Connect with us

Cinema News

ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ “ಕ್ಯಾಲೆಂಡರ್”

Published

on

ಆದರ್ಶ ಗುಂಡುರಾಜ್ ಅಭಿನಯದ “ಕ್ಯಾಲೆಂಡರ್” ಚಿತ್ರ ಇದೇ ವಾರ ಏಪ್ರಿಲ್ 10ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಹಿಂದೆ “ಸ್ವಾರ್ಥ ರತ್ನ” ಸೇರಿದಂತೆ ಎರಡು ಸಿನಿಮಾಗಳಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ಅವರು, ಈ ಚಿತ್ರದಲ್ಲಿ ಮತ್ತೆ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಮಹಿಳಾ ಪ್ರಧಾನ ಕಥಾಹಂದರ ಹೊಂದಿರುವ ಈ ಸಿನಿಮಾ ಟ್ರೇಲರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಪ್ರೇಕ್ಷಕರ ಗಮನ ಸೆಳೆದಿದೆ.

ಈ ಚಿತ್ರವನ್ನು ಆದರ್ಶ ಗುಂಡುರಾಜ್ ಸ್ವತಃ ನಿರ್ಮಿಸಿದ್ದು, ನಾಯಕನಾಗಿಯೂ ನಟಿಸಿದ್ದಾರೆ. ನಿವಿಷ್ಕ ಪಾಟೀಲ್ ಹಾಗೂ ಸುಶ್ಮಿತ ನಾಯಕಿಯರಾಗಿ ಅಭಿನಯಿಸಿದ್ದು, ಕನಸಿನ ರಾಣಿ ಮಾಲಾಶ್ರೀ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಮೇಶ್ ಇಂದಿರಾ, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮ್ಮಿನಾಡು, ಸುಚೇಂದ್ರ ಪ್ರಸಾದ್ ಹಾಗೂ ಚಂದ್ರಪ್ರಭ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಸುನಾದ್ ಗೌತಮ್ ಸಂಗೀತ ನೀಡಿರುವ ಈ ಚಿತ್ರಕ್ಕೆ ರಮೇಶ್ ಕೊಯಿರಾ ಛಾಯಾಗ್ರಹಣ ಮಾಡಿದ್ದಾರೆ. ಕೆಜಿಎಫ್ ಖ್ಯಾತಿಯ ವಿಕ್ರಂ ಮೋರ್ ಸಾಹಸ ನಿರ್ದೇಶನ, ಭಜರಂಗಿ ಮೋಹನ್ ನೃತ್ಯ ಸಂಯೋಜನೆ, ಸುರೇಶ್ ಆರ್ಮುಗಂ ಸಂಕಲನ ಹಾಗೂ ಮಹಾಂತೇಶ್ ಆರ್ ಸಹ ನಿರ್ದೇಶನವಿದೆ. ಈ ಚಿತ್ರವನ್ನು ನವೀನ್ ಶಕ್ತಿ ನಿರ್ದೇಶಿಸಿದ್ದು, ವಿಭಿನ್ನ ಕಥೆಯೊಂದಿಗೆ ಪ್ರೇಕ್ಷಕರ ಮುಂದೆ ಬರುತ್ತಿದೆ.

Spread the love

Continue Reading