಮೂಡಿಬರುತ್ತಿದ್ದ, ” ಎದೆ ತುಂಬಿ ಹಾಡುವೆನು” ಕಾರ್ಯಕ್ರಮವನ್ನು ಮತ್ತೆ ಆರಂಭಿಸುತ್ತಿರುವುದಕ್ಕೆ. ಕಲರ್ಸ್ ವಾಹಿನಿಗೆ ಧನ್ಯವಾದ ಎಂದರು ಎಸ್ ಪಿ ಬಿ ಪುತ್ರ ಎಸ್ ಪಿ ಚರಣ್.
ರಾಮೋಜಿರಾವ್ ಅವರು ತೆಲುಗಿನಲ್ಲಿ “ಪಾಡುತ ತಿಯಗ” ಎಂಬ ಕಾರ್ಯಕ್ರಮ ನಡೆಸುತ್ತಿದ್ದರು. ಆ‌ನಂತರ ಅಪ್ಪ ಈ ಕಾರ್ಯಕ್ರಮವನ್ನು ಕನ್ನಡದಲ್ಲಿ “ಎದೆ ತುಂಬಿ ಹಾಡುವೆನು” ಎಂಬ ಶೀರ್ಷಿಕೆಯಿಂದ ಆರಂಭಿಸಿದರು. ಕಾರ್ಯಕ್ರಮ ಅತ್ಯಂತ ಜನಪ್ರಿಯವೂ ಆಯಿತು.
ಈ ಟಿವಿ ಅವರು ಈ ಕಾರ್ಯಕ್ರಮ ನಿಲಿಸಿದಾಗ ಅಪ್ಪನಿಗೆ ಬೇಸರವಾಗಿದ್ದು ಉಂಟು. ತೆಲುಗು, ಕನ್ನಡದಲ್ಲಿ ಜನಪ್ರಿಯವಾಗಿದ್ದ ಈ ಕಾರ್ಯಕ್ರಮವನ್ನು ತಮಿಳಿನಲ್ಲಿ ಮಾಡಲಿಲ್ಲ ಎಂಬ ಕೊರಗು ಅಪ್ಪನಲ್ಲಿತ್ತು ಎಂದರು ಚರಣ್.
ನಮ್ಮ ಬಾಲ್ಯದಲ್ಲಿ ಅಪ್ಪನೊಂದಿಗೆ ಹೆಚ್ಚು ಸಮಯ ಕಳೆಯಲಿಲ್ಲ.. ಅಪ್ಪ ಯಾವಗಲೂ ಬ್ಯುಸಿ ಇರುತ್ತಿದ್ದರು.
ನನ್ನ ಕಿರಿಯ ಸಹೋದರನಂತಿರುವ ರಾಜೇಶ್ ಕೃಷ್ಣನ್ ಅಪ್ಪನೊಂದಿಗೆ ಸಾಕಷ್ಟು ಸಮಯ ಕಳೆದಿದ್ದಾರೆ ಎಂದು ಚರಣ್ ಹಿಂದಿನ ದಿನಗಳನ್ನು ಮೆಲಕು ಹಾಕಿ ಕೊಂಡರು.
ನಾನು ಆಗಾಗ ಈ ಕಾರ್ಯಕ್ರಮಕ್ಕೆ ಆಗಮಿಸುತ್ತೇನೆ ಎಂದು ತಿಳಿಸಿದ ಎಸ್ ಪಿ ಚರಣ್ ಈ ಕಾರ್ಯಕ್ರಮದ ಇಡೀ ತಂಡಕ್ಕೆ ಮತ್ತೊಮ್ಮೆ ಧನ್ಯವಾದ ತಿಳಿಸಿದರು.

Spread the love
Continue Reading

Trending News