Cinema News
`ಬ್ರಹ್ಮಚಾರಿ’ ಫರ್ಸ್ಟ್ ಶೆಡ್ಯೂಲ್ ಮುಗೀತು. ಮೇ 24ಕ್ಕೆ ಫರ್ಸ್ಟ್ ಲುಕ್ ರಿಲೀಸ್

ನೀನಾಸಂ ಸತೀಶ್ ನಾಯಕರಾಗಿ ನಟಿಸುತ್ತಿರುವ `ಬ್ರಹ್ಮಾಚಾರಿ` ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಈವರೆಗೂ ಬೆಂಗಳೂರಿನಲ್ಲೇ 27 ದಿನಗಳ ಚಿತ್ರೀಕರಣವಾಗಿದೆ. ಮಾತಿನ ಭಾಗದ ಚಿತ್ರೀಕರಣ ಬಹುತೇಕ ಮುಗಿದಿದೆ. ನೀನಾಸಂ ಸತೀಶ್, ಅದಿತಿ ಪ್ರಭುದೇವ, ದತ್ತಣ್ಣ, ಅಚ್ಯುತಕುಮಾರ್, ಶಿವರಾಜ್ ಕೆ.ಆರ್.ಪೇಟೆ, ಅಶೊಕ್, ಬಿರಾದಾರ್, ಗಿರಿಜಾ ಲೋಕೇಶ್ ಮುಂತಾದವರು ಮೊದಲ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಮೇ 24 ಕ್ಕೆ `ಬ್ರಹ್ಮಾಚಾರಿ` ಚಿತ್ರದ ಫರ್ಸ್ಟ್ ಲುಕ್ ಸಹ ಬಿಡುಗಡೆಯಾಗಲಿದೆ.

ಯು ಕೆ ಮೆಹ್ತ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಚಂದ್ರಮೋಹನ್ ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ `ಬಾಂಬೆ ಮಿಠಾಯಿ` ಹಾಗೂ `ಡಬ್ಬಲ್ ಇಂಜಿನ್` ಚಿತ್ರಗಳನ್ನು ಚಂದ್ರಮೋಹನ್ ನಿರ್ದೇಶಿಸಿದ್ದಾರೆ. ಕಾಮಿಡಿ ಹಾಗೂ ಕೌಟುಂಬಿಕ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.

ರವಿಕುಮಾರ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಧರ್ಮವಿಶ್ ಸಂಗೀತ ನೀಡುತ್ತಿದ್ದಾರೆ. ಅರ್ಜುನ್ ಕಿಟ್ಟು ಸಂಕಲನ, ಮುರಳಿ ನೃತ್ಯ ನಿರ್ದೇಶನ ಹಾಗೂ ಹೊಸ್ಮನೆ ಮೂರ್ತಿ, ಪ್ರಕಾಶ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
ನೀನಾಸಂ ಸಂತೀಶ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸುತ್ತಿದ್ದಾರೆ. ಶಿವರಾಜ್ ಕೆ.ಆರ್.ಪೇಟೆ, ಅಶೋಕ್, ಅಕ್ಷತ, ಅಚ್ಯುತಕುಮಾರ್, ಪದ್ಮಜಾರಾವ್, ದತ್ತಣ, ಬಿರಾದಾರ್, ಗಿರಿಜಾ ಲೋಕೇಶ್ ಮುಂತಾದವರ ತಾರಾಬಳಗದ ಜೊತೆಗೆ `ಮಜಾಭಾರತ`ದಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದ ನೂತನ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಚಿತ್ರದ ದ್ವಿತೀಯ ಹಂತದ ಚಿತ್ರೀಕರಣ ಈ ಮಾಸಂತ್ಯಕ್ಕೆ ಆರಂಭವಾಗಲಿದೆ.
