Cinema News
“ರುದ್ರ ಗರುಡ ಪುರಾಣ” ಚಿತ್ರದ ಯಶಸ್ಸಿನ ಖುಷಿ. ಮಾಧ್ಯಮದ ಮುಂದೆ ಹಂಚಿಕೊಂಡ ರಿಷಿ .
 
																								
												
												
											 
2025 ರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದ್ದ, ರಿಷಿ ನಾಯಕನಾಗಿ ನಟಿಸಿರುವ `ರುದ್ರ ಗರುಡ ಪುರಾಣ’ ಚಿತ್ರ ಕಳೆದವಾರ ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಖುಷಿಯನ್ನು ಹಂಚಿಕೊಳ್ಳಲು ಆಯೋಜಿಸಲಾಗಿದ್ದ ಸಕ್ಸಸ್ ಮೀಟ್ ನಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಮ್ಮ ಚಿತ್ರಕ್ಕೆ ಜನರು ತೋರುತ್ತಿರುವ ಒಲವು. ಈ ಚಿತ್ರದ ಗೆಲುವು ಎಂದು ಮಾತನಾಡಿದ ನಟ ರಿಷಿ, ಈ ಸಂದರ್ಭದಲ್ಲಿ ನಾನು ಮೊದಲು ಮಾಧ್ಯಮದವರನ್ನು ಅಭಿನಂದಿಸುತ್ತೇನೆ. ಅವರು ನಮ್ಮ ಚಿತ್ರದ ಬಗ್ಗೆ ಬರೆದ ಅದ್ಭುತ ವಿಮರ್ಶೆಗಳನ್ನು ನೋಡಿ ನಮ್ಮ ಚಿತ್ರಕ್ಕೆ ಹೆಚ್ಚು ಜನರು ಬರುತ್ತಿದ್ದಾರೆ. ಚಿತ್ರವನ್ನು ನೋಡುತ್ತಿರುವ ಪ್ರತಿಯೊಬ್ಬರು ಚಿತ್ರದ ಬಗ್ಗೆ ಪಾಸಿಟಿವ್ ಮಾತುಗಳನ್ನಾಡುತ್ತಿರುವುದು ಮನಸ್ಸಿಗೆ ತುಂಬಾ ಖುಷಿಯಾಗಿದೆ. ಐದು ದಿನಗಳಲ್ಲಿ ಥಿಯೇಟರ್ ಸಂಖ್ಯೆ ಕೂಡ ಗಣನೀಯವಾಗಿ ಹೆಚ್ಚಿಗೆ ಆಗಿದೆ. ತೆಲುಗು ಡಬ್ಬಿಂಗ್ ರೈಟ್ಸ್ ಸಹ ಉತ್ತಮ ಮೊತ್ತಕ್ಕೆ ಮಾರಾಟವಾಗಿದೆ. ಇನ್ನೂ ಹೆಚ್ಚಿನ ಜನರು ಕುಟುಂಬ ಸಮೇತ ಬಂದು ನಮ್ಮ ಚಿತ್ರ ನೋಡಿ ಎಂದು ಮನವಿ ಮಾಡಿದರು.

ನಿರ್ಮಾಪಕ ಲೋಹಿತ್ ಹಾಗೂ ನಿರ್ದೇಶಕ ನಂದೀಶ್ ಸಹ ಚಿತ್ರತಂಡದ ಸದಸ್ಯರಿಗೆ, ಮಾಧ್ಯಮದವರಿಗೆ ಹಾಗೂ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದರು.

ನಟರಾದ ಶಿವರಾಜ ಕೆ ಆರ್ ಪೇಟೆ, ಗಿರೀಶ್ ಶಿವಣ್ಣ, ಛಾಯಾಗ್ರಾಹಕ ಸಂದೀಪ್ ಕುಮಾರ್, ಸಂಕಲನಕಾರ ಮನು ಶೇಡ್ಗಾರ್, ಸಂಭಾಷಣೆ ಬರೆದಿರುವ ರಘು ನಿಡುವಳ್ಳಿ ಮುಂತಾದವರು “ರುದ್ರ ಗರುಡ ಪುರಾಣ” ದ ಯಶಸ್ಸನ್ನು ತಮ್ಮ ಮಾತುಗಳ ಮೂಲಕ ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಚಿತ್ರದ ತಂದೆ ಮಗನ ಬಾಂಧವ್ಯದ ಹಾಡೊಂದನ್ನು ಬಿಡುಗಡೆ ಮಾಡಲಾಯಿತು.
 
 
 
 
																	
																															 
			 
											 
											 
											 
											 
											 
											 
											 
											