Television News

ಮತ್ತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ಪವಿತ್ರ ಲೋಕೇಶ್

Published

on

ಕಳೆದ ಕೆಲವು ದಿನಗಳಿಂದ ತೆಲುಗು ನಟ ನರೇಶ್ ಹಾಗೂ ನಟಿ ಪವಿತ್ರ ಲೋಕೇಶ್ ಸಾಕಷ್ಟು ಸುದ್ದಿಯಾಗ್ತಿದ್ದಾರೆ. ಮದುವೆ, ಸಂಸಾರದ ಕುರಿತು ಒಂದಲ್ಲ ಒಂದು ಸುದ್ದಿಗಳು ಹರಿದಾಡ್ತಿದ್ದು ಇದೀಗ ಮತ್ತೆ ಪವಿತ್ರ ಲೋಕೇಶ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಈ ಹಿಂದೆ ತಮ್ಮ ಹೆಸರಿನಲ್ಲಿ ಫೇಸ್ ಬುಕ್ ಖಾತೆ ತೆರೆದು ಸುಳ್ಳು ಸುದ್ದಿ ಹಾಕಲಾಗುತ್ತಿದೆ ಎಂದು ದೂರು ನೀಡಿದ್ದ ನಟಿ ಪವಿತ್ರ ಲೋಕೇಶ್ ಇದೀಗ ಮತ್ತೆ ಠಾಣೆ ಮೆಟ್ಟಿಲೇರಿದ್ದಾರೆ. ತಮ್ಮನ್ನು ಯಾರೋ ಹಿಂಬಾಲಿಸುತ್ತಿದ್ದಾರೆ ಎಂದು ನಗರದ ವಿವಿ ಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನಟಿ ಪವಿತ್ರಾ ಲೋಕೇಶ್ ಇಂದು ಬೆಂಗಳೂರಿನಿಂದ ಮೈಸೂರಿಗೆ ಆಗಮಿಸುತ್ತಿದ್ದರು. ಈ ವೇಳೆ ಅವರನ್ನ ಕೆಲವರು ಹಿಂಬಾಲಿಸಿದ್ದಾರೆ ಎನ್ನಲಾಗ್ತಿದೆ. ಹೀಗಾಗಿ ಮೈಸೂರಿಗೆ ಆಗಮಿಸಿದ ತಕ್ಷಣವೇ ಅವರು ನಗರದ ವಿವಿ ಪುರಂ ಠಾಣೆಗೆ ಹೋಗಿ ದೂರು ನೀಡಿದ್ದಾರೆ. ನಂತರ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಹೊರಟು ಹೋದರು.
ಜೂನ್ 19ರಂದು ತಮ್ಮ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಸುಳ್ಳು ಸುದ್ದಿಗಳು ಹಾಗೂ ಮಾನಹಾನಿ ಅಂತಹ ಫೋಟೋಗಳನ್ನ ಹಾಕಲಾಗುತ್ತಿದೆ. ಅಲ್ಲದೇ, ಅಶ್ಲೀಲ ಸಂದೇಶಗಳನ್ನೂ ಕಳುಹಿಸಲಾಗುತ್ತಿದೆ. ಆದ್ದರಿಂದ ಈ ರೀತಿ ತೇಜೋವಧೆ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮೈಸೂರು ಸೈಬರ್ ಠಾಣೆಗೆ ದೂರು ನೀಡಿದ್ದರು. ಇದೀಗ ಮತ್ತೆ ಪವಿತ್ರ ಲೋಕೇಶ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

Spread the love

Copyright © 2019 PopcornKannada.com