Cinema News
ಆತ್ಮಹತ್ಯೆಗೆ ಶರಣಾದ ಖ್ಯಾತ ಫ್ಯಾಷನ್ ಡಿಸೈನರ್

ಹೈದರಾಬಾದ್: ಖ್ಯಾತ ಫ್ಯಾಷನ್ ಡಿಸೈನರ್ ಪ್ರತ್ಯುಷಾ ಗರಿಮೆಲ್ಲಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರತ್ಯುಷಾ ಮೃತದೇಹ ಹೈದರಾಬಾದ್ ನ ಬಂಜಾರಾ ಹಿಲ್ಸ್ ನಲ್ಲಿರುವ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಪ್ರತ್ಯುಷಾ ಕಾರ್ಬನ್ ಮೊನಾಕ್ಸೈಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಪ್ರತ್ಯುಷಾ ಮಲಗುವ ಕೋಣೆಯಲ್ಲಿ ಕಾರ್ಬನ್ ಮೊನಾಕ್ಸೈಡ್ ಸಿಲಿಂಡರ್ ಪತ್ತೆಯಾಗಿದ್ದು ಅದನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿರೋ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ಕಳುಹಿಸಿದ್ದಾರೆ.
ದೇಶದ ಟಾಪ್ 30 ಫ್ಯಾಷನ್ ಡಿಸೈನರ್ ಗಳಲ್ಲಿ ಒಬ್ಬರಾಗಿದ್ದ ಪ್ರತ್ಯುಷಾ ಚಿತ್ರರಂಗದ ಸೆಲೆಬ್ರಿಟಿಗಳಿಗೆ ಫ್ಯಾಷನ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದರು. ಪ್ರಕರಣ ದಾಖಲಿಸಿಕೊಂಡಿರೋ ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ.

Continue Reading