Connect with us

Cinema News

‘ಬೆಲ್ ಬಾಟಮ್’ ನಿರ್ಮಾಪಕರ ‘ಹುಬ್ಬಳ್ಳಿ ಹಂಟರ್ಸ್’ ಪೋಸ್ಟ್ ಪ್ರೊಡಕ್ಷನ್ ಅಂತಿಮ ಹಂತಕ್ಕೆ

Published

on

‘ಬೆಲ್ ಬಾಟಮ್’ ಖ್ಯಾತಿಯ ನಿರ್ಮಾಪಕ ಸಂತೋಷ್ ಕುಮಾರ್ ಕೆ.ಸಿ. ಅವರ ಸಾರಥ್ಯದಲ್ಲಿ ‘ಗೋಲ್ಡನ್ ಹಾರ್ಸ್ ಸಿನಿಮಾ’ ಬ್ಯಾನರ್‌ನಡಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಹುಬ್ಬಳ್ಳಿ ಹಂಟರ್ಸ್’ ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ವೇಗ ಪಡೆದುಕೊಂಡಿದೆ. ಜುಲೈ ಆರಂಭದಲ್ಲೇ ಚಿತ್ರೀಕರಣ ಮುಗಿಸಿದ್ದ ಚಿತ್ರತಂಡ ಇದೀಗ ಡಬ್ಬಿಂಗ್ ಕಾರ್ಯವನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ನಿರ್ದೇಶಕ ಸಮರ್ಥ್ ಬಿ. ಕಡಕೊಳ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಹೆಸರೇ ಹೇಳುವಂತೆ ಉತ್ತರ ಕರ್ನಾಟಕದ ಸೊಗಡನ್ನು ಒಳಗೊಂಡಿರುವ ವಿಭಿನ್ನ ಕಥಾಹಂದರ ಚಿತ್ರದಲ್ಲಿದೆ. ಹುಬ್ಬಳ್ಳಿಯಲ್ಲಿ ಮುಹೂರ್ತ ನೆರವೇರಿಸಿ ಚಿತ್ರೀಕರಣ ಆರಂಭಿಸಿದ್ದ ತಂಡ, ಮೊದಲ ಹಂತದಲ್ಲಿ 14 ದಿನ ಹುಬ್ಬಳ್ಳಿಯ ವಿವಿಧೆಡೆ ಶೂಟಿಂಗ್ ನಡೆಸಿದೆ. ಬಳಿಕ ಶಿರಸಿಯಲ್ಲಿ 22 ದಿನ ಹಾಗೂ ಧಾರವಾಡದಲ್ಲಿ 2 ದಿನಗಳ ಕಾಲ ಚಿತ್ರೀಕರಣ ನಡೆಸಿ ಸಂಪೂರ್ಣ ಶೂಟಿಂಗ್ ಮುಗಿಸಲಾಗಿದೆ. ಕಥೆಯ ನೈಜತೆಯನ್ನು ಹೆಚ್ಚಿಸಲು ನೈಜ ಸ್ಥಳಗಳಲ್ಲೇ ಬಹುತೇಕ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ.

ಚೇತನ್ ಮಾರಂಬೀಡ್, ಪವನ್ ಕುಲಕರ್ಣಿ, ಸುಮಿತ್ ಸಂಕೋಜಿ, ನಮನ್ ಅರೋರ, ದೀಪಕ್ ರಾವ್, ಶಿವು ಗುಂಡಣ್ಣನವರ್, ವಿನಯ್ ದೊಡ್ಡಮನಿ, ಧನ್ಯ ಸುಜೀತ್ ಹಾಗೂ ಪವನ್ ಅಣ್ಣೆಗೇರಿ ಸೇರಿದಂತೆ ಹಲವರು ಚಿತ್ರದಲ್ಲಿ ನಟಿಸಿದ್ದಾರೆ. ‘ಮಹಾನಟಿ’ ರಿಯಾಲಿಟಿ ಶೋ ಖ್ಯಾತಿಯ ಧನ್ಯಶ್ರೀ ಸುಜಿತ್ ಮತ್ತು ವನು ಪಾಟೀಲ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್ ಹಾಗೂ ಕೃಷ್ಣ ಹೆಬ್ಬಾಳೆ ಕೂಡ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದು, ಹಲವು ಜನಪ್ರಿಯ ಸೋಷಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್‌ಗಳು ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.

ಸಮರ್ಥ್ ಬಿ. ಕಡಕೊಳ್ ಕಥೆ ಬರೆದಿದ್ದು, ರಾಹುಲ್ ವಿ. ಪಾರ್ವತಿಕರ್, ಅಮಿತ್ ಕಾರ್ವ್ಕರ್ ಹಾಗೂ ಚೇತನ್ ಮರಂಬೀದ್ ಅವರೊಂದಿಗೆ ಸೇರಿ ಸಂಭಾಷಣೆ ರಚಿಸಿದ್ದಾರೆ. ಅಭಿಮನ್ಯು ಸದಾನಂದನ್ ಛಾಯಾಗ್ರಹಣ ಮತ್ತು ಪ್ರಸನ್ನ ಕೇಶವ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಡಬ್ಬಿಂಗ್ ಕೆಲಸವೂ ಪೂರ್ಣಗೊಂಡಿರುವುದರಿಂದ ‘ಹುಬ್ಬಳ್ಳಿ ಹಂಟರ್ಸ್’ ಇದೀಗ ಅಂತಿಮ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗುತ್ತಿದೆ.

Spread the love

Continue Reading