Cinema News
ಸತ್ಯ ಹೆಗಡೆ ಸ್ಟುಡಿಯೋಸ್ ಮೂಲಕ ನೂತನ ಪ್ರತಿಭೆಗಳ ಅನಾವರಣ.

ಕಿರುಚಿತ್ರ ನಿರ್ಮಾಣ ಸಾಕಷ್ಟು ಪ್ರತಿಭಾವಂತರ ಕನಸು. ಈ ಕನಸಿಗೆ ಆಸರೆಯಾಗಿ ನಿಂತಿದ್ದಾರೆ ಛಾಯಾಗ್ರಹಕ ಸತ್ಯ ಹೆಗಡೆ.
ತಮ್ಮ ಸತ್ಯ ಹೆಗಡೆ ಸ್ಟುಡಿಯೋಸ್ ಮೂಲಕ ಪ್ರತಿಭಾವಂತ ಯುವ ಪ್ರತಿಭೆಗಳ ಸಮಾಗಮದಲ್ಲಿ ತಯಾರಾದ ಕಿರುಚಿತ್ರಗಳನ್ನು ಬಿಡುಗಡೆ ಮಾಡುವ ಮೂಲಕ ಕಿರುಚಿತ್ರ ನಿರ್ಮಾಣ ಮಾಡುವವರನ್ನು ಪ್ರೋತ್ಸಾಹಿಸುತ್ತಿದ್ದಾರೆ.
ಇತ್ತೀಚೆಗೆ ವಿನಯ್ ಶಾಸ್ತ್ರಿ ಅವರ ನಿರ್ದೇಶನದಲ್ಲಿ ಮಂಜುನಾಥ್ ಹೆಗಡೆ ಹಾಗೂ ಅರಣಾ ಬಾಲರಾಜ್ ಅಭಿನಯಿಸಿರುವ “ಕಾಲ”. ನಾಟಕ ಕಂಪನಿಗಳ ವಾಸ್ತವ ತಿಳಿಸುವ , ಅಭಿಷೇಕ್ ಕಾಸರಗೋಡು ನಿರ್ದೇಶನದ ” ನಾಟಕದ್ ಕಂಪನಿ” ಹಾಗೂ ಆಹಾರ ಪೂರೈಕೆ ಕಂಪನಿಯಲ್ಲಿ ಕಾರ್ಯ ನಿರ್ವಹಿಸುವ ಹೆಣ್ಣುಮಗಳೊಬ್ಬಳ ಕಥೆಯನ್ನಾಧರಿಸಿದ, ಪ್ರಶಾಂತ್ ಗೌಡ ನಿರ್ದೇಶನದಲ್ಲಿ ರಮ್ಯಕೃಷ್ಣ ಮುಖ್ಯಭೂಮಿಕೆಯಲ್ಲಿ ನಟಿಸಿರುವ “ಲಾಸ್ಟ್ ಆರ್ಡರ್” ಕಿರುಚಿತ್ರಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಒಂದೊಂದು ಕಿರುಚಿತ್ರ ಕೂಡ ಬಹಳ ಅದ್ಭುತವಾಗಿತ್ತು. ಸ್ವಲ್ಪ ಸಮಯದಲ್ಲೇ ದೊಡ್ಡ ವಿಷಯ ಹೇಳುವ ಕೆಲಸ ಮಾಡಿದ್ದಾರೆ ಈ ಕಿರುಚಿತ್ರಗಳ ನಿರ್ದೇಶಕರು. ಅಷ್ಟೇ ಚೆನ್ನಾಗಿ ಅಭಿನಯಿಸಿದ್ದಾರೆ ಕಲಾವಿದರು.
ಸಾಹಿತಿ ಜಯಂತ ಕಾಯ್ಕಿಣಿ, ನಟ ಶ್ರೀನಗರ ಕಿಟ್ಟಿ, ನಿರ್ಮಾಪಕರಾದ ಕೆ.ಮಂಜು, ಉದಯ್ ಕೆ ಮೆಹ್ತ, ನಿರ್ದೇಶಕ ಗಿರಿರಾಜ್ ಸೇರಿದಂತೆ ಮುಂತಾದ ಗಣ್ಯರು ಈ ಕಿರುಚಿತ್ರಗಳನ್ನು ವೀಕ್ಷಿಸಿ ಕಿರುಚಿತ್ರ ತಂಡವನ್ನು ಹಾಗೂ ಅವರಿಗೆ ಪ್ರೋತ್ಸಾಹ ನೀಡಿತ್ತಿರುವ ಸತ್ಯ ಹೆಗಡೆಯವರನ್ನು ಅಭಿನಂದಿಸಿದರು.
ಕಾರ್ಮಿಕರ ದಿನಾಚರಣೆ ಅಂಗವಾಗಿ ಚಿತ್ರರಂಗದಲ್ಲಿ ಹೆಚ್ಚು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವವರಿಗೆ ಸತ್ಯ ಹೆಗಡೆ ಈ ಸಂದರ್ಭದಲ್ಲಿ ಸನ್ಮಾನಿಸಿದರು.
Cinema News
ಪತಿಯ ನಿಧನದ ನೋವಿನಲ್ಲೂ ನಟಿ ಮೀನಾ ಮಾಡಿಕೊಂಡ ಮನವಿ ಏನು ಗೊತ್ತಾ?

Cinema News
ಜೋರಾಗಿದೆ “ಬಡ್ಡೀಸ್” ಗೆಲುವಿನ ಓಟ.

Cinema News
ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕ ಜೂ.ಎನ್ ಟಿ ಆರ್ ನಂಬರ್ ಗೆ ಕರೆ ಮಾಡಿ ಬೆಸ್ತು ಬಿದ್ದ ಅಭಿಮಾನಿಗಳು

Cinema News
ಮೀನಾ ಪತಿ ಸಾವಿಗೆ ಕಾರಣ ತಿಳಿಸಿದ ನಟಿ ಖುಷ್ಬೂ, ಅಷ್ಟಕ್ಕೂ ವಿದ್ಯಾಸಾಗರ್ ಗೆ ಆಗಿದ್ದೇನು ಗೊತ್ತಾ?

Cinema News
ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾರೆ ಬಾಲಿವುಡ್ ನಟಿ ಶೆನಾಜ್ ಟ್ರೆಜರಿ

-
Movie Reviews3 years ago
ವಿಕೇಂಡ್ಗೊಂದು ಮನ ಮುಟ್ಟುವ ಚಿತ್ರ – ವಿಮರ್ಶೆ – ರೇಟಿಂಗ್ – 3.25/5
-
Movie Reviews3 years ago
ರಾಮ್ ಜಾನುವಿನ ಮಧುರವಾದ ನೆನಪಿನ ಲವ್ಸ್ಟೋರಿ
-
Box Office3 years ago
ಮೂರು ದಿನಕ್ಕೆ “ಅವನೇ ಶ್ರೀಮನ್ನಾರಾಯಣ” ಗಳಿಸಿದ್ದು ಎಷ್ಟು ಕೋಟಿ?
-
Movie Reviews3 years ago
ಪಾರ್ವತಮ್ಮನ ಮಗಳಿಗೆ ಎಲ್ಲವೂ ಸಲೀಸು – ವಿಮರ್ಶೆ – ರೇಟಿಂಗ್ 3.5/5
-
Cinema News3 years ago
ಫಿಕ್ಸ್ ಆಯ್ತು ‘ಪೈಲ್ವಾನ್’ ಟ್ರೇಲರ್ ಬಿಡುಗಡೆ ದಿನಾಂಕ!
-
Box Office3 years ago
ಸ್ಯಾಂಡಲ್ ವುಡ್ ನಲ್ಲಿ ಸೋತ ಅಮ್ಮ – ಮಗ
-
Cinema News3 years ago
ಬಜಾರ್ ಧನ್ವೀರ್ಗೆ ಕಥೆ ಬರೆದ ಬಹದ್ದೂರ್ ಚೇತನ್
-
Reviews3 years ago
ದೆವ್ವಕ್ಕೂ ‘ಗಿಮಿಕ್’ ಮಾಡಿದ ಗಣೇಶ್ – ‘ಗಿಮಿಕ್’ ಟ್ರೇಲರ್ ವಿಮರ್ಶೆ
-
News3 years ago
‘ಗಟ್ಟಿಮೇಳ’ದ ಕ್ರಾಂತಿಯನ್ನು ನೇರವಾಗಿ ತರಲಿದೆ ”ಜೀ ಕನ್ನಡ”
-
News3 years ago
‘ನಾಯಕಿ’ಗೆ ಪ್ರಚಾರಕಿಯಾದ ನಟಿ ಹರಿಪ್ರಿಯಾ