Television News
ಕುವೈತ್ ಸೂಪರ್ ಮಾರ್ಕೆಟ್ ನಲ್ಲಿ ಭಾರತದ ಉತ್ಪನ್ನಗಳಿಗೆ ಬಹಿಷ್ಕಾರ.

ಕುವೈತ್: ಭಾರತದ ಆಡಳಿತ ಪಕ್ಷದ ನಾಯಕರು ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿದೆ. ಇರಾನ್ ವಿದೇಶಾಂಗ ಸಚಿವಾಲಯ ಭಾರತದ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಬೆನ್ನಲ್ಲೇ ಕುವೈತ್ ಸೂಪರ್ ಮಾರ್ಕೆಟ್ ನಲ್ಲಿ ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಲಾಗಿದೆ.
ಅಲ್-ಅರ್ದಿಯಾ ಕೋ-ಆಪರೇಟಿವ್ ಸೊಸೈಟಿ ಅಂಗಡಿಯ ಕಾರ್ಮಿಕರು ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿ ಪ್ರತಿಭಟಿಸಿದ್ದಾರೆ. ಭಾರತೀಯ ಚಹಾ ಮತ್ತು ಇತರ ಉತ್ಪನ್ನಗಳನ್ನು ಟ್ರಾಲಿಗಳಲ್ಲಿ ರಾಶಿ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ.
ಕುವೈತ್ ಸಿಟಿಯ ಹೊರಗಿರುವ ಸೂಪರ್ ಮಾರ್ಕೆಟ್ನಲ್ಲಿ ಭಾರತದ ಅಕ್ಕಿಯ ಚೀಲಗಳು, ಮಸಾಲೆಗಳು, ಮೆಣಸಿನಕಾಯಿ ಹಾಗೂ ಇತರ ಉತ್ಪನ್ನಗಳನ್ನು ಪ್ಲಾಸ್ಟಿಕ್ ಹಾಳೆಗಳಿಂದ ಮುಚ್ಚಲಾಗಿದೆ. ಜೊತೆಗೆ “ನಾವು ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಿದ್ದೇವೆ” ಎಂದು ಅರೇಬಿಕ್ ಭಾಷೆಯಲ್ಲಿ ಬರೆಯಲಾಗಿದೆ.
ಸೌದಿ ಅರೇಬಿಯಾ, ಕತಾರ್ ಮತ್ತು ಇತರ ದೇಶಗಳು ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿದ್ದ ನೂಪುರ್ ಶರ್ಮಾ ಅವರ ಹೇಳಿಕೆಯನ್ನು ಖಂಡಿಸಿವೆ.
