Cinema News

ಬಿಡುಗಡೆಯಾಯ್ತು `ಅರ್ಜುನ್ ಗೌಡ’ ಚಿತ್ರದ ಆ್ಯಕ್ಷನ್ ಪ್ರೋಮೋ!

Published

on

ನಿರ್ಮಾಪಕ ರಾಮು ಅವರು ನಿರ್ಮುಸುತ್ತಿರುವ `ಅರ್ಜುನ್ ಗೌಡ` ಚಿತ್ರದ ಆ್ಯಕ್ಷನ್ ಟೀಸರ್ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬದಂದು ಬಿಡುಗಡೆಯಾಯಿತು. ಪ್ರಜ್ವಲ್ ನಾಯಕಾರಾಗಿ ನಟಿಸುತ್ತಿರುವ ಈ ಚಿತ್ರದ ಟೀಸರನ್ನು ಡೈನಾಮಿಕ್ ಸ್ಟಾರ್ ದೇವರಾಜ್ ಬಿಡುಗಡೆ ಮಾಡಿದರು.

 

 

ರಾಮು ಅವರು ನಿರ್ಮಿಸಿದ್ದ `ಲಾಕಪ್‍ಡೆತ್` ಮೊದಲಾದ ಚಿತ್ರಗಳಲ್ಲಿ ದೇವರಾಜ್ ಅವರು ಅಭಿನಯಿಸಿದ್ದರು. ಈಗ ಅವರದೇ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ `ಅರ್ಜುನ್ ಗೌಡ` ಚಿತ್ರದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ನಾಯಕರಾಗಿ ಅಭಿನಯಿಸುತ್ತಿದ್ದು, ದೇವರಾಜ್ ಅವರೆ ಟೀಸರ್ ಬಿಡುಗಡೆ ಮಾಡಿರುವುದು ವಿಶೇಷ.

 

 

ಶಂಕರ್ ರಚನೆ ಹಾಗೂ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಧರ್ಮವಿಶ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಜೈಆನಂದ್ ಅವರ ಛಾಯಾಗ್ರಹಣವಿದೆ. ಅರ್ಜುನ್ ಕಿಟ್ಟು ಸಂಕಲನ, ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

 

ಪ್ರಜ್ವಲ್ ದೇವರಾಜ್, ಪ್ರಿಯಾಂಕ ತಿಮ್ಮೇಶ್, ಸಾಧುಕೋಕಿಲ, ರೇಖ, ಕಡ್ಡಿಪುಡಿ ಚಂದ್ರು, ಅರವಿಂದ್, ದೀಪಕ್ ಶೆಟ್ಟಿ, ಪ್ರಕಾಶ್, ಯಮುನ ಶ್ರೀನಿಧಿ, ಭಜರಂಗಿ ಚೇತನ್, ಜೀವ, ಸೂರಜ್, ದಿನೇಶ್ ಮಂಗಳೂರು, ಹನುಮಂತೇಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

 

Spread the love
Click to comment

Copyright © 2019 PopcornKannada.com