Cinema News
“ಘೋಸ್ಟ್” ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣ.

ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ “ಘೋಸ್ಟ್” ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.
ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸಲಾಗಿರುವ ಹದಿನೈದಕ್ಕೂ ಅಧಿಕ ಸೆಟ್ ಗಳಲ್ಲಿ 28ದಿನಗಳ ಚಿತ್ರೀಕರಣ ನಡೆದಿದೆ. ಶಿವರಾಜಕುಮಾರ್, ಜಯರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್ ಮುಂತಾದ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಮೋಹನ್ ಬಿ ಕೆರೆ ಈ ಚಿತ್ರದ ಕಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ದ್ವಿತೀಯ ಹಂತದ ಚಿತ್ರೀಕರಣ ಡಿಸೆಂಬರ್ ನಲ್ಲಿ ಮೈಸೂರಿನಲ್ಲಿ ಆರಂಭವಾಗಲಿದೆ.
ನಿರ್ದೇಶಕ ಶ್ರೀನಿ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ “ಘೋಸ್ಟ್ ” ಚಿತ್ರಕ್ಕಿದೆ. ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ.
ಶಿವರಾಜಕುಮಾರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Cinema News
ಮಧ್ವನವಮಿ ಶುಭಸಂದರ್ಭದಲ್ಲಿ “ಹನುಮ ಭೀಮ ಮಧ್ವ” ಚಿತ್ರದ ಬಗ್ಗೆ ಅಧಿಕೃತ ಘೋಷಣೆ .

Cinema News
ಎಸ್.ಎಲ್.ವಿ ಚಿತ್ರ ಬಿಡುಗಡೆಗೆ ಸಜ್ಜಾಗಿದೆ

Cinema News
ಸುಖಾಂತ್ಯ ಚಿತ್ರೀಕರಣ ಮುಕ್ತಾಯ

Cinema News
ದಳಪತಿ 67 ಚಿತ್ರಕ್ಕೆ ಲೋಕೇಶ್ ಕನಗರಾಜ್ ನಿರ್ದೇಶನ..

Cinema News
‘ದಸರಾ’ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಸಾಥ್ ನೀಡಿದ ಎಸ್. ಎಸ್ ರಾಜಮೌಳಿ – ಮಾಸ್ ಟೀಸರ್ ಗೆ ಸಿನಿ ಪ್ರೇಕ್ಷಕರು ಫಿದಾ

-
Movie Reviews4 years ago
ವಿಕೇಂಡ್ಗೊಂದು ಮನ ಮುಟ್ಟುವ ಚಿತ್ರ – ವಿಮರ್ಶೆ – ರೇಟಿಂಗ್ – 3.25/5
-
Movie Reviews4 years ago
ರಾಮ್ ಜಾನುವಿನ ಮಧುರವಾದ ನೆನಪಿನ ಲವ್ಸ್ಟೋರಿ
-
Movie Reviews4 years ago
ಪಾರ್ವತಮ್ಮನ ಮಗಳಿಗೆ ಎಲ್ಲವೂ ಸಲೀಸು – ವಿಮರ್ಶೆ – ರೇಟಿಂಗ್ 3.5/5
-
Box Office3 years ago
ಮೂರು ದಿನಕ್ಕೆ “ಅವನೇ ಶ್ರೀಮನ್ನಾರಾಯಣ” ಗಳಿಸಿದ್ದು ಎಷ್ಟು ಕೋಟಿ?
-
Cinema News3 years ago
ಫಿಕ್ಸ್ ಆಯ್ತು ‘ಪೈಲ್ವಾನ್’ ಟ್ರೇಲರ್ ಬಿಡುಗಡೆ ದಿನಾಂಕ!
-
Box Office4 years ago
ಸ್ಯಾಂಡಲ್ ವುಡ್ ನಲ್ಲಿ ಸೋತ ಅಮ್ಮ – ಮಗ
-
Cinema News4 years ago
ಬಜಾರ್ ಧನ್ವೀರ್ಗೆ ಕಥೆ ಬರೆದ ಬಹದ್ದೂರ್ ಚೇತನ್
-
Reviews4 years ago
ದೆವ್ವಕ್ಕೂ ‘ಗಿಮಿಕ್’ ಮಾಡಿದ ಗಣೇಶ್ – ‘ಗಿಮಿಕ್’ ಟ್ರೇಲರ್ ವಿಮರ್ಶೆ
-
News4 years ago
‘ಗಟ್ಟಿಮೇಳ’ದ ಕ್ರಾಂತಿಯನ್ನು ನೇರವಾಗಿ ತರಲಿದೆ ”ಜೀ ಕನ್ನಡ”
-
News4 years ago
‘ನಾಯಕಿ’ಗೆ ಪ್ರಚಾರಕಿಯಾದ ನಟಿ ಹರಿಪ್ರಿಯಾ