Cinema News
“ಫ್ಯಾಮಿಲಿ ಪ್ಯಾಕ್” ಚಿತ್ರೀಕರಣ ಮುಕ್ತಾಯ. ಚಿತ್ರತಂಡಕ್ಕೆ ಶುಭಕೋರಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ದಂಪತಿ.

ಪಿ ಆರ್ ಕೆ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನಿರ್ಮಾಣವಾಗುತ್ತಿರುವ ಮತ್ತೊಂದು ಸದಭಿರುಚಿಯ ಚಿತ್ರ ಫ್ಯಾಮಿಲಿ ಪ್ಯಾಕ್. ಈ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿದೆ. ಬೆಂಗಳೂರಿನ ಅನೇಕ ಕಡೆ ಮೂವತ್ತಕ್ಕೂ ಅಧಿಕ ದಿನಗಳ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ನಂತರ ಚಟುವಟಿಕೆಗಳು ಭರದಿಂದ ಸಾಗಿದೆ.
ಚಿತ್ರೀಕರಣದ ಕೊನೆಯ ದಿವಸ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜಕುಮಾರ್ ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿ, ಚಿತ್ರೀಕರಣ ವೀಕ್ಷಿಸಿದಲ್ಲದೇ, ಚಿತ್ರತಂಡದ ಪ್ರತಿಯೊಬ್ಬ ಸದಸ್ಯರ ಕಾರ್ಯವನ್ನು ಶ್ಲಾಘಿಸಿ, ಶುಭ ಕೋರಿದ್ದಾರೆ.
ನಾಯಕ ಲಿಖಿತ್ ಶೆಟ್ಟಿ, ಅಮೃತ ಅಯ್ಯಂಗಾರ್, ರಂಗಾಯಣ ರಘು, ಅಚ್ಯುತಕುಮಾರ್, ಪದ್ಮಜಾರಾವ್, ಶರ್ಮಿತಾ ಗೌಡ, ಸಿಹಿಕಹಿ ಚಂದ್ರು ಮುಂದಿನ ಕಲಾವಿದರು ಅಂದಿನ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ಮನೋರಂಜನೆ ಪ್ರಧಾನವಾಗಿರುವ ಈ ಚಿತ್ರದ ನಿರ್ಮಾಪಕರು ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಲಿಖಿತ್ ಶೆಟ್ಟಿ .
ಈ ಹಿಂದೆ ಸಂಕಷ್ಟ ಕರ ಗಣಪತಿ ಚಿತ್ರವನ್ನು ನಿರ್ದೇಶಿಸಿದ್ದ ಅರ್ಜುನ್ ಕುಮಾರ್ “ಫ್ಯಾಮಿಲಿ ಪ್ಯಾಕ್” ನ ನಿರ್ದೇಶಕ.
ನಿರ್ಮಾಪಕ ಲಿಖಿತ್ ಶೆಟ್ಟಿ ಅವರು ಈ ಚಿತ್ರದ ನಾಯಕ ಕೂಡ. ಅಮೃತ ಅಯ್ಯಂಗಾರ್ ನಾಯಕಿ. ರಂಗಾಯಣ ರಘು, ಅಚ್ಯುತಕುಮಾರ್, ಸಿಹಿಕಹಿ ಚಂದ್ರು, ಪದ್ಮಜಾರಾವ್, ಶರ್ಮಿತಾಗೌಡ, ನಾಗಭೂಷಣ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿರುವ ಕಲಾವಿದರು.
ಗುರುಕಿರಣ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಉದಯಲೀಲ ಹಾಗೂ ಶ್ರೀಶ ಕುದುವಳ್ಳಿ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನವಿದೆ.
ಮಾಸ್ತಿ ಫ್ಯಾಮಿಲಿ ಪ್ಯಾಕ್ ಗೆ ಸಂಭಾಷಣೆ ಬರೆದಿದ್ದಾರೆ.
Cinema News
ಸದ್ಯದಲ್ಲೇ ಬರಲಿದೆ “ಪ್ರೀತಿಯ ರಾಯಭಾರಿ” ಹುಡಗ ನಕುಲ್ ಅಭಿನಯದ ಹೊಸಚಿತ್ರ

Cinema News
ವಿಜಯ್ ರಾಘವೇಂದ್ರ ನಟನೆಯ ರಾಘು ಸಿನಿಮಾದ ಮುಹೂರ್ತ…ಅಣ್ಣನ ಸಿನಿಮಾಗೆ ತಮ್ಮ ಶ್ರೀಮುರಳಿ ಕ್ಲ್ಯಾಪ್

Cinema News
ಅಬ್ಬಾ ಲಾಟ್ರಿ….ಬೆಂಕಿ ಸಿನಿಮಾದ ಓಕೆನಾ ಸಾಂಗ್ ಗೆ ಹೆಜ್ಜೆ ಹಾಕಿ Iphone 13 ಗೆಲ್ಲಿ?

Cinema News
ಓಂಪ್ರಕಾಶ್ ರಾವ್ ಹಾಗೂ ಆದಿತ್ಯ ಕಾಂಬಿನೇಶನಲ್ಲಿ “ಇಲಾಖೆ”.

Cinema News
ಜೂನ್ ನಲ್ಲಿ “ರಾಜಮಾರ್ತಾಂಡ”ನ ಆಗಮನ. ಚಿರಂಜೀವಿ ಸರ್ಜಾ ಅಭಿನಯದ ಕೊನೆಯ ಚಿತ್ರಕ್ಕೆ ಧ್ವನಿ ನೀಡಲಿದ್ದಾರೆ ಧ್ರುವ ಸರ್ಜಾ.

-
Movie Reviews3 years ago
ವಿಕೇಂಡ್ಗೊಂದು ಮನ ಮುಟ್ಟುವ ಚಿತ್ರ – ವಿಮರ್ಶೆ – ರೇಟಿಂಗ್ – 3.25/5
-
Movie Reviews3 years ago
ರಾಮ್ ಜಾನುವಿನ ಮಧುರವಾದ ನೆನಪಿನ ಲವ್ಸ್ಟೋರಿ
-
Box Office2 years ago
ಮೂರು ದಿನಕ್ಕೆ “ಅವನೇ ಶ್ರೀಮನ್ನಾರಾಯಣ” ಗಳಿಸಿದ್ದು ಎಷ್ಟು ಕೋಟಿ?
-
Movie Reviews3 years ago
ಪಾರ್ವತಮ್ಮನ ಮಗಳಿಗೆ ಎಲ್ಲವೂ ಸಲೀಸು – ವಿಮರ್ಶೆ – ರೇಟಿಂಗ್ 3.5/5
-
Cinema News3 years ago
ಫಿಕ್ಸ್ ಆಯ್ತು ‘ಪೈಲ್ವಾನ್’ ಟ್ರೇಲರ್ ಬಿಡುಗಡೆ ದಿನಾಂಕ!
-
Box Office3 years ago
ಸ್ಯಾಂಡಲ್ ವುಡ್ ನಲ್ಲಿ ಸೋತ ಅಮ್ಮ – ಮಗ
-
Cinema News3 years ago
ಬಜಾರ್ ಧನ್ವೀರ್ಗೆ ಕಥೆ ಬರೆದ ಬಹದ್ದೂರ್ ಚೇತನ್
-
Reviews3 years ago
ದೆವ್ವಕ್ಕೂ ‘ಗಿಮಿಕ್’ ಮಾಡಿದ ಗಣೇಶ್ – ‘ಗಿಮಿಕ್’ ಟ್ರೇಲರ್ ವಿಮರ್ಶೆ
-
News3 years ago
‘ಗಟ್ಟಿಮೇಳ’ದ ಕ್ರಾಂತಿಯನ್ನು ನೇರವಾಗಿ ತರಲಿದೆ ”ಜೀ ಕನ್ನಡ”
-
News3 years ago
‘ನಾಯಕಿ’ಗೆ ಪ್ರಚಾರಕಿಯಾದ ನಟಿ ಹರಿಪ್ರಿಯಾ