Cinema News
ಮೇಘನರಾಜ್ ಅವರಿಗೆ ಪ್ರತಿಷ್ಠಿತ “FOG HERO” ಅವಾರ್ಡ್.

ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ “ಫೆಡರೇಷನ್ ಆಫ್ ಇಂಡೋ ಅಮೆರಿಕನ್ಸ್ ಆಫ್ ನಾರ್ತೆನ್ ಕ್ಯಾಲಿಫೋರ್ನಿಯಾ” ಇವರು ಆಯೋಜಿಸುವ “ಫೆಸ್ಟಿವಲ್ ಆಫ್ ಗ್ಲೋಬ್”(FOG) ಸಮಾರಂಭ ಕಳೆದ ನಲವತ್ತು ವರ್ಷಗಳಿಂದ ಅದ್ದೂರಿಯಾಗಿ ನಡೆದುಕೊಂಡು ಬರುತ್ತಿದೆ. ಈ ಬಾರಿ ಆಗಸ್ಟ್ 19, 20 ಹಾಗೂ 21 ರಂದು ಈ ಸಮಾರಂಭ ನಡೆಯಲಿದೆ. ಮೂರು ದಿನಗಳ ಕಾಲ ನಡೆಯುವ ಈ ಸಮಾರಂಭಕ್ಕೆ ಅಲ್ಲಿ ನೆಲೆಸಿರುವ ಭಾರತೀಯರು, ಸ್ಥಳೀಯರು ಸೇರಿದಂತೆ ಲಕ್ಷಕ್ಕೂ ಅಧಿಕ ಜನರು ಬರುವ ನಿರೀಕ್ಷೆಯಿದೆ. ಅಲ್ಲಿನ ರಾಜಕೀಯ ಪ್ರಮುಖರು, ಗಣ್ಯರು ಸಹ ಸಮಾರಂಭಕ್ಕೆ ಆಗಮಿಸುತ್ತಾರೆ. ಪ್ರತಿವರ್ಷ ಭಾರತದ ಸ್ವಾತಂತ್ರ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸುವ ಸಲುವಾಗಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಆಗಸ್ಟ್ 15ರ ಆಸುಪಾಸಿನ ದಿನಗಳಲ್ಲಿ ಈ ಹಬ್ಬ ಸಡಗರದಿಂದ ನಡೆಯಲಿದೆ. ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಅಲ್ಲಿ ನಡೆಯುತ್ತದೆ.
ಕಳೆದ ಎರಡು ವರ್ಷಗಳ ನಂತರ (ಕೊರೋನ ನಂತರ) ಈ ಬಾರಿ ಮತ್ತೆ ಅದ್ದೂರಿಯಾಗಿ ಈ ಹಬ್ಬವನ್ನು ಆಯೋಜಿಸಲಾಗಿದೆ. ಪ್ರತಿವರ್ಷ ಈ ಸಂದರ್ಭದಲ್ಲಿ ಭಾರತದಲ್ಲಿ ಸಾಧನೆ ಮಾಡಿರುವ ಗಣ್ಯರೊಬ್ಬರಿಗೆ “FOG HERO” ಅವಾರ್ಡ್” ನೀಡಲಾಗುತ್ತದೆ. ಹೆಚ್ಚಾಗಿ ಚಿತ್ರರಂಗದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಆಶಾ ಪರೇಕ್, ಅಮಿತಾಬ್ ಬಚ್ಚನ್, ದೇವಾನಂದ್, ವಿನೋದ್ ಖನ್ನಾ, ಧರ್ಮೇಂದ್ರ ಮುಂತಾದ ಸಿನಿರಂಗದ ಗಣ್ಯರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಬಾರಿ ದಕ್ಷಿಣ ಭಾರತದ ಖ್ಯಾತ ನಟಿ ಮೇಘನರಾಜ್ “F0G HERO” ಅವಾರ್ಡ್ ಗೆ ಭಾಜನರಾಗಿದ್ದಾರೆ. ಎಂದು ಕಾರ್ಯಕ್ರಮದ ಬಗ್ಗೆ ಹಾಗೂ ಪ್ರಶಸ್ತಿ ಪ್ರದಾನದ ಕುರಿತು ಸಂಸ್ಥೆಯ ಕ್ರಿಸ್ ಮೂರ್ತಿ ಮಾಹಿತಿ ನೀಡಿದರು.
ಅಮಿತಾಭ್ ಬಚ್ಚನ್, ಧರ್ಮೇಂದ್ರ ಮುಂತಾದ ಗಣ್ಯರು ಪಡೆದಿರುವ ಈ ಪ್ರತಿಷ್ಠಿತ ಪ್ರಶಸ್ತಿಗೆ ನಾನು ಭಾಜನಳಾಗಿರುವುದಕ್ಕೆ ತುಂಬಾ ಸಂತೋಷವಾಗಿದೆ. ಅಂತಹ ಮಹಾನ್ ನಟರಿಗೆ ಸಂದಿರುವ ಪ್ರಶಸ್ತಿಗೆ ಈ ಬಾರಿ ನಾನು ಆಯ್ಕೆಯಾಗಿರುವುದು ನನ್ನ ಪುಣ್ಯ. ನನ್ನ ತಂದೆಯ ಮೂಲಕ ಈ ವಿಷಯ ನನಗೆ ತಿಳಿಯಿತು. ಆಗಸ್ಟ್21 ರಂದು ನಡೆಯುವ ಅದ್ದೂರಿ ಸಮಾರಂಭದಲ್ಲಿ ಈ ಪ್ರಶಸ್ತಿ ಸ್ವೀಕರಿಸಲಿದ್ದೇನೆ. ಕನ್ನಡ ಚಿತ್ರರಂಗ ಈಗ ಇಡೀ ವಿಶ್ವದಾದ್ಯಂತ ಜನಪ್ರಿಯ. ಕನ್ನಡಿಗಳಾಗಿ ಈ ಪ್ರಶಸ್ತಿ ಸ್ವೀಕರಿಸುತ್ತಿರುವುದು ನನಗೆ ಹೆಚ್ಚಿನ ಖುಷಿಯಾಗಿದೆ ಎಂದರು ನಟಿ ಮೇಘನರಾಜ್.
Cinema News
ವಿಭಿನ್ನ ಶೀರ್ಷಿಕೆಯ ಭಗವಾನ್ ಶ್ರೀ ನಿತ್ಯಾನಂದ ಸಿನಿಮಾದ ಟೈಟಲ್ ಹಾಗೂ ಮೋಷನ್ ಪೋಸ್ಟರ್ ರಿಲೀಸ್…ಕನ್ನಡ ಸೇರಿದಂತೆ ಆರು ಭಾಷೆಯಲ್ಲಿ ಬರಲಿದೆ ಸಿನಿಮಾ

Cinema News
ವಿಭಿನ್ನ ಕಥಾಹಂದರದ “ಲೈನ್ ಮ್ಯಾನ್” ಚಿತ್ರಕ್ಕೆ ಚಾಮರಾಜನಗರದಲ್ಲಿ ಚಾಲನೆ.

Cinema News
ವಸಿಷ್ಠ ಬಂಟನೂರು ಸಾರಥ್ಯದ ‘1975’ ಸಿನಿಮಾ ಹಾಡು ರಿಲೀಸ್…’ಶುರುವಾಗಿದೆ’ ಲವ್ ಟ್ರ್ಯಾಕ್ ಕೇಳಿ!

Cinema News
ದರ್ಶನ್ ಅಭಿನಯದ ಡಿ56 ಚಿತ್ರಕ್ಕೆ ಚಾಲನೆ

Cinema News
“ಪದವಿಪೂರ್ವ” ದ ಮೂಲಕ “ಫ್ರೆಂಡ್ಸ್ ಇದ್ರೇನೆ ಜೀವನ” ಎನ್ನುತ್ತಿದ್ದಾರೆ ಯೋಗರಾಜ್ ಭಟ್

-
Movie Reviews3 years ago
ವಿಕೇಂಡ್ಗೊಂದು ಮನ ಮುಟ್ಟುವ ಚಿತ್ರ – ವಿಮರ್ಶೆ – ರೇಟಿಂಗ್ – 3.25/5
-
Movie Reviews3 years ago
ರಾಮ್ ಜಾನುವಿನ ಮಧುರವಾದ ನೆನಪಿನ ಲವ್ಸ್ಟೋರಿ
-
Box Office3 years ago
ಮೂರು ದಿನಕ್ಕೆ “ಅವನೇ ಶ್ರೀಮನ್ನಾರಾಯಣ” ಗಳಿಸಿದ್ದು ಎಷ್ಟು ಕೋಟಿ?
-
Movie Reviews3 years ago
ಪಾರ್ವತಮ್ಮನ ಮಗಳಿಗೆ ಎಲ್ಲವೂ ಸಲೀಸು – ವಿಮರ್ಶೆ – ರೇಟಿಂಗ್ 3.5/5
-
Cinema News3 years ago
ಫಿಕ್ಸ್ ಆಯ್ತು ‘ಪೈಲ್ವಾನ್’ ಟ್ರೇಲರ್ ಬಿಡುಗಡೆ ದಿನಾಂಕ!
-
Box Office3 years ago
ಸ್ಯಾಂಡಲ್ ವುಡ್ ನಲ್ಲಿ ಸೋತ ಅಮ್ಮ – ಮಗ
-
Cinema News3 years ago
ಬಜಾರ್ ಧನ್ವೀರ್ಗೆ ಕಥೆ ಬರೆದ ಬಹದ್ದೂರ್ ಚೇತನ್
-
Reviews3 years ago
ದೆವ್ವಕ್ಕೂ ‘ಗಿಮಿಕ್’ ಮಾಡಿದ ಗಣೇಶ್ – ‘ಗಿಮಿಕ್’ ಟ್ರೇಲರ್ ವಿಮರ್ಶೆ
-
News3 years ago
‘ಗಟ್ಟಿಮೇಳ’ದ ಕ್ರಾಂತಿಯನ್ನು ನೇರವಾಗಿ ತರಲಿದೆ ”ಜೀ ಕನ್ನಡ”
-
News3 years ago
‘ನಾಯಕಿ’ಗೆ ಪ್ರಚಾರಕಿಯಾದ ನಟಿ ಹರಿಪ್ರಿಯಾ