Cinema News

ಮಾತಿನಮನೆಯಲ್ಲಿ “chef ಚಿದಂಬರ”

Published

on

 

ನಟ ಅನಿರುದ್ಧ್ ಜತಕರ್ ನಾಯಕನಾಗಿ ಅಭಿನಯಿಸಿರುವ ಹಾಗೂ “ರಾಘು” ಚಿತ್ರದ ಖ್ಯಾತಿಯ ನಿರ್ದೇಶಕ ಎಂ.ಆನಂದರಾಜ್ ನಿರ್ದೇಶನದ “chef ಚಿದಂಬರ” ಚಿತ್ರದ ಚಿತ್ರೀಕರಣ ಇತ್ತೀಚಿಗೆ ಮುಕ್ತಾಯವಾಗಿದೆ. ಪ್ರಸ್ತುತ ಲೂಪ್ ಸ್ಟುಡಿಯೋದಲ್ಲಿ ಚಿತ್ರಕ್ಕೆ ಮಾತಿನ ಜೋಡಣೆ (ಡಬ್ಬಿಂಗ್) ನಡೆಯುತ್ತಿದೆ. ನಾಯಕ ಅನಿರುದ್ದ್ ಮಾತಿನ ಮೂಲಕ ತಮ್ಮ ಪಾತ್ರಕ್ಕೆ ಜೀವ ತುಂಬುತಿದ್ದಾರೆ.

ಡಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರದಲ್ಲಿ ಅನಿರುದ್ಧ್ ಶೆಫ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ.
ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, “ವಿಕ್ರಾಂತ್ ರೋಣ” ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ “ಲವ್ ಮಾಕ್ಟೇಲ್” ಖ್ಯಾತಿಯ ರೆಚೆಲ್ ಡೇವಿಡ್‌ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್‌, ಶಿವಮಣಿ ಮುಂತಾದವರು “chef ಚಿದಂಬರ” ಚಿತ್ರದ ತಾರಾಬಳಗದಲ್ಲಿದ್ದಾರೆ.

Spread the love

Copyright © 2019 PopcornKannada.com