Connect with us

Cinema News

ಶೂಟಿಂಗ್ ಕಂಪ್ಲೀಟ್; ಪೋಸ್ಟ್ ಪ್ರೊಡಕ್ಷನ್ ಹಂತಕ್ಕೆ ‘ಲವ್ ಕೇಸ್’

Published

on

ಎಂ.ಬಿ. ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಮೋಹನ್ ಬಾಬು ನಿರ್ಮಿಸುತ್ತಿರುವ, ಜೈಶ್ ನಿರ್ದೇಶನದ ಬಹುನಿರೀಕ್ಷಿತ ‘ಲವ್ ಕೇಸ್’ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ. ಆರಂಭದಿಂದಲೇ ತನ್ನ ವಿಭಿನ್ನ ಕಥಾಹಂದರ ಮತ್ತು ತಾರಾಬಳಗದ ಕಾರಣ ಸಿನಿಪ್ರಿಯರ ಗಮನ ಸೆಳೆದಿದ್ದ ಈ ಚಿತ್ರ ಇದೀಗ ನಿರ್ಮಾಣ ಹಂತವನ್ನು ಮುಗಿಸಿ, ಮುಂದಿನ ಹಂತದತ್ತ ಹೆಜ್ಜೆ ಇಟ್ಟಿದೆ.

ಚಿತ್ರದ ಕೊನೆಯ ದಿನದ ಚಿತ್ರೀಕರಣ ಬೆಂಗಳೂರಿನ ನಾಗರಭಾವಿಯ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನೆರವೇರಿತು. ಸಂಪ್ರದಾಯದಂತೆ ಕುಂಬಳಕಾಯಿ ಒಡೆದು ಚಿತ್ರತಂಡ ಚಿತ್ರೀಕರಣಕ್ಕೆ ಶುಭ ಸಮಾಪ್ತಿ ಘೋಷಿಸಿತು. ಈ ಸಂದರ್ಭದಲ್ಲಿ ಕಲಾವಿದರು ಮತ್ತು ತಾಂತ್ರಿಕ ವರ್ಗದ ಸದಸ್ಯರು ಚಿತ್ರದ ಪಯಣದ ಕುರಿತು ಸಂತಸ ಹಂಚಿಕೊಂಡರು.

‘ಲವ್ ಕೇಸ್’ ಚಿತ್ರದಲ್ಲಿ ಶ್ರೀನಗರ ಕಿಟ್ಟಿ, ಪ್ರಮೋದ್ ಶೆಟ್ಟಿ, ಸುಧಾರಾಣಿ, ನಾಗಭೂಷಣ್, ‘ಮಹಾನಟಿ’ ಖ್ಯಾತಿಯ ವಂಶಿ ಹಾಗೂ ‘ಸ.ಹಿ.ಪ್ರಾ. ಶಾಲೆ ಕಾಸರಗೋಡು’ ಮತ್ತು ‘ಕಾಂತಾರ’ ಚಿತ್ರಗಳ ಮೂಲಕ ಪರಿಚಿತರಾದ ರಂಜನ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ವಿಭಿನ್ನ ಪಾತ್ರಗಳ ಮೂಲಕ ಈ ಕಲಾವಿದರು ಪ್ರೇಕ್ಷಕರಿಗೆ ಹೊಸ ಅನುಭವ ನೀಡಲಿದ್ದಾರೆ ಎಂಬ ವಿಶ್ವಾಸ ಚಿತ್ರತಂಡಕ್ಕಿದೆ.

ಆದಿ ಹರಿಕೃಷ್ಣ ಸಂಗೀತ ಸಂಯೋಜನೆ, ಕೆ.ಎಸ್. ಚಂದ್ರಶೇಖರ್ ಅವರ ಛಾಯಾಗ್ರಹಣ ಹಾಗೂ ಅನುಕೃಷ್ಣ ಅವರ ಸಂಕಲನ ಚಿತ್ರಕ್ಕಿದೆ. ಹಲವು ವಿಶೇಷ ಅಂಶಗಳನ್ನು ಒಳಗೊಂಡಿರುವ ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಈಗ ವೇಗವಾಗಿ ಸಾಗುತ್ತಿವೆ. ಶೀಘ್ರದಲ್ಲೇ ಚಿತ್ರದ ಟೀಸರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡುವ ಯೋಜನೆ

Spread the love

Continue Reading