Cinema News

ಮದುವೆಯ ಬಗ್ಗೆ ಮನ ಬಿಚ್ಚಿ ಮಾತನಾಡಿದ ನಟಿ ಸಾಯಿ ಪಲ್ಲವಿ

Published

on

ಸಿಂಪಲ್ ಬ್ಯೂಟಿ ಸೌತ್ ಸಿನಿಮಾ ರಂಗದ ನಟಿ ಸಾಯಿ ಪಲ್ಲವಿ ತಮ್ಮ ಅಮೋಘ ಅಭಿನಯದ ಮೂಲಕ ಮನೆಮಾತಾಗಿದ್ದಾರೆ. ಸಾಯಿ ಪಲ್ಲವಿ ಮದುವೆಯಾಗೋ ಹುಡುಗ ಯಾವ ರೀತಿ ಇರ್ಬೇಕು ಅನ್ನೋದನ್ನ ಸಾಕಷ್ಟು ಮಂದಿ ಕೇಳ್ತಿರ್ತಾರೆ. ಇದೀಗ ಸಾಯಿ ಪಲ್ಲವಿ ತಾವು ಮದುವೆಯಾಗೋ ಹುಡುಗ ಹೇಗಿರ್ಬೇಕು ಅನ್ನೋದನ್ನ ಹೇಳಿದ್ದಾರೆ.
ಸಾಯಿಪಲ್ಲವಿ ಸದ್ಯದಲ್ಲೇ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಆದ್ರೆ ಸಾಲು ಸಾಲು ಚಿತ್ರಗಳು ಅನೌನ್ಸ್ ಮಾಡುವ ಮೂಲಕ ಮದುವೆಯ ಸುದ್ದಿಗೆ ಬ್ರೇಕ್ ಹಾಕಿದ್ದರು. ಇದೀಗ ಸಂದರ್ಶನವೊಂದರಲ್ಲಿ ತಮ್ಮ ಮದುವೆ ಕನಸಿನ ಬಗ್ಗೆ ಸಾಯಿಪಲ್ಲವಿ ಮಾತನಾಡಿದ್ದಾರೆ.
ಕೋವಿಡ್ ಸಮಯದಲ್ಲಿ ನನಗೆ ಮದುವೆ ಆಗುವಂತೆ ಪೋಷಕರಿಂದ ಒತ್ತಾಯಿಸಿದ್ದರು. ಅದಕ್ಕೂ ಮುನ್ನ ನಾನು ಸಾಕಷ್ಟು ಸಮಯ ಸಿನಿಮಾ ಶೂಟಿಂಗ್ನಲ್ಲಿಯೇ ಭಾಗವಹಿಸುತ್ತಿದ್ದೆ, ಹಾಗಾಗಿ ನನ್ನ ಪೋಷಕರಿಗೂ ಭಯವಾಗುತ್ತಿತ್ತು. ಜತೆಗೆ ಗ್ರಾಮದಲ್ಲಿ ನನ್ನ ಜೊತೆಗಿದ್ದ ಸಾಕಷ್ಟು ನನ್ನ ವಯಸ್ಸಿನ ಯುವತಿಯರಿಗೆ ಮದುವೆಯಾಗಿತ್ತು. ಹಾಗಾಗಿ ಸಹಜವಾಗಿ ನನಗೂ ಮದುವೆಯಾಗುವಂತೆ ಮನೆಯಲ್ಲಿ ಒತ್ತಾಯಿಸುತ್ತಿದ್ದರು ಎಂದಿದ್ದಾರೆ.
ನನಗೆ 18ನೇ ವಯಸ್ಸಿನಲ್ಲಿ ಒಂದು ಕನಸಿತ್ತು. ನನಗೆ 23 ವಯಸ್ಸಿಗೆ ಮದುಯಾಗುತ್ತದೆ, 30 ವಯಸ್ಸಿನಲ್ಲಿ ಇಬ್ಬರು ಮಕ್ಕಳಿರುತ್ತಾರೆ ಎಂದು ಕನಸು ಕಂಡಿದ್ದೆ. ಆದರೆ ಈಗ ದಾಂಪತ್ಯದ ಕುರಿತು ಯೋಚನೆ ಮಾಡಿದ್ರೆ, ನಾನು ಮದುವೆಯಾಗದಿದ್ದು ಒಳ್ಳೆಯದು ಅನಿಸುತ್ತಿದೆ. ಮದುವೆಯೆಂಬ ಜವಾಬ್ದಾರಿಯನ್ನ ತೆಗೆದುಕೊಳ್ಳಲು ಪರಿಪಕ್ವತೆ ಬೇಕು. ಮಡದಿಯಾಗಿ, ತಾಯಿಯಾಗಿ ಅವರ ಬೆಂಬಲಕ್ಕೆ ನಿಲ್ಲಬೇಕು. ಈಗ ಇಷ್ಟು ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.
ಮದುವೆಯ ವಿಚಾರದಲ್ಲಿ ನನಗೆ ಸಂಪೂರ್ಣ ಸ್ವಾತಂತ್ರ್ಯವಿದೆ. ಆದರೆ ಹುಡುಗ ಯಾರು ಸೆಲೆಕ್ಟ್ ಮಾಡ್ತಾರೆ ಗೊತ್ತಿಲ್ಲ. ಪೋಷಕರು ಆದ್ರು ಓಕೆ, ನಾನು ಹೇಳಿದ್ರು ಸರಿ ಸದ್ಯ ಈ ಕುರಿತು ಯೋಚನೆ ಮಾಡಿಲ್ಲ ಅಂತಾ ಸಾಯಿಪಲ್ಲವಿ ಮದುವೆಯ ಬಗ್ಗೆ ಮಾತನಾಡಿದ್ದಾರೆ.

Spread the love
Click to comment

Copyright © 2019 PopcornKannada.com