Cinema News
ಬದಲಾಯ್ತು “ಬಹದ್ದೂರ್ ಗಂಡು” ಟೈಟಲ್

ಕಿರುತೆರೆ ಲೋಕದಲ್ಲಿ ತಮ್ಮದೇ ಅದ ಛಾಪು ಮೂಡಿಸಿರುವ ಕಿರಣ್ ರಾಜ್ ಅಭಿನಯದ ಚಿತ್ರ “ಭರ್ಜರಿ ಗಂಡು”. ಈ ಮೊದಲು ” ಬಹದ್ದೂರ್ ಗಂಡು” ಎಂಬ ಹೆಸರಿನಿಂದ ಆರಂಭವಾದ ಈ ಚಿತ್ರದ ಶೀರ್ಷಿಕೆ ಈಗ “ಭರ್ಜರಿ ಗಂಡು” ಎಂದು ಬದಲಾಗಿದೆ.
ಕಿರಣ್ ರಾಜ್ ಈ ಚಿತ್ರಕ್ಕಾಗಿ ಸಿಕ್ಸ್ ಪ್ಯಾಕ್ ಮಾಡಿಕೊಂಡು ಇನ್ನಷ್ಟು ಸ್ಲಿಮಾಗಿ ಕಾಣಿಸಿಕೊಂಡಿದ್ದಾರೆ. ದೊಣ್ಣೆ ವರಸೆ ಮುಂತಾದ ಸಾಹಸ ವಿದ್ಯೆಗಳ ಪರಿಣಿತಿಯನ್ನು ಪಡೆದುಕೊಂಡಿದ್ದಾರೆ. ಚಿತ್ರ ಉತ್ತಮವಾಗಿ ಬರಲು ನಾಯಕನೊಬ್ಬ ಪಡುತ್ತಿರುವ ಶ್ರಮ ನಿಜಕ್ಕೂ ಶ್ಲಾಘನೀಯ. ಈ ಚಿತ್ರದಲ್ಲಿ ಅವರು ಎರಡು ಲುಕ್ ಗಳಲ್ಲಿ ಗಮನ ಸೆಳೆಯಲಿದ್ದಾರೆ. ಎರಡು ರೀತಿಯ ಪಾತ್ರಗಳಿಗೂ ಬೇಕಾದ ಪೂರ್ವ ತಯಾರಿ ಮಾಡಿಕೊಂಡು ಸೈ ಅನಿಸಿಕೊಂಡಿದ್ದಾರೆ. ಈ ಚಿತ್ರದ ಮೊದಲ ಜಲಕ್ ನೋಡಿಯೇ ಕಿರಣ್ ರಾಜ್ ಅವರಿಗೆ ಸಾಕಷ್ಟು ಆಫರ್ ಬರುತ್ತಿದೆ.
ಪ್ರಸಿದ್ಧ್ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದಿದೆ. ಪ್ರಸಿದ್ದ್ ಸಿನಿಮಾಸ್, ಮದನ್ ಗೌಡ ಹಾಗೂ ಅನಿಲ್ ಕುಮಾರ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.
ಸುಮಧುರ ಹಾಡುಗಳಿಗೆ ಗುಮ್ಮಿನೇನಿ ವಿಜಯ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಕಿಟ್ಟಿ ಕೌಶಿಕ್ ಛಾಯಾಗ್ರಹಣ ಹಾಗೂ ವೆಂಕಿ ಯುಡಿವಿ ಸಂಕಲನವಿರುವ ಈ ಚಿತ್ರಕ್ಕೆ ಮಳವಳ್ಳಿ ಸಾಯಿಕೃಷ್ಣ ಸಂಭಾಷಣೆ ಬರೆದಿದ್ದಾರೆ.
ಕಿರಣ್ ರಾಜ್ ಅವರಿಗೆ ನಾಯಕಿಯಾಗಿ ಯಶಾ ಶಿವಕುಮಾರ್ ಇದ್ದಾರೆ. ರಮೇಶ್ ಭಟ್ , ರಾಕೇಶ್ ರಾಜ್, ಸುರೇಖ, ವೀಣಾ ಸುಂದರ್, ಜಯಶ್ರೀ, ನಾಗೇಶ್ ರೋಹಿತ್, ಸೌರಭ್ ಕುಲಕರ್ಣಿ, ಮಡೆನೂರು ಮನು, ಗೋವಿಂದೇ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Cinema News
ಮಧ್ವನವಮಿ ಶುಭಸಂದರ್ಭದಲ್ಲಿ “ಹನುಮ ಭೀಮ ಮಧ್ವ” ಚಿತ್ರದ ಬಗ್ಗೆ ಅಧಿಕೃತ ಘೋಷಣೆ .

Cinema News
ಎಸ್.ಎಲ್.ವಿ ಚಿತ್ರ ಬಿಡುಗಡೆಗೆ ಸಜ್ಜಾಗಿದೆ

Cinema News
ಸುಖಾಂತ್ಯ ಚಿತ್ರೀಕರಣ ಮುಕ್ತಾಯ

Cinema News
ದಳಪತಿ 67 ಚಿತ್ರಕ್ಕೆ ಲೋಕೇಶ್ ಕನಗರಾಜ್ ನಿರ್ದೇಶನ..

Cinema News
‘ದಸರಾ’ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಸಾಥ್ ನೀಡಿದ ಎಸ್. ಎಸ್ ರಾಜಮೌಳಿ – ಮಾಸ್ ಟೀಸರ್ ಗೆ ಸಿನಿ ಪ್ರೇಕ್ಷಕರು ಫಿದಾ

-
Movie Reviews4 years ago
ವಿಕೇಂಡ್ಗೊಂದು ಮನ ಮುಟ್ಟುವ ಚಿತ್ರ – ವಿಮರ್ಶೆ – ರೇಟಿಂಗ್ – 3.25/5
-
Movie Reviews4 years ago
ರಾಮ್ ಜಾನುವಿನ ಮಧುರವಾದ ನೆನಪಿನ ಲವ್ಸ್ಟೋರಿ
-
Movie Reviews4 years ago
ಪಾರ್ವತಮ್ಮನ ಮಗಳಿಗೆ ಎಲ್ಲವೂ ಸಲೀಸು – ವಿಮರ್ಶೆ – ರೇಟಿಂಗ್ 3.5/5
-
Box Office3 years ago
ಮೂರು ದಿನಕ್ಕೆ “ಅವನೇ ಶ್ರೀಮನ್ನಾರಾಯಣ” ಗಳಿಸಿದ್ದು ಎಷ್ಟು ಕೋಟಿ?
-
Cinema News3 years ago
ಫಿಕ್ಸ್ ಆಯ್ತು ‘ಪೈಲ್ವಾನ್’ ಟ್ರೇಲರ್ ಬಿಡುಗಡೆ ದಿನಾಂಕ!
-
Box Office4 years ago
ಸ್ಯಾಂಡಲ್ ವುಡ್ ನಲ್ಲಿ ಸೋತ ಅಮ್ಮ – ಮಗ
-
Cinema News4 years ago
ಬಜಾರ್ ಧನ್ವೀರ್ಗೆ ಕಥೆ ಬರೆದ ಬಹದ್ದೂರ್ ಚೇತನ್
-
Reviews4 years ago
ದೆವ್ವಕ್ಕೂ ‘ಗಿಮಿಕ್’ ಮಾಡಿದ ಗಣೇಶ್ – ‘ಗಿಮಿಕ್’ ಟ್ರೇಲರ್ ವಿಮರ್ಶೆ
-
News4 years ago
‘ಗಟ್ಟಿಮೇಳ’ದ ಕ್ರಾಂತಿಯನ್ನು ನೇರವಾಗಿ ತರಲಿದೆ ”ಜೀ ಕನ್ನಡ”
-
News4 years ago
‘ನಾಯಕಿ’ಗೆ ಪ್ರಚಾರಕಿಯಾದ ನಟಿ ಹರಿಪ್ರಿಯಾ