Cinema News
777 ಚಾರ್ಲಿಗೆ 6 ತಿಂಗಳು ತೆರಿಗೆ ವಿನಾಯಿತಿ ನೀಡಿದ ಸರ್ಕಾರ

ಬೆಂಗಳೂರು: ನಟ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾಗೆ ಸರ್ಕಾರ 6 ತಿಂಗಳ ಸಂಪೂರ್ಣ ತೆರಿಗೆ ವಿನಾಯಿತಿ ಘೋಷಿಸಿದೆ.
ಶ್ವಾನ ಸ್ವಾಸ್ಥ್ಯದ ಕುರಿತು ಜಾಗೃತಿ ಮೂಡಿಸುವ, ಪ್ರಾಣಿ ಹಿಂಸೆಯ ಸೂಕ್ಷ್ಮತೆಯನ್ನು ಎತ್ತಿ ಹಿಡಿದಿರುವ ಹಾಗೂ ಬೀದಿ ನಾಯಿಗಳನ್ನು ದತ್ತು ಪಡೆಯುವುದರ ಬಗ್ಗೆ ಸಂದೇಶವಿರುವ ಹಿನ್ನೆಲೆಯಲ್ಲಿ 777ಚಾರ್ಲಿ ಸಿನಿಮಾ ಮೂಡಿ ಬಂದಿದೆ. ಈಗಾಗ್ಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿನಿಮಾ ವೀಕ್ಷಿಸಿ ಕಣ್ಣೀರು ಹಾಕಿದ್ದರು. ಜೊತೆಗೆ ಪರಭಾಷೆಯ ಕಲಾವಿಧರು ಚರ್ಲಿಗೆ ಜೈ ಎಂದಿದ್ದರು. ಇದೀಗ ಈ ಸಿನಿಮಾಗೆ ಸರ್ಕಾರ ಶೇ.100 ರಷ್ಟು ತೆರಿಗೆ ವಿನಾಯಿತಿ ನೀಡಿದೆ.
ಕನ್ನಡದಲ್ಲಿ ನಿರ್ಮಾಣವಾಗಿರುವ 777ಚಾರ್ಲಿ ಸಿನಿಮಾ ಮಳಯಾಳಂ, ತಮಿಳು, ತೆಲುಗು ಹಾಗೂ ಹಿಂದಿ ಭಾಷೆಗಳಿಗೆ ಡಬ್ ಆಗಿದ್ದು, ದೇಶಾದ್ಯಂತ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ. ವಿಭಿನ್ನ ಸಂದೇಶವಿರುವ ಸಿನಿಮಾವನ್ನು ಎಲ್ಲರೂ ನೋಡಬೇಕು ಎಂಬ ಕಾರಣಕ್ಕೆ ಸರ್ಕಾರ ಇಂದಿನಿಂದ (ಜೂ. 19) ಟಿಕೆಟ್ಗೆ ತೆರಿಗೆ ವಿನಾಯಿತಿ ನೀಡಿದೆ. ಈಗಾಗಲೇ ಸಂಗ್ರಹವಾಗಿರುವ ಜಿಎಸ್ಟಿ ಪ್ರದರ್ಶಕರಿಗೆ ಮರುಪಾವತಿ ಮಾಡಲು ಸರ್ಕಾರ ಸೂಚಿಸಿದೆ.

