Cinema News

ಪ್ರೇಕ್ಷಕರ ಜೊತೆ ಕುಳಿತು ಸಿನಿಮಾ ವೀಕ್ಷಿಸಿದ್ದ 777 ಚಾರ್ಲಿ ಚಿತ್ರತಂಡ

Published

on

ರಕ್ಷಿತ್ ಶೆಟ್ಟಿ ನಟನೆಯ ಬಹು ನಿರೀಕ್ಷಿತ 777 ಚಾರ್ಲಿ ಸಿನಿಮಾ ಇಂದು ಅದ್ದೂರಿಯಾಗಿ ಬಿಡುಗಡೆ ಆಗಿದೆ. ಕಿರಣ್ ರಾಜ್ ನಿರ್ದೇಶನದ 777 ಚಾರ್ಲಿಗೆ ಅಭಿಮಾನಿಗಳಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತಿವಾಗಿದ್ದು ಸಿನಿಮಾ ನೋಡೋಕೆ ಪ್ರೇಕ್ಷಕರು ಹರಿದು ಬರ್ತಿದ್ದಾರೆ. ಥಿಯೇಟರ್ ಮುಂದೆ ಚಾರ್ಲಿನ ದೊಡ್ಡ ದೊಡ್ಡ ಕಟೌಟ್ ಗಳು ರಾರಾಜಿಸುತ್ತಿದ್ದು ಅಭಿಮಾನಿಗಳು ಮುಗಿ ಬಿದ್ದು ಸಿನಿಮಾ ವೀಕ್ಷಿಸುತ್ತಿದ್ದಾರೆ. ನಾಯಿ ಹಾಗೂ ಮನುಷ್ಯನ ನಡುವಿನ ಬಾಂಧವ್ಯದ ಕಥೆಯನ್ನ ಚಾರ್ಲಿ ಚಿತ್ರದಲ್ಲಿ ತೋರಿಸಲಾಗಿದ್ದು, ಸಿನಿಮಾಗೆ ಪ್ರೇಕ್ಷಕರು ಕ್ಲೀನ್ ಬೋಲ್ಡ್ ಆಗಿದ್ದಾರೆ. ಇನ್ನೂ ಚಿತ್ರತಂಡ ನಗರದ ತ್ರಿವೇಣಿ ಚಿತ್ರಮಂದಿರದಲ್ಲಿ ಪ್ರೇಕ್ಷಕರ ಜೊತೆ ಕುಳಿತು ಸಿನಿಮಾ ವೀಕ್ಷಿಸಿದ್ದು ಅಭಿಮಾನಿಗಳ ರೆಸ್ಪಾನ್ಸ್ ಗೆ ಮನಸೋತಿದ್ದಾರೆ.

Spread the love

Copyright © 2019 PopcornKannada.com