Connect with us

Television News

ಬೆಂಗಳೂರಿನಲ್ಲಿ ಬಂಧಿತನಾಗಿದ್ದ ಉಗ್ರನ ಮಾಹಿತಿ ಕಲೆ ಹಾಕಿದ ಪೊಲೀಸರು

Published

on

ಬೆಂಗಳೂರಿನಲ್ಲಿ ಬಂಧನಕ್ಕೆ ಒಳಗಾಗಿದ್ದ ಉಗ್ರ ತಾಲಿಬ್ ಹುಸೇನ್ಗೆ ಸಂಬಂಧಿಸಿದ ಮಾಹಿತಿ ಬೆಂಗಳೂರು ಪೊಲೀಸರಿಗೆ ಸಿಕ್ಕಿದೆ. ಕಾಶ್ಮೀರ ಪೊಲೀಸರನ್ನು ಸಂಪರ್ಕಿಸಿದ್ದ ಗುಪ್ತಚರ ಇಲಾಖೆ ಪೊಲೀಸರು, ಎರಡೇ ದಿನದಲ್ಲಿ ತಾಲಿಬ್ ಹುಸೇನ್ ಕುರಿತ ರಿಪೋರ್ಟ್ ರೆಡಿ ಮಾಡಿದ್ದಾರೆ
ಹುಸೇನ್ ವಿರುದ್ಧ ಎರಡು ಕೇಸ್ಗಳು ದಾಖಲಾಗಿರುವ ಬಗ್ಗೆ ಮಾಹಿತಿಯಿದ್ದು, 2007-08ರಲ್ಲಿ ನಡೆದ ಕೆಲವು ಅಪರಾಧ ಕೃತ್ಯಗಳ ಬಗ್ಗೆ ಪೊಲಿಸರು ತನಿಖೆ ನಡೆಸುತ್ತಿದ್ದಾರೆ. ತಾಲಿಬ್ ಹುಸೇನ್ ಬಗ್ಗೆ ಸಿದ್ದವಾಗಿರುವ ವರದಿಯನ್ನ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿಗೆ ಸಲ್ಲಿಸಲಾಗಿದೆ.
ಜಮ್ಮು-ಕಾಶ್ಮೀರದ ಕಿಸ್ತಾವರ್ ಠಾಣೆಯಲ್ಲಿ ಯುಎಪಿಎ ಕಾಯ್ದೆ ಮತ್ತು ಸ್ಫೋಟಕ ಕಾಯ್ದೆಯಡಿ ತಾಲಿಬ್ ಹುಸೇನ್ ವಿರುದ್ಧ ಕೇಸ್ ದಾಖಲಾಗಿವೆ. ಹೀಗಾಗಿ ಉಗ್ರನ ಇಂಚಿಂಚು ಮಾಹಿತಿ ಕಲೆ ಹಾಕಲು ಪೊಲೀಸರು ಮುಂದಾಗಿದ್ದಾರೆ. ಬೆಂಗಳೂರಲ್ಲಿ ಉಗ್ರ ತಾಲಿಬ್ ಹುಸೇನ್ ಬಂಧನವಾಗಿರುವ ಹಿನ್ನೆಲೆ ನಗರದ ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ನಿಗಾವಹಿಸಲು ಎಟಿಸಿಗೆ ನಗರ ಪೊಲೀಸ್ ಕಮಿಷನರ್ ಸೂಚನೆ ನೀಡಿದ್ದಾರೆ.

Spread the love

Continue Reading
Click to comment

Leave a Reply

Your email address will not be published. Required fields are marked *