Connect with us

Cinema News

ವಿಜಯ ರಾಘವೇಂದ್ರ ಹುಟ್ಟುಹಬ್ಬಕ್ಕೆ “ಮಹಾನ್” ತಂಡದಿಂದ ಸ್ಪೆಷಲ್ ಲುಕ್ ಬಿಡುಗಡೆ

Published

on

ಆಕಾಶ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ “ಮಹಾನ್” ಚಿತ್ರ ಇದೀಗ ಸಿನಿಪ್ರೇಮಿಗಳ ಗಮನ ಸೆಳೆಯುತ್ತಿದೆ. ಸದಭಿರುಚಿಯ ಕಥೆಗಳ ಮೂಲಕ ಗುರುತಿಸಿಕೊಂಡಿರುವ ನಿರ್ದೇಶಕ ಪಿ.ಸಿ.ಶೇಖರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಪ್ರತಿಭಾವಂತ ನಟ ವಿಜಯ ರಾಘವೇಂದ್ರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರೈತರ ಬದುಕು ಮತ್ತು ಅವರ ಹೋರಾಟದ ಸುತ್ತ ಕಥೆ ಸಾಗಲಿದ್ದು, ವಿಜಯ ರಾಘವೇಂದ್ರ ಈ ಸಿನಿಮಾದಲ್ಲಿ ನೈಜ ರೈತನ ಪಾತ್ರವನ್ನು ನಿರ್ವಹಿಸಿದ್ದಾರೆ.

ನಟ ವಿಜಯ ರಾಘವೇಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ವಿಶೇಷ ಪೋಸ್ಟರ್ ಹಾಗೂ ಹೊಸ ಲುಕ್ ಬಿಡುಗಡೆ ಮಾಡಿ ಶುಭಾಶಯ ಕೋರಿದೆ. ಬಿಡುಗಡೆಯಾದ ಲುಕ್‌ನಲ್ಲಿ ವಿಜಯ ರಾಘವೇಂದ್ರ ಸಂಪೂರ್ಣ ಗ್ರಾಮೀಣ ಶೈಲಿಯಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರದ ಕಥಾಹಂದರ ಹಾಗೂ ಪಾತ್ರದ ಆಯ್ಕೆ ಬಗ್ಗೆ ಈಗಾಗಲೇ ಸಾಕಷ್ಟು ಕುತೂಹಲ ಮೂಡಿದೆ.

ಚಿತ್ರದ ನಿರ್ಮಾಪಕರಾದ ಪ್ರಕಾಶ್ ಬುದ್ದೂರು ಯಾವುದೇ ರಾಜಿ ಮಾಡಿಕೊಳ್ಳದೆ ಅದ್ದೂರಿಯಾಗಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಕನ್ನಡದಲ್ಲಿ ಹಲವು ಗುಣಮಟ್ಟದ ಚಿತ್ರಗಳನ್ನು ನೀಡಿರುವ ಪಿ.ಸಿ.ಶೇಖರ್ ಅವರ ನಿರ್ದೇಶನದ ಹನ್ನೊಂದನೇ ಚಿತ್ರ ಎಂಬ ಕಾರಣಕ್ಕೂ “ಮಹಾನ್” ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಆರಂಭದಿಂದಲೇ ಚಿತ್ರದ ಕುರಿತಾಗಿ ಕೇಳಿಬರುತ್ತಿರುವ ಸುದ್ದಿಗಳು ಸಿನಿರಸಿಕರಲ್ಲಿ ವಿಶೇಷ ಆಸಕ್ತಿ ಹುಟ್ಟಿಸಿವೆ.

“ಮಹಾನ್” ಚಿತ್ರದಲ್ಲಿ ವಿಜಯ ರಾಘವೇಂದ್ರ ಜೊತೆಗೆ ರಾಧಿಕಾ ನಾರಾಯಣ್, ಮಿತ್ರ, ನಮ್ರತಾ ಗೌಡ, ವರ್ಷ ಬೊಳ್ಳಮ್ಮ ಹಾಗೂ ಕಿರಣ್ ಶ್ರೀನಿವಾಸ್ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ವಿಭಿನ್ನ ಕಥಾವಸ್ತು ಹಾಗೂ ಭಾವನಾತ್ಮಕ ಅಂಶಗಳನ್ನು ಒಳಗೊಂಡಿರುವ ಈ ಸಿನಿಮಾ ಶೀಘ್ರದಲ್ಲೇ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ.

Spread the love

Continue Reading