Cinema News
ಜೇಮ್ಸ್ ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆರೋಗ್ಯ ಸ್ಥಿತಿ ಗಂಭೀರ..!

ಪುನೀತ್ ರಾಜ್ಕುಮಾರ್ ನಟನೆಯ ಜೇಮ್ಸ್ ಚಿತ್ರಕ್ಕೆ ಬಂಡವಾಳ ಹೂಡಿದ್ದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೃದಯ ಬಡಿತದಲ್ಲಿ ವ್ಯತ್ಯಾಸ ಆಗಿದೆ ಎಂಬ ಮಾಹಿತಿ ಕೇಳಿಬಂದಿದ್ದು, ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ.
ಕಿಶೋರ್ ಹೈಬಿಪಿಯಿಂದ ಕೋಮಾಗೆ ಹೋಗಿದ್ದಾರೆ. ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಕಿಶೋರ್ ಪತ್ತಿಕೊಂಡ ಅವರಿಗೆ ಶೇಷಾದ್ರಿಪುರಂನ ಅಪೋಲೊ ಆಸ್ಪತ್ರೆಯ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಪ್ತರು ಮಾಹಿತಿ ನೀಡಿದ್ದಾರೆ.
‘ಜೇಮ್ಸ್’ ಚಿತ್ರದ ಯಶಸ್ಸಿನ ಬಳಿಕ ಕಿಶೋರ್ ಪತ್ತಿಕೊಂಡ ಅವರು ಮುಂದಿನ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡರು. ರಾಜ್ಕುಮಾರ್ ಮೊಮ್ಮಗ ಧೀರೇನ್ ರಾಮ್ಕುಮಾರ್ ನಟನೆಯ ಹೊಸ ಚಿತ್ರಕ್ಕೆ ಅವರು ಬಂಡವಾಳ ಹೂಡುತ್ತಿದ್ದಾರೆ. ಸದ್ಯ ಕಿಶೋರ್ ಅವರ ಆರೋಗ್ಯದಲ್ಲಿ ಏರುಪೇರು ಆಗಿರುವುದರಿಂದ ಎಲ್ಲರಲ್ಲೂ ಆತಂಕ ಮೂಡಿದೆ.

Continue Reading