Cinema News
ಸೆನ್ಸಾರ್ ಮುಂದೆ ಕಸ್ತೂರಿ ಮಹಲ್

ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ ಹಾಗೂ ಬಹುಭಾಷಾ ನಟಿ ಶಾನ್ವಿ ಶ್ರೀವಾಸ್ತವ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಕಸ್ತೂರಿ ಮಹಲ್ ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಸದ್ಯದಲ್ಲೇ ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ.
ಪ್ರಸ್ತುತ ಚಿತ್ರಮಂದಿರಗಳಿಗೆ ಐವತ್ತರಷ್ಟು ಮಾತ್ರ ಪ್ರವೇಶಕ್ಕೆ ಅವಕಾಶವಿದೆ. ಸರ್ಕಾರದ ಮುಂದಿನ ನಿಲುವನ್ನು ನೋಡಿಕೊಂಡು ಬಿಡುಗಡೆಯ ದಿನಾಂಕ ತಿಳಿಸುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.
ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ “ಕಸ್ತೂರಿ ಮಹಲ್” ನ ಟೀಸರ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದರು. ಆ ಟೀಸರ್ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.
ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ಕಾಶಿಮ ರಫಿ, ನೀನಾಸಂ ಅಶ್ವಥ್ , ಅಕ್ಷರ್ ಮುಂತಾದವರಿದ್ದಾರೆ.
ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ದಿನೇಶ್ ಬಾಬು ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.
ಶ್ರೀಭವಾನಿ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್ ಸಿ ನಿರ್ಮಿಸಿರುವ ಈ ಚಿತ್ರಕ್ಕೆ ನವೀನ್ ಆರ್ ಸಿ* ಹಾಗೂ
ಅಕ್ಷಯ್ ಸಿ.ಎಸ್ ಅವರ ಸಹ ನಿರ್ಮಾಣವಿದೆ . ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಹರೀಶ್ ಕೃಷ್ಣ ಅವರ ಸಂಕಲನ “ಕಸ್ತೂರಿ ಮಹಲ್” ಗಿದೆ.
Cinema News
Road King | ಹಾಲಿವುಡ್ ನಿರ್ದೇಶಕರಿಂದ ಕನ್ನಡ ಚಿತ್ರ ಜೂನ್ 23ಕ್ಕೆ ಬಿಡುಗಡೆಯಾಗಲಿದೆ ‘ರೋಡ್ ಕಿಂಗ್’

Cinema News
ತಮಿಳಿಗೆ ಆಸ್ಕರ್ ಪ್ರಶಸ್ತಿ ವಿಜೇತ ಎಂ.ಎಂ. ಕೀರಣವಾಣಿ; ‘ಜಂಟಲ್ಮ್ಯಾನ್ 2’ ಚಿತ್ರಕ್ಕೆ ಸಂಗೀತ ನಿರ್ದೇಶನ

Cinema News
Rudra Garuda Purana | “ರುದ್ರ ಗರುಡ ಪುರಾಣ”ದಲ್ಲಿ ಪೊಲೀಸ್ ಅಧಿಕಾರಿಯಾದ ರಿಷಿ .

Cinema News
ಜೂನ್ 16 ರಂದು “ಐರಾವನ್” ಆಗಮನ ..ಇದು ಜೆ.ಕೆ ಅಭಿನಯದ ಚಿತ್ರ .

Cinema News
ಕೇಳುಗರ ಮನ ಗೆಲ್ಲುತ್ತಿದೆ “ಮೆಲೋಡಿ ಡ್ರಾಮ”.ದ ಹಾಡು .

-
Movie Reviews4 years ago
ವಿಕೇಂಡ್ಗೊಂದು ಮನ ಮುಟ್ಟುವ ಚಿತ್ರ – ವಿಮರ್ಶೆ – ರೇಟಿಂಗ್ – 3.25/5
-
Movie Reviews4 years ago
ರಾಮ್ ಜಾನುವಿನ ಮಧುರವಾದ ನೆನಪಿನ ಲವ್ಸ್ಟೋರಿ
-
Movie Reviews4 years ago
ಪಾರ್ವತಮ್ಮನ ಮಗಳಿಗೆ ಎಲ್ಲವೂ ಸಲೀಸು – ವಿಮರ್ಶೆ – ರೇಟಿಂಗ್ 3.5/5
-
Box Office3 years ago
ಮೂರು ದಿನಕ್ಕೆ “ಅವನೇ ಶ್ರೀಮನ್ನಾರಾಯಣ” ಗಳಿಸಿದ್ದು ಎಷ್ಟು ಕೋಟಿ?
-
Cinema News4 years ago
ಫಿಕ್ಸ್ ಆಯ್ತು ‘ಪೈಲ್ವಾನ್’ ಟ್ರೇಲರ್ ಬಿಡುಗಡೆ ದಿನಾಂಕ!
-
Box Office4 years ago
ಸ್ಯಾಂಡಲ್ ವುಡ್ ನಲ್ಲಿ ಸೋತ ಅಮ್ಮ – ಮಗ
-
Cinema News4 years ago
ಬಜಾರ್ ಧನ್ವೀರ್ಗೆ ಕಥೆ ಬರೆದ ಬಹದ್ದೂರ್ ಚೇತನ್
-
Reviews4 years ago
ದೆವ್ವಕ್ಕೂ ‘ಗಿಮಿಕ್’ ಮಾಡಿದ ಗಣೇಶ್ – ‘ಗಿಮಿಕ್’ ಟ್ರೇಲರ್ ವಿಮರ್ಶೆ
-
News4 years ago
‘ಗಟ್ಟಿಮೇಳ’ದ ಕ್ರಾಂತಿಯನ್ನು ನೇರವಾಗಿ ತರಲಿದೆ ”ಜೀ ಕನ್ನಡ”
-
News4 years ago
‘ನಾಯಕಿ’ಗೆ ಪ್ರಚಾರಕಿಯಾದ ನಟಿ ಹರಿಪ್ರಿಯಾ