Connect with us

Cinema News

ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಪ್ರಣಿತಾ ಸುಭಾಷ್

Published

on

ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಬೇಬಿ ಬಂಪ್ ಫೋಟೋ ಹಂಚಿಕೊಂಡಿದ್ದ ಪ್ರಣಿತಾ ಸುಭಾಷ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಈ ಬಗ್ಗೆ ನಟಿ ಪ್ರಣಿತಾ ಸುಭಾಷ್ ಸೋಷಿಯಲ್ ಮೀಡಿಯಾದಲ್ಲಿ ಸಂಭ್ರಮ ಹಂಚಿಕೊಂಡಿದ್ದಾರೆ. ಫೋಟೋ ಹಂಚಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಸಂಗತಿಯನ್ನು ತಿಳಿಸಿದ್ದು, ಹೆರಿಗೆ ಮಾಡಿಸಿದ ವೈದ್ಯರಿಗೆ ಧನ್ಯವಾದ ತಿಳಿಸಿದ್ದಾರೆ.
” ನಮಗೆ ಹೆಣ್ಣು ಮಗು ಜನಿಸಿದ ಘಳಿಗೆಯಿಂದಲೂ ಕಳೆದ ಕೆಲವು ದಿನಗಳು ಅತಿವಾಸ್ತವಿಕ ಅಂತ ಅನಿಸುತ್ತಿದೆ. ಸ್ತ್ರೀ ರೋಗ ತಜ್ಞೆಯಾಗಿರುವ ಅಮ್ಮನನ್ನು ಪಡೆದಿರುವುದಕ್ಕೆ ನಾನು ಅದೃಷ್ಟವಂತೆ. ಯಾವುದೇ ಒತ್ತಡವಿಲ್ಲದೇ, ಸರಾಗವಾಗಿ ಹೆರಿಗೆಯಾಯಿತು. ಇದು ನನ್ನ ತಾಯಿಗೂ ಭಾವನಾತ್ಮಕವಾಗಿ ತುಂಬಾ ಕಠಿಣವಾದ ಸಮಯವಾಗಿತ್ತು ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಕನ್ನಡ ಸಿನಿಮಾದ ಮೂಲಕ ವೃತ್ತಿ ಜೀವನ ಆರಂಭಿಸಿದ ಪ್ರಣಿತಾ ಸುಭಾಷ್ ಬಳಿಕ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಯಲ್ಲೂ ನಟಿಸಿದ್ದರು. ಕೊರೊನಾ ಸಮಯದಲ್ಲಿ ಪ್ರಣಿತಾ ಸುಭಾಷ್ ಆಪ್ತರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ಉದ್ಯಮಿ ನಿತಿನ್ರಾಜು ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

Spread the love

Continue Reading