Cinema News
ಸೈಬರ್ ಠಾಣೆ ಮೆಟ್ಟಿಲೇರಿದ ನಟಿ ಪವಿತ್ರ ಲೋಕೇಶ್

ಮೈಸೂರು: ಅಪರಿಚಿತ ವ್ಯಕ್ತಿಯೊಬ್ಬ ತಮ್ಮ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು, ಆಶ್ಲೀಲ ಸಂದೇಶಗಳನ್ನು ಕಳಿಸುತ್ತಿದ್ದಾರೆ ಎಂದು ನಟಿ ಪವಿತ್ರ ಲೋಕೇಶ್ ಮೈಸೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಪರಿಚಿತ ವ್ಯಕ್ತಿಯು ತಮ್ಮ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದು, ನನ್ನ ಬಗ್ಗೆ ಆಶ್ಲೀಲ ಸಂದೇಶ ಹಾಗೂ ಸುಳ್ಳು ಸುದ್ದಿಗಳನ್ನು ಜಾಲತಾಣಗಳಲ್ಲಿ ಹಾಕುತ್ತಿದ್ದಾರೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಟಿ ಪವಿತ್ರ ಲೋಕೇಶ್ ದೂರಿನಲ್ಲಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಮೈಸೂರು ಸೈಬರ್ ಠಾಣೆ ಪೊಲೀಸರು ನಕಲಿ ಖಾತೆ ಮೂಲಕ ಪವಿತ್ರ ಲೋಕೇಶ್ ಅವರ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿರುವ ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ.

Continue Reading