Connect with us

Cinema News

ಸಿಂಪಲ್ ಸುನಿ ಚಿತ್ರದ ‘ಮೋಡ ಕವಿದ ವಾತಾವರಣ’ಗೆ ಯು/ಎ ಪ್ರಮಾಣ ಪತ್ರ

Published

on

ಸಿಂಪಲ್ ಸುನಿ ಸಾರಥ್ಯದಲ್ಲಿ ನಿರ್ಮಾಣವಾಗಿರುವ ‘ಮೋಡ ಕವಿದ ವಾತಾವರಣ’ ಸಿನಿಮಾ ತನ್ನ ವಿಭಿನ್ನ ಶೀರ್ಷಿಕೆ ಹಾಗೂ ಯುವ ಪ್ರೇಮಕಥೆಯ ಮೂಲಕ ಈಗಾಗಲೇ ಸಿನಿಪ್ರಿಯರ ಗಮನ ಸೆಳೆದಿದೆ. ಜೂನ್ 26ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿರುವ ಈ ಚಿತ್ರ ಇದೀಗ ಸೆನ್ಸಾರ್ ಪ್ರಕ್ರಿಯೆ ಪೂರ್ಣಗೊಳಿಸಿದ್ದು, ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ದೊರೆತಿದೆ. ವಿಶೇಷವೆಂದರೆ ಯಾವುದೇ ಕಟ್ ಅಥವಾ ಮ್ಯೂಟ್ ಇಲ್ಲದೆ ಸಿನಿಮಾ ಕ್ಲಿಯರ್ ಆಗಿದೆ.

ಈ ಚಿತ್ರದ ಮೂಲಕ ಸುನಿ ತಮ್ಮ ಶಿಷ್ಯ ಶೀಲಮ್ ಅವರನ್ನು ಪೂರ್ಣ ಪ್ರಮಾಣದ ನಾಯಕನಾಗಿ ಪರಿಚಯಿಸುತ್ತಿದ್ದಾರೆ. ಈಗಾಗಲೇ ಹಲವು ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಶೀಲಮ್, ಇದೀಗ ಈ ಚಿತ್ರದ ಮೂಲಕ ನಾಯಕನಾಗಿ ಹೊಸ ಪಯಣ ಆರಂಭಿಸಿದ್ದಾರೆ. ಅವರ ಜೊತೆಯಲ್ಲಿ ಸಾತ್ವಿಕಾ ಹಾಗೂ ಮೋಕ್ಷಾ ಕುಶಾಲ್ ನಾಯಕಿಯರಾಗಿ ಅಭಿನಯಿಸಿದ್ದಾರೆ.

ಹದಿಹರೆಯದ Gen-G ಪ್ರೇಮಕಥೆ ಹೊಂದಿರುವ ಈ ಸಿನಿಮಾವನ್ನು ‘ಒಂದು ಸರಳ ಪ್ರೇಮಕಥೆ’ ನಿರ್ಮಿಸಿದ್ದ ರಾಮ್ ಮೂವೀಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗಿದೆ. ಮೈಸೂರು ರಮೇಶ್, ಶ್ರೀರಂಗರಾಜು, ಲೋಕೇಶ್ ಬೆಳವಾಡಿ ಹಾಗೂ ಗೋವಾ ರಮೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಚಿತ್ರಕ್ಕೆ ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಮಾಡಿದ್ದು, ಜೂಡಾ ಸ್ಯಾಂಡಿ ಸಂಗೀತ ಸಂಯೋಜನೆ ನೀಡಿದ್ದಾರೆ. ಆದಿತ್ಯ ಕಶ್ಯಪ್ ಸಂಕಲನ ಕಾರ್ಯ ನಿರ್ವಹಿಸಿದ್ದಾರೆ. ಈಗಾಗಲೇ ಬಿಡುಗಡೆಯಾದ ಸಂಜಿತ್ ಹೆಗಡೆ ಹಾಡಿರುವ ‘ನನ್ನೆದೆಯ ಹಾಡೊಂದನು’ ಹಾಗೂ ಸಂಗೀತಾ ಹಾಡಿರುವ ‘ಯಯಾತಿ’ ಹಾಡುಗಳು ಪ್ರೇಕ್ಷಕರ ಮನಗೆದ್ದಿವೆ. ಚಿತ್ರದ ಆಡಿಯೋ ಹಕ್ಕುಗಳನ್ನು ಸರೆಗಮ ಉತ್ತಮ ಮೊತ್ತಕ್ಕೆ ತನ್ನದಾಗಿಸಿಕೊಂಡಿದೆ.

Spread the love

Continue Reading