Connect with us

Cinema News

ಸಾಯಿಕುಮಾರ್ ಪುತ್ರಿಯ ಹೊಸ ಪ್ರಾಡೆಕ್ಟ್ ಗೆ ಪುನೀತ್ ಚಾಲನೆ

Published

on

ಕನ್ನಡ, ತೆಲುಗು ಸೇರಿದಂತೆ ದಕ್ಷಿಣ ಭಾರತದ ಹಲವಾರು ಭಾಷೆಯ ಚಿತ್ರರಂಗದಲ್ಲಿ ವಿಶಿಷ್ಠ
ಅಭಿನಯ, ಮ್ಯಾನರಿಸಂ ಮೂಲಕ ಗುರ್ತಿಸಿಕೊಂಡಿರುವ ನಟ ಸಾಯಿಕುಮಾರ್  ಈಗ ತಮ್ಮ ಮಗಳು ಹಾಗೂ ಅಳಿಯ ಸೇರಿ ಆರಂಭಿಸುತ್ತಿರುವ ಹೊಸ ಉದ್ಯಮಕ್ಕೆ ಹೆಗಲಾಗಿ ನಿಂತಿದ್ದಾರೆ.

 

 

ಹೌದು, ಡೈಲಾಗ್ ಕಿಂಗ್ ಸಾಯಿಕುಮಾರ್ ಅವರ ಪುತ್ರಿ ಜ್ಯೋತಿರ್ಮಯಿ ಮೂಲತ: ಒಬ್ಬ ವೈದ್ಯೆ,
ಮಕ್ಕಳತಜ್ಞೆ. ತಮ್ಮ ಬಳಿ ಬರುವ ಹಲವಾರು ಪೋಷಕರ ಸಮಸ್ಯೆಯಲ್ಲಿ
ಮಕ್ಕಳು ಆಹಾರ ಸೇವಿಸಲು ನಿರಾಸಕ್ತಿ ತೋರಿಸುವುದು ಪ್ರಮುಖವಾಗಿರುತ್ತಿತ್ತು. ಇದನ್ನು ಮನಗಂಡ
ಡಾ.ಜ್ಯೋತಿಮಯಿ ಅವರು ತಮ್ಮ ಪತಿ ಕೃಷ್ಣ ಫಲ್ಗುಣರ ಜೊತೆ ಸೇರಿ ಮಕ್ಕಳಿಗೆ
ರುಚಿಸುವಂಥ ಪೌಷ್ಠಿಕಾಂಶ ಒಳಗೊಂಡ ಸಿದ್ದ ಆಹಾರವನ್ನು ತಯಾರಿಸಲು ನಿರ್ಧರಿಸಿದ್ದಾರೆ. ಅದರ ಫಲವೇ
ಫುಟ್‌ಸ್ಟೆಪ್ಸ್. ಮಕ್ಕಳು ಇಷ್ಟಪಡುವಂಥ ವಿವಿಧ ಟೇಸ್ಟಗಳಲ್ಲಿರುವ ಈ ದ್ರವೀಕೃತ ಸಿದ್ದ
ಆಹಾರದ ಪಾಕೆಟ್‌ಗಳ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಪಂಚತಾರಾ
ಹೋಟೆಲೊಂದರಲ್ಲಿ ನೆರವೇರಿತು. ಇದೇ ಸಂದರ್ಭದಲ್ಲಿ ಫುಡ್‌ಸ್ಟೆಪ್ಸ್ ಪ್ರಾಡೆಕ್ಟ್ ನ
ಅಧಿಕೃತ ಜಾಹೀರಾತನ್ನೂ ಸಹ ಬಿಡುಗಡೆ ಮಾಡಲಾಯಿತು.

 

 

ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಈ ಫಡ್
ಪ್ಟಾಡೆಕ್ಟ್ ಬಿಡುಗಡೆ ಮಾಡಿದರು. ನಂತರ ಅವರು ಮಾತನಾಡುತ್ತ ಈ ಥರದ
ಪ್ರಾಡಕ್ಟ ಗಳನ್ನು ಫಾರಿನ್ ಕಂಟ್ರಿಗಳಲ್ಲಿ ನೋಡುತ್ತಿದ್ದೆವು. ಈಗ ನಮ್ಮಲ್ಲಿಯೂ
ಸಹ ಬಂದಿದೆ. ಇದರಿಂದ ನಮ್ಮ ಎಲ್ಲಾ ತಾಯಂದಿರಿಗೆ ಸಹಕಾರಿಯಾಗುತ್ತದೆ,
ಸಾಯಿಕುಮಾರ್ ಅವರ ಮಗಳು ಪೀಡಿಯಾಟ್ರಿಷಿಯನ್ ಆಗಿ, ಇಂಥ ಒಂದು ಪ್ರಾಡೆಕ್ಟ್ ರೆಡಿ ಮಾಡಿದ್ದಾರೆ. ಅವರ ಕಂಪನಿ ಉತ್ತಮವಾಗಿ ಬೆಳೆಯಲಿ. ಮತ್ತೊಂದಷ್ಟು ಹೊಸ ಉತ್ಪನ್ನಗಳನ್ನು ಪರಿಚಯಿಸಲಿ, ಇದರ ಜಾಹೀರಾತನ್ನು ರವಿಶಂಕರ್ ಅವರ ಮಗ ತುಂಬಾ
ಅದ್ಭುತವಾಗಿ ಮಾಡಿದ್ದಾರೆ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಾಯಿಕುಮಾರ್
ಸಹೋದರರಾದ ನಟ ರವಿಶಂಕರ್, ಅಯ್ಯಪ್ಪ ಶರ್ಮ ಸಹ ಹಾಜರಿದ್ದರು.

Spread the love

ಕನ್ನಡ, ತೆಲುಗು ಸೇರಿದಂತೆ ದಕ್ಷಿಣ ಭಾರತದ ಹಲವಾರು ಭಾಷೆಯ ಚಿತ್ರರಂಗದಲ್ಲಿ ವಿಶಿಷ್ಠ
ಅಭಿನಯ, ಮ್ಯಾನರಿಸಂ ಮೂಲಕ ಗುರ್ತಿಸಿಕೊಂಡಿರುವ ನಟ ಸಾಯಿಕುಮಾರ್  ಈಗ ತಮ್ಮ ಮಗಳು ಹಾಗೂ ಅಳಿಯ ಸೇರಿ ಆರಂಭಿಸುತ್ತಿರುವ ಹೊಸ ಉದ್ಯಮಕ್ಕೆ ಹೆಗಲಾಗಿ ನಿಂತಿದ್ದಾರೆ.

 

 

ಹೌದು, ಡೈಲಾಗ್ ಕಿಂಗ್ ಸಾಯಿಕುಮಾರ್ ಅವರ ಪುತ್ರಿ ಜ್ಯೋತಿರ್ಮಯಿ ಮೂಲತ: ಒಬ್ಬ ವೈದ್ಯೆ,
ಮಕ್ಕಳತಜ್ಞೆ. ತಮ್ಮ ಬಳಿ ಬರುವ ಹಲವಾರು ಪೋಷಕರ ಸಮಸ್ಯೆಯಲ್ಲಿ
ಮಕ್ಕಳು ಆಹಾರ ಸೇವಿಸಲು ನಿರಾಸಕ್ತಿ ತೋರಿಸುವುದು ಪ್ರಮುಖವಾಗಿರುತ್ತಿತ್ತು. ಇದನ್ನು ಮನಗಂಡ
ಡಾ.ಜ್ಯೋತಿಮಯಿ ಅವರು ತಮ್ಮ ಪತಿ ಕೃಷ್ಣ ಫಲ್ಗುಣರ ಜೊತೆ ಸೇರಿ ಮಕ್ಕಳಿಗೆ
ರುಚಿಸುವಂಥ ಪೌಷ್ಠಿಕಾಂಶ ಒಳಗೊಂಡ ಸಿದ್ದ ಆಹಾರವನ್ನು ತಯಾರಿಸಲು ನಿರ್ಧರಿಸಿದ್ದಾರೆ. ಅದರ ಫಲವೇ
ಫುಟ್‌ಸ್ಟೆಪ್ಸ್. ಮಕ್ಕಳು ಇಷ್ಟಪಡುವಂಥ ವಿವಿಧ ಟೇಸ್ಟಗಳಲ್ಲಿರುವ ಈ ದ್ರವೀಕೃತ ಸಿದ್ದ
ಆಹಾರದ ಪಾಕೆಟ್‌ಗಳ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಪಂಚತಾರಾ
ಹೋಟೆಲೊಂದರಲ್ಲಿ ನೆರವೇರಿತು. ಇದೇ ಸಂದರ್ಭದಲ್ಲಿ ಫುಡ್‌ಸ್ಟೆಪ್ಸ್ ಪ್ರಾಡೆಕ್ಟ್ ನ
ಅಧಿಕೃತ ಜಾಹೀರಾತನ್ನೂ ಸಹ ಬಿಡುಗಡೆ ಮಾಡಲಾಯಿತು.

 

 

ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಈ ಫಡ್
ಪ್ಟಾಡೆಕ್ಟ್ ಬಿಡುಗಡೆ ಮಾಡಿದರು. ನಂತರ ಅವರು ಮಾತನಾಡುತ್ತ ಈ ಥರದ
ಪ್ರಾಡಕ್ಟ ಗಳನ್ನು ಫಾರಿನ್ ಕಂಟ್ರಿಗಳಲ್ಲಿ ನೋಡುತ್ತಿದ್ದೆವು. ಈಗ ನಮ್ಮಲ್ಲಿಯೂ
ಸಹ ಬಂದಿದೆ. ಇದರಿಂದ ನಮ್ಮ ಎಲ್ಲಾ ತಾಯಂದಿರಿಗೆ ಸಹಕಾರಿಯಾಗುತ್ತದೆ,
ಸಾಯಿಕುಮಾರ್ ಅವರ ಮಗಳು ಪೀಡಿಯಾಟ್ರಿಷಿಯನ್ ಆಗಿ, ಇಂಥ ಒಂದು ಪ್ರಾಡೆಕ್ಟ್ ರೆಡಿ ಮಾಡಿದ್ದಾರೆ. ಅವರ ಕಂಪನಿ ಉತ್ತಮವಾಗಿ ಬೆಳೆಯಲಿ. ಮತ್ತೊಂದಷ್ಟು ಹೊಸ ಉತ್ಪನ್ನಗಳನ್ನು ಪರಿಚಯಿಸಲಿ, ಇದರ ಜಾಹೀರಾತನ್ನು ರವಿಶಂಕರ್ ಅವರ ಮಗ ತುಂಬಾ
ಅದ್ಭುತವಾಗಿ ಮಾಡಿದ್ದಾರೆ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಾಯಿಕುಮಾರ್
ಸಹೋದರರಾದ ನಟ ರವಿಶಂಕರ್, ಅಯ್ಯಪ್ಪ ಶರ್ಮ ಸಹ ಹಾಜರಿದ್ದರು.

Spread the love
Continue Reading
Click to comment

Leave a Reply

Your email address will not be published. Required fields are marked *

Cinema News

“ಘೋಸ್ಟ್‌” ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣ.

Published

on

By

ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ “ಘೋಸ್ಟ್‌” ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.

 

 

 

ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸಲಾಗಿರುವ ಹದಿನೈದಕ್ಕೂ ಅಧಿಕ ಸೆಟ್ ಗಳಲ್ಲಿ 28ದಿನಗಳ ಚಿತ್ರೀಕರಣ ನಡೆದಿದೆ. ಶಿವರಾಜಕುಮಾರ್, ಜಯರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್ ಮುಂತಾದ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಮೋಹನ್ ಬಿ ಕೆರೆ ಈ ಚಿತ್ರದ ಕಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ದ್ವಿತೀಯ ಹಂತದ ಚಿತ್ರೀಕರಣ ಡಿಸೆಂಬರ್ ನಲ್ಲಿ ಮೈಸೂರಿನಲ್ಲಿ ಆರಂಭವಾಗಲಿದೆ.

 

 

ನಿರ್ದೇಶಕ ಶ್ರೀನಿ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ “ಘೋಸ್ಟ್‌ ” ಚಿತ್ರಕ್ಕಿದೆ. ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ.

 

 

 

ಶಿವರಾಜಕುಮಾರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

 

 

Spread the love
Continue Reading

Cinema News

‘ಸದ್ದು ವಿಚಾರಣೆ ನಡೆಯುತ್ತಿದೆ’ ನವೆಂಬರ್ 25ಕ್ಕೆ ರಾಜ್ಯಾದ್ಯಂತ ಬಿಡುಗಡೆ- ಭಾಸ್ಕರ್ ಆರ್ ನೀನಾಸಂ ನಿರ್ದೇಶನದ ಸಿನಿಮಾ

Published

on

By

ಎಂ. ಎಂ. ಸಿನಿಮಾಸ್ ಬ್ಯಾನರ್ ನಡಿ ಭಾಸ್ಕರ್ ಆರ್ ನೀನಾಸಂ ನಿರ್ದೇಶಿಸಿರುವ ಸದ್ದು ವಿಚಾರಣೆ ನಡೆಯುತ್ತಿದೆ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಇಂಟ್ರಸ್ಟಿಂಗ್ ಟ್ರೇಲರ್, ಚೆಂದದ ಹಾಡುಗಳ ಮೂಲಕ ಚಿತ್ರ ಪ್ರೇಮಿಗಳ ಮನಗೆದ್ದಿರುವ ಚಿತ್ರ ನವೆಂಬರ್ 25ಕ್ಕೆ ಪ್ರೇಕ್ಷಕರೆದುರು ಬರಲು ರೆಡಿಯಾಗಿದೆ.

 

 

ರಂಗಭೂಮಿ ಪ್ರತಿಭೆ ಭಾಸ್ಕರ್ ಆರ್ ನೀನಾಸಂ ನಿರ್ದೇಶನದ ಮೊದಲ ಸಿನಿಮಾವಿದು. ಚಿತ್ರಕ್ಕೆ ಅಶ್ವಿನಿ ಕೆ ಎನ್ ಕಥೆ ಬರೆದಿದ್ದು, ಭಾಸ್ಕರ್ ಆರ್ ನೀನಾಸಂ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ನೈಜ ಘಟನೆಗಳಿಂದ ಸ್ಪೂರ್ತಿ ಪಡೆದು ಹೆಣೆದ ಈ ಚಿತ್ರ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಒಳಗೊಂಡಿದೆ. ಪಾವನ ಗೌಡ, ರಾಕೇಶ್ ಮಯ್ಯ, ಮಧುನಂದನ್ ಚಿತ್ರದ ಮುಖ್ಯಭೂಮಿಕೆಯಲ್ಲಿ ನಟಿಸಿದ್ದು, ಅಚ್ಯುತ್ ಕುಮಾರ್, ಕೃಷ್ಣ ಹೆಬ್ಬಾಳೆ, ರಾಘು ಶಿವಮೊಗ್ಗ, ಜಾಹಂಗೀರ್, ರೋಹಿಣಿ ರಘುನಂನಂದನ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ.

 

ಬೆಂಗಳೂರು, ಸಕಲೇಶಪುರ, ಮಂಗಳೂರು, ಮೈಸೂರಿನಲ್ಲಿ ಸಿನಿಮಾವನ್ನು ಸೆರೆ ಹಿಡಿಯಲಾಗಿದ್ದು, ಎಂ. ಎಂ. ಸಿನಿಮಾಸ್ ಬ್ಯಾನರ್ ನಡಿ ಸುರಭಿ ಲಕ್ಷ್ಮಣ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಾಜ್ ಕಾಂತ ಕ್ಯಾಮೆರಾ ನಿರ್ದೇಶನ, ಸಚಿನ್ ಬಸ್ರೂರು ಸಂಗೀತ, ಶಶಿಧರ್ ಪಿ ಸಂಕಲನ, ಗಂಗಮ್ ರಾಜ್ ನೃತ್ಯ ನಿರ್ದೇಶನ, ದಕ್ಷಿಣ ಮೂರ್ತಿ ಸಂಭಾಷಣೆ ಚಿತ್ರಕ್ಕಿದೆ.

 

ಪ್ರಮೋದ್ ಮರವಂತೆ, ಕಿನ್ನಾಳ್ ರಾಜ್ ಸಾಹಿತ್ಯದಲ್ಲಿ ಅರಳಿದ ಹಾಡುಗಳು ಸಿನಿಮಾದಲ್ಲಿದ್ದು, ಎಲ್ಲಾ ಹಾಡುಗಳು ಕೇಳುಗರ ಮನಗೆದ್ದಿವೆ. ರಘು ದೀಕ್ಷಿತ್, ರವಿ ಬಸ್ರೂರು, ಪಂಚಮ್ ಜೀವ ಚಿತ್ರದ ಹಾಡುಗಳಿಗೆ ದನಿಯಾಗಿದ್ದಾರೆ. ಸಾಕಷ್ಟು ಇಂಟ್ರಸ್ಟಿಂಗ್ ಅಂಶಗಳನ್ನು ಹೊತ್ತ ‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ ನವೆಂಬರ್ 25ಕ್ಕೆ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

Spread the love
Continue Reading

Cinema News

ವಿಭಿನ್ನ ಕಥೆಯ ‘ರುಧೀರ ಕಣಿವೆ’ ಟೀಸರ್ ಹಾಗೂ ಹಾಡುಗಳ ಬಿಡುಗಡೆ

Published

on

By

ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಹಾಗೂ ಪುನರ್ಜನ್ಮ ಪ್ರೇಮಕಥೆ ಒಳಗೊಂಡ ‘ರುಧೀರ ಕಣಿವೆ’ ಚಿತ್ರದ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟೀಸರ್ ಬಿಡುಗಡೆ ಮಾಡಿದರು. ಹಾಡುಗಳು ಚೆನ್ನಾಗಿದೆ. ಛಾಯಾಗ್ರಹಣ, ಮ್ಯೂಸಿಕ್ ಕೂಡ ಅದ್ಭುತವಾಗಿದೆ. ಒಳ್ಳೆ ತಂಡ ಇದಾಗಿದ್ದು, ಒಳ್ಳೆ ಸಿನಿಮಾ ಮಾಡಿರುವ ಭರವಸೆಯಿದೆ ಎಂದು ಭಾ.ಮ.ಹರೀಶ್ ಹಾರೈಸಿದರು.

ನಟ ಧರ್ಮ ಕಿರ್ತಿರಾಜ್ ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದರು. ಚಿತ್ರದ ತುಣುಕುಗಳನ್ನು ನೋಡಿದರೆ ಇದು ವಿಶೇಷವಾದ ಸಿನಿಮಾ ಎನಿಸುತ್ತದೆ. ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಸಮರ್ಥ ಎಂ. ‘ಈ ಮೊದಲು ನಾನು ‘ನವ ಇತಿಹಾಸ’ ಸಿನಿಮಾ ನಿರ್ದೇಶನ ಮಾಡಿದ್ದು ಇದು ೨ನೇ ಪ್ರಯತ್ನ. ಪ್ರಾರಂಭದಿಂದಲೂ ಚಿತ್ರಕ್ಕೆ ತುಂಬಾ ತೊಂದರೆ ಬಂದಿದ್ದರೂ ನಿರ್ಮಾಪಕರು ಹಾಗೂ ಕಲಾವಿದರು ಒಳ್ಳೆ ಸಪೋರ್ಟ್ ಮಾಡಿದ್ದಾರೆ. ಚಿತ್ರದಲ್ಲಿ ನಾಲ್ಕು ಫೈಟ್, ನಾಲ್ಕು ಹಾಡುಗಳಿದ್ದು, ಬೆಂಗಳೂರು, ರಾಮನಗರ ಸುತ್ತಮುತ್ತ ಶೂಟಿಂಗ್ ಮಾಡಲಾಗಿದೆ. ಸದ್ಯ ೫ ಭಾಷೆಗಳಲ್ಲಿ ಸಿನಿಮಾ ಸಿದ್ದವಾಗಿದ್ದು, ಡಿಸೆಂಬರ್ ೩೦ ರಂದು ಬಿಡುಗಡೆ ಆಗಲಿದೆ’ ಎಂದರು.

 

 

 

ನಂತರ ಮಾತನಾಡಿದ ಚಿತ್ರದ ನಿರ್ಮಾಪಕ ವಿಜಯ್ ಕುಮಾರ್, ‘ನಿರ್ದೇಶಕರು ಕಥೆ ಹೇಳಿದಾಗ ಸಿನಿಮಾ ಮಾಡುವ ಆಸೆ ಬಂತು. ಈ ಚಿತ್ರದ ನಾಯಕ ಕಾರ್ತಿಕ್ ನಮ್ಮ ಅಣ್ಣನ ಮಗ. ಶ್ರೀ ಲಕ್ಷ್ಮಿ ನರಸಿಂಹ ಮೂವೀಸ್ ಬ್ಯಾನರ್ ನಲ್ಲಿ ಮೊದಲಬಾರಿಗೆ ನಿರ್ಮಾಣ ಮಾಡಲಾಗಿದೆ. ಈ ಚಿತ್ರವನ್ನು ಮೊದಲು ಕನ್ನಡದಲ್ಲಿ ರಿಲೀಸ್ ಮಾಡಿ, ನಂತರದ ದಿನಗಳಲ್ಲಿ ಬೇರೆ ಭಾಷೆಯಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಇದೆ. ಸಿನಿಮಾ ತುಂಬಾ ಚೆನ್ನಾಗಿ ಬಂದಿದ್ದು, ಇದರಲ್ಲಿ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ಮಾಡಿ ಕೊಡಲಾಗಿದೆ. ಪ್ರಾರಂಭದಲ್ಲಿ ನಾವು ಕನ್ನಡ ಅಷ್ಟೇ ಪ್ಲ್ಯಾನ್ ಮಾಡಿದ್ವಿ ನಂತರ ಬೇರೆ ಭಾಷೆಗೆ ಪ್ಲ್ಯಾನ್ ಮಾಡಿದ್ವಿ. ಈಗ ಸಿನಿಮಾ ಕನ್ನಡ, ತಮಿಳು, ತೆಲಗು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ತಯಾರಾಗಿದೆ. ಕಥೆಯಲ್ಲಿ ಕಾಮಿಡಿ, ಹಾರರ್, ಆ್ಯಕ್ಷನ್ ಸೇರಿದಂತೆ ಎಲ್ಲಾ ಅಂಶಗಳಿದ್ದು, ಸಿನಿಮಾ ಜನರಿಗೆ ಇಷ್ಟ ಆಗುತ್ತದೆ’ ಎಂದು ಹೇಳಿದರು. ಚಿತ್ರ ತಂಡಕ್ಕೆ ಶುಭ ಹಾರೈಸಲು ಬಂದಿದ್ದ ಪ್ರತಾಪ್ ಸಿಂಹ ‘ಈ ಟೈಟಲ್ ತುಂಬಾ ಚೆನ್ನಾಗಿ ಇದೆ. ತಂಡಕ್ಕೆ ಒಳ್ಳೆದಾಗಲಿ’ ಎಂದರು.
ಈ ಚಿತ್ರದ ನಾಯಕನಾಗಿ ಯುವ ಪ್ರತಿಭೆ ಕಾರ್ತಿಕ್ ಅಭಿನಯಿಸಿದ್ದು, ಇವರಿಗೆ ನಾಯಕಿಯರಾಗಿ ದಿಶಾ ಪೂವಯ್ಯ ಹಾಗೂ ಅಮೃತ ಬಣ್ಣ ಹಚ್ಚಿದ್ದಾರೆ.

 

 

 

ಚಿತ್ರಕ್ಕೆ ಸಂಗೀತ ಸಂಯೋಜಿಸಿರುವ ಎ.ಟಿ ರವೀಶ್ ಮಾತನಾಡಿ, ‘ಇದು ಸ್ಪೆಷಲ್ ಸೌಂಡ್ ಇರುವಂತಹ ಸಿನಿಮಾ. ಕನ್ನಡದಲ್ಲಿ ಒಂದು ಒಳ್ಳೆಯ ಸಿನಿಮಾ ಆಗುವ ನಿರೀಕ್ಷೆ ಇದೆ’ ಎಂದರು. ಉಳಿದಂತೆ ಸಿನಿಮಾಗೆ ಲಕ್ಕಿ ಗೌಡ ಛಾಯಾಗ್ರಹಣ, ಅರವಿಂದ್ ರಾಜ್ ಸಂಕಲನ, ಚಂದ್ರು ಬಂಡೆ ಮತ್ತು ಅಶೋಕ್ ಸಾಹಸವಿದೆ.

Spread the love
Continue Reading

Cinema News

ಇದು “ಕೊರಗಜ್ಜ ದೈವ”ದ ನಿಜಜೀವನದ ಕಥೆಯ ಚಿತ್ರವೇ….?

Published

on

By

ದ್ರತಿ ಕ್ರಿಯೇಷನ್ಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಅಡಿ ತ್ರಿವಿಕ್ರಮ್ ಸಪಲ್ಯ ನಿರ್ಮಿಸುತ್ತಿರುವ , ಸುಧೀರ್ ಅತ್ತಾವರ್ ನಿರ್ದೇಶನದಲ್ಲಿ “ಕರಿ ಹೈದ….ಕರಿ ಅಜ್ಜ …”.ಸಿನೆಮಾದ ಮುಹೂರ್ತ ಸಮಾರಂಭವು ಅದ್ದೂರಿಯಾಗಿ ನೆರವೇರಿತು. ಬೆಳ್ತಂಗಡಿ ತಾಲೂಕಿನ ಬಳ್ಳಮಂಜದ ಇತಿಹಾಸ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಸ್ಥಳಿಯ ಶಾಸಕ ಶ್ರೀ ಹರೀಶ್ ಪೂಂಜ ರವರು ಕ್ಯಾಮರ ಚಾಲನೆ ಮಾಡುವುದರ ಮೂಲಕ ಅದ್ದೂರಿ ಚಾಲನೆ ನೀಡಿದರು. ಮಾತ್ರಶ್ರೀ ಕಮಲ ಕೆ ಸಪಲ್ಯ ಆರಂಭ ಫಲಕ ತೋರಿಸಿದರು.

 

 

ಇತ್ತೀಚಿನ ಹಲವಾರು ವರ್ಷಗಳಿಂದ ಕೊರಗಜ್ಜನ ಮಹಿಮೆ ಮತ್ತು ಕಾರ್ಣಿಕವನ್ನು ತೆರೆಯ ಮೇಲೆ ತರಬೇಕೆಂಬ ಸಹವಾಸವನ್ನು ಹಲವಾರು ನಿರ್ಮಾಪಕರು ಯತ್ನಿಸುತ್ತಿದ್ದರು. ಇದೀಗ ಸುಧೀರ್ ಅತ್ತಾವರ್ ಕೊರಗಜ್ಜ ನ ಜೀವನದ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿ, ಕೊರಗಜ್ಜನ ಜನಾಂಗದ ಮಹನೀಯರೊಂದಿಗೆ ಚರ್ಚಿಸಿ, ಸುಮಾರು 12ನೇ ಶತಮಾನದಲ್ಲಿದ್ದ ಕೊರಗಜ್ಜನ ನಿಜ ಬದುಕಿನ ಯಾರಿಗೂ ತಿಳಿದಿರದಂತಹ ಸಾಕಷ್ಟು ವಿಷಯಗಳನ್ನು ಈ ಸಿನಿಮಾದ ಮೂಲಕ ಜಗತ್ತಿಗೆ ತೋರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇತ್ತೀಚೆಗೆ ಸುಧೀರ್ ನಿರ್ದೇಶನದ ಮರಾಠಿ -ಕನ್ನಡ ಸಿನಿಮಾ ಶೂಟಿಂಗ್ ಸಂಪೂರ್ಣ ಗೊಂಡು, ಅರೇಬಿಕ್- ಇಂಗ್ಲಿಷ್ ಸಿನೆಮ ಸಿನಿಮಾ “ಗುಲೇ ಬಕಾವಲಿ” ಮತ್ತು ಮರಾಠಿ-ಕನ್ನಡ ಸಿನಿಮಾ “ಅಗೋ ಳಿ ಮಂಜಣ್ಣ” ಫ್ಲೋರ್ ನಲ್ಲಿ ಇರುವ ಮಧ್ಯೆಯೇ ಇದೀಗ ಸುಧೀರ್ ಮತ್ತೊಂದು ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಮುಹೂರ್ತ ನಡೆಸುವ ಮೊದಲು ಕೊರಗಜ್ಜನ ಸಮುದಾಯದ ಪ್ರಮುಖ ವ್ಯಕ್ತಿಗಳು ಡೊಳ್ಳು -ತಮಟೆಗಳ ಸ ವಿಶೇಷ ಪೂಜೆಯನ್ನು ಶ್ರೀ ಸುಂದರ ಬೆಳುವಾಯಿ, ಶ್ರೀ ಬಾಬು ಪಾಂಗಳ, ಶ್ರೀ ಬಲ್ ರಾಜ್, ಶ್ರೀ ರಮೇಶ್ ಮೊದಲಾದ ಮಹನೀಯರು ಮತ್ತು ಗುರಿಕಾರರು ಹಳೆಯ ಶೈಲಿಯ ಪೂಜಾ ಕಾರ್ಯಕ್ರಮವನ್ನು ನಡೆಸಿಕೊಟ್ಟು ಸಿನೆಮಾಕ್ಕೆ ಶುಭ ಹಾರೈಸಿದರು.

 

 

ಖ್ಯಾತ ಹಾಲಿವೂಡ್-ಬಾಲಿವೂಡ್ ನಟ ಕಬೀರ್ ಬೇಡಿ ಯವರು ವಿಶೇಷ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರದಲ್ಲಿ ಖ್ಯಾತ ನಾಟಿಯರಾದ ಭವ್ಯ ಮತ್ತು ಶ್ರುತಿ ಕೂಡಾ ಅಭಿನಯಿಸುತ್ತಿದ್ದಾರೆ. ಭರತ್ ಸೂರ್ಯ ಎನ್ನುವ ಹೊಸ ಕಲಾವಿದನನ್ನು ಈ ಚಿತ್ರದ ಮೂಲಕ ಪರಿಚಯಿಸುತ್ತಿದ್ದಾರೆ. ವಿದ್ಯಾಧರ್ ಶೆಟ್ಟಿ ಸಂಕಲನದ ಜೊತೆಗೆ ಎಂಟುನೂರು ವರ್ಷಗಳ ಇತಿಹಾಸದ ದಾಖಲೆ ಮತ್ತು ಪುರಾವೆಗಳನ್ನು ಕಲೆ ಹಾಕುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಪವನ್ ವಿ ಕುಮಾರ್ ಮತ್ತು ಗಣೇಶ್ ಕೆಳಮನೆ ಕ್ಯಾಮರಾ, ಸುಧೀರ್- ಕ್ರಷ್ಣ ರವಿ ಸಂಗೀತ, ಸುಧೀರ್ ಅತ್ತಾವರ್ ಕಲೆ ಚಿತ್ರಕ್ಕಿದೆ. ತ್ರಿವಿಕ್ರಮ ಬೆಳ್ತಂಗಡಿ ನಿರ್ಮಾಣದ ನಾಲ್ಕನೆಯ ಸಿನೆಮಾ

Spread the love
Continue Reading

Cinema News

300 ಕೇಂದ್ರಗಳಲ್ಲಿ 50 ದಿನಗಳನ್ನು ಮುಗಿಸಿ ಮುನ್ನುಗ್ಗುತ್ತಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕಾಂತಾರ’

Published

on

By

ಹೊಂಬಾಳೆ ಫಿಲಂಸ್ ಬ್ಯಾನರ್ನಡಿ ವಿಜಯ್ ಕುಮಾರ್ ಕಿರಗಂದೂರು ನಿರ್ಮಿಸಿ, ರಿಷಭ್ ಶೆಟ್ಟಿ ಅಭಿನಯಿಸಿ-ನಿರ್ದೇಶಿಸಿರುವ ‘ಕಾಂತಾರ’ ಚಿತ್ರವು ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿದೆ. ಸೆ. 30ರಂದು ಬಿಡುಗಡೆಯಾದ ಚಿತ್ರವು ರಾಜ್ಯದ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲದೆ, ವಿದೇಶಗಳಲ್ಲೂ ಹಲವು ಚಿತ್ರಮಂದಿರಗಳಲ್ಲಿ 50 ದಿನಗಳನ್ನು ಮುಗಿಸಿ, 100ನೇ ದಿನದತ್ತ ದಾಪುಗಾಲಿಟ್ಟಿದೆ. ಬರೀ ಕನ್ನಡವಷ್ಟೇ ಅಲ್ಲ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂಗೆ ಡಬ್ ಆಗಿರುವ ‘ಕಾಂತರ’, ಅಲ್ಲೂ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದ್ದು, ಸದ್ಯದಲ್ಲೇ ಅಲ್ಲೂ 50 ದಿನಗಳನ್ನು ಪೂರೈಸಲಿದೆ.

 

‘ಕೆಜಿಎಫ್ 1’ ಮತ್ತು ‘ಕೆಜಿಎಫ್ 2’ ಚಿತ್ರಗಳ ಮೂಲಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲರೂ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ್ದು ಹೊಂಬಾಳೆ ಫಿಲಂಸ್. ಈಗ ಅದೇ ಸಂಸ್ಥೆಯಿಂದ ನಿರ್ಮಾಣವಾಗಿರುವ ‘ಕಾಂತಾರ’ ಚಿತ್ರವನ್ನು ಮನೆ ಮಂದಿಯೆಲ್ಲಾ ನೋಡಿ ಇಷ್ಟಪಟ್ಟಿದ್ದಾರೆ. ಹಿರಿಯರಿಂದ ಕಿರಿಯರವರೆಗೂ ಎಲ್ಲರೂ ಮೆಚ್ಚಿಕೊಂಡಿರುವ ಈ ಚಿತ್ರ ಎಲ್ಲರಿಗೂ ಇಷ್ಟವಾಗುವುದಕ್ಕೆ ಕಾರಣ ಚಿತ್ರದ ಕಥೆ ಮತ್ತು ಮೇಕಿಂಗ್. ಹೊಂಬಾಳೆ ಫಿಲಂಸ್ ಮೊದಲಿನಿಂದಲೂ ಕಥೆಗೆ ವಿಶೇಷವಾದ ಪ್ರಾಮುಖ್ಯತೆ ನೀಡುತ್ತಾ ಬಂದಿದ್ದು, ಈಗಾಗಲೇ ‘ರಾಜ್ಕುಮಾರ’, ‘ಯುವರತ್ನ’, ‘ಕೆಜಿಎಫ್’ ಮುಂತಾದ ಚಿತ್ರಗಳು ಈ ವಿಷಯವನ್ನು ನಿರೂಪಿಸಿದೆ. ಈಗ ‘ಕಾಂತಾರ’ ಸಹ ಇದೇ ನಿಟ್ಟಿನಲ್ಲಿ ಸಾಗಿರುವುದಷ್ಟೇ ಅಲ್ಲ, ‘ಕೆಜಿಎಫ್’ ಸರಣಿಯ ನಂತರ ಒಂದೇ ಸಂಸ್ಥೆಯ ಇನ್ನೊಂದು ಚಿತ್ರ ಸಹ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿರುವುದು ವಿಶೇಷ.
ಬರೀ ಕನ್ನಡವಷ್ಟೇ ಅಲ್ಲ, ಮುಂದಿನ ದಿನಗಳಲ್ಲಿ ಒಟ್ಟು ಐದು ಭಾಷೆಗಳಲ್ಲಿ ಏಕಕಾಲಕ್ಕೆ ಹೊಂಬಾಳೆ ಫಿಲಂಸ್ ಸಂಸ್ಥೆಯು ಹಲವು ಚಿತ್ರಗಳನ್ನು ನಿರ್ಮಿಸುತ್ತಿದೆ. ಒಂದೇ ಸಂಸ್ಥೆಯಿಂದ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರ ನಿರ್ಮಾಣ ಮಾಡುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಷ್ಟೇ ಅಲ್ಲ, ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ.

 

 

ಈಗಾಗಲೇ ಕನ್ನಡದಲ್ಲಿ ಜಗ್ಗೇಶ್ ಅಭಿನಯದಲ್ಲಿ ಸಂತೋಷ್ ಆನಂದರಾಮ್ ನಿರ್ದೇಶಿಸುತ್ತಿರುವ ‘ರಾಘವೇಂದ್ರ ಸ್ಟೋರ್ಸ್’ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಶ್ರೀಮುರಳಿ ಅಭಿನಯದಲ್ಲಿ ಡಾ. ಸೂರಿ ನಿರ್ದೇಶಿಸುತ್ತಿರುವ ‘ಬಘೀರ’ ಚಿತ್ರವು ಚಿತ್ರೀಕರಣ ಹಂತದಲ್ಲಿದೆ. ರಕ್ಷಿತ್ ಅಭಿನಯದ ಮತ್ತು ನಿರ್ದೇಶನದ ‘ರಿಚರ್ಡ್ ಆಂಟೋನಿ’ ಮತ್ತು ಯುವ ರಾಜ್ಕುಮಾರ್ಗಾಗಿ ಸಂತೋಷ್ ಆನಂದರಾಮ್ ನಿರ್ದೇಶಿಸಲಿರುವ ಹೊಸ ಚಿತ್ರಗಳು ಸದ್ಯದಲ್ಲೇ ಶುರುವಾಗಲಿವೆ.

 

 

ಬೇರೆ ಭಾಷೆಯ ಚಿತ್ರಗಳ ವಿಷಯಕ್ಕೆ ಬಂದರೆ, ತೆಲುಗಿನಲ್ಲಿ ಪ್ರಭಾಸ್ ಅಭಿನಯದ ‘ಸಲಾರ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, 2023ರ ಸೆಪ್ಟೆಂಬರ್ನಲ್ಲಿ ಚಿತ್ರ ಬಿಡುಗಡೆಯಾಗಲಿದೆ. ತಮಿಳಿನಲ್ಲಿ ಎರಡು ಚಿತ್ರಗಳನ್ನು ಹೊಂಬಾಳೆ ನಿರ್ಮಿಸುತ್ತಿದ್ದು, ಈ ಪೈಕಿ ಒಂದು ಚಿತ್ರವನ್ನು ‘ಸೂರರೈ ಪೊಟ್ರು’ ಖ್ಯಾತಿಯ ಸುಧಾ ಕೊಂಗರಾ ನಿರ್ದೇಶನ ಮಾಡಿದರೆ, ಇನ್ನೊಂದರ ಘೋಷಣೆ ಶೀಘ್ರದಲ್ಲೇ ಆಗಲಿದೆ. ಮಲಯಾಳಂನಲ್ಲೂ ಹೊಂಬಾಳೆ ಫಿಲಂಸ್ ವತಿಯಿಂದ ಎರಡು ಚಿತ್ರ ನಿರ್ಮಾಣವಾಗುತ್ತಿವೆ. ಫಹಾದ್ ಫಾಸಿಲ್ ಅಭಿನಯದ ‘ಧೂಮಂ’ ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದರೆ, ಪೃಥ್ವಿರಾಜ್ ಸುಕುಮಾರನ್ ನಟಿಸಿ-ನಿರ್ದೇಶಿಸಲಿರುವ ‘ಟೈಸನ್’ ಚಿತ್ರವು ಮುಂದಿನ ವರ್ಷ ಪ್ರಾರಂಭವಾಗಲಿದೆ. ಹಿಂದಿ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯಲಿದ್ದು ಸದ್ಯದಲ್ಲೇ ಅಧಿಕೃತ ಘೋಷಣೆಯಾಗಲಿದೆ.

 

Spread the love
Continue Reading

Trending News