Cinema News

ಅಜಯ್‌ರಾವ್‌ಗೆ ಜತೆಯಾದ ಸಂಜನಾ ಆನಂದ್‌

Published

on

ಕೆಮಿಸ್ಟ್ರಿ ಆಫ್‌ ಕರಿಯಪ್ಪ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದ ನಟಿ ಸಂಜನಾ ಆನಂದ್‌ ಈಗ ಅಜಯ್‌ರಾವ್‌ ನಟನೆಯ ಹೊಸ ಚಿತ್ರಕ್ಕೆ ಆಯ್ಕೆಯಾಗಿದ್ದಾರೆ.

 

ಜಾಕಿ ತಿಮ್ಮೇಗೌಡ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಚಿತ್ರಕ್ಕೆ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಟಿ ಆರ್‌ ಚಂದ್ರಶೇಖರ್‌ ಬಂಡವಾಳ ಹೂಡುತ್ತಿದ್ದಾರೆ. 

 

ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾದಲ್ಲಿ ಸಂಜನಾ ಆನಂದ್ ಪಾತ್ರ ಎಲ್ಲರಿಗೂ ಇಷ್ಟವಾಗಿತ್ತು. ಹಾಗಾಗಿ ಈ ಸಿನಿಮಾಗೂ ಅವರು ಆಯ್ಕೆಯಾಗಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ.

 

ಈ ಚಿತ್ರಕ್ಕೆ ಜಾಕಿ ತಿಮ್ಮೆಗೌಡ ಎಂಬುವವರು ನಿರ್ದೇಶನ ಮಾಡುತ್ತಿದ್ದಾರೆ. ಜೂನ್ನಲ್ಲಿ ಶೂಟಿಂಗ್ ಆರಂಭವಾಗಲಿದೆ. ಮಂಡ್ಯ, ಚನ್ನಪಟ್ಟಣ, ಮದ್ದೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದ್ದು, ಶ್ರೀಧರ್ ವಿ. ಸಂಭ್ರಮ್ ಸಂಗೀತ, ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆಯುತ್ತಿದ್ದಾರೆ. 

Spread the love
Click to comment

Copyright © 2019 PopcornKannada.com