Cinema News
ಫಸ್ಟ್ ಲುಕ್ ನಲ್ಲೇ ಕುತೂಹಲ ಮೂಡಿಸಿದ “ವಿಐಪಿ” .ಇದು ವಸಿಷ್ಠ ಸಿಂಹ ಅಭಿನಯದ ಚಿತ್ರ

ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ “ವಿಐಪಿ” ಚಿತ್ರದ ಫಸ್ಟ್ ಲುಕ್ ಇತ್ತೀಚಿಗೆ ಬಿಡುಗಡೆಯಾಯಿತು.
![]()
ಅದಿಚುಂಚನಗಿರಿ ಮಠದ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಇವರ ದಿವ್ಯ ಸಾನಿಧ್ಯದಲ್ಲಿ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಯಿತು. ಈ ಸಂದರ್ಭದಲ್ಲಿ ನಾಯಕ ವಸಿಷ್ಠ ಸಿಂಹ ಹಾಗೂ ಚಿತ್ರತಂಡ ಉಪಸ್ಥಿತರಿದ್ದರು. ಫಸ್ಟ್ ಲುಕ್ ನಲ್ಲಿ ವಸಿಷ್ಠ ಸಿಂಹ ಬ್ಯಾಟ್ ಹಿಡಿದಿದ್ದಾರೆ. ಮಾಸ್ ಫೀಲ್ ಇರುವಂತಹ ಪೋಸ್ಟರ್ ಕುತೂಹಲ ಮೂಡಿಸಿದೆ.

ಬಹು ನಿರೀಕ್ಷಿತ ಈ ಚಿತ್ರಕ್ಕೆ ಈಗಾಗಲೇ ಬೆಂಗಳೂರು ಸುತ್ತಮುತ್ತ ಎರಡು ಹಂತಗಳ ಚಿತ್ರೀಕರಣ ನಡೆದಿದೆ. ಈ ಭಾಗದಲ್ಲಿ ಮಾತಿನ ಭಾಗದ ಚಿತ್ರೀಕರಣ ಹಾಗೂ “ಕೆ.ಜಿ.ಎಫ್” ಖ್ಯಾತಿಯ ವಿಕ್ರಂ ಮೋರ್ , “ಯುವ” ಖ್ಯಾತಿಯ ಅರ್ಜುನ್ ಅವರ ಸಾಹಸ ನಿರ್ದೇಶನದಲ್ಲಿ ಸಾಹಸ ಸನ್ನಿವೇಶಗಳ ಚಿತ್ರೀಕರಣ ನಡೆದಿದೆ.

ಕಲಾ ಸೃಷ್ಟಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್.ಎಸ್ . ಮೋಹನ್ ಕುಮಾರ್ ಹಾಗೂ ಆರ್ ಅಚ್ಯುತ್ ರಾವ್ ಅವರ ನಿರ್ಮಾಣದಲ್ಲಿ ಈ ಚಿತ್ರ ಅದ್ದೂರಿಯಾಗಿ ಮೂಡಿ ಬರುತ್ತಿದೆ. ಬ್ರಹ್ಮ ಈ ಚಿತ್ರದ ನಿರ್ದೇಶಕರು.

ವಿಭಿನ್ನ ಕಥಾಹಂದರ ಹಾಗೂ ಮೇಕಿಂಗ್ ನಿಂದ ಸದ್ದು ಮಾಡುತ್ತಿರುವ “ವಿಐಪಿ” ಚಿತ್ರದಲ್ಲಿ ವಸಿಷ್ಠ ಸಿಂಹ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶರ್ಮ ಅಭಿನಯಿಸುತ್ತಿದ್ದಾರೆ. ಸುನೀಲ್ ಪುರಾಣಿಕ್, ಬಲ ರಾಜವಾಡಿ , ಅಫ್ಜಲ್ , ಸ್ಪರ್ಶ ರೇಖಾ, ಸುಚೇಂದ್ರ ಪ್ರಸಾದ್ , ಹನುಮಂತೇಗೌಡ, ರಾಮ್ ಕಶ್ಯಪ್, ರಣವೀರ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ರಾಜೀವ್ ಗಣೇಸನ್ ಛಾಯಾಗ್ರಹಣ, ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ, ಸತೀಶ್ ಚಂದ್ರಯ್ಯ ಸಂಕಲನ ಈ ಚಿತ್ರದಲ್ಲಿರಲಿದೆ ಎಂದು ಕಾರ್ಯಕಾರಿ ನಿರ್ಮಾಪಕ ಅಫ್ಜಲ್ ತಿಳಿಸಿದ್ದಾರೆ.
