Cinema News
ಚಿರು ಸರ್ಜಾ ಅಭಿನಯದ `ಶಿವಾರ್ಜುನ’ ಪಕ್ಕಾ ಕಮರ್ಷಿಯಲ್ ಎಂಟರ್‌ಟೇನರ್
 
																								
												
												
											 
ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಎಂ.ಬಿ.ಮಂಜುಳಾ ಶಿವಾರ್ಜುನ್ ಅವರು ನಿರ್ಮಿಸಿರುವ, ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸಿರುವ ಪಕ್ಕಾ ಕಮರ್ಷಿಯಲ್ ಎಂಟರ್‌ಟೇನರ್ `ಶಿವಾರ್ಜುನ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಶಿವತೇಜಸ್ ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಹೆಚ್.ಸಿ.ವೇಣು ಅವರ ಛಾಯಾಗ್ರಹಣವಿದೆ. ಸುರಾಗ್ ಸಂಗೀತ ನಿರ್ದೇಶನ, ಸಾಧುಕೋಕಿಲ ಹಿನ್ನೆಲೆ ಸಂಗೀತ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ, ವಿನೋದ್, ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಯೋಗರಾಜ್ ಭಟ್, ಡಾ||ವಿ.ನಾಗೇಂದ್ರಪ್ರಸಾದ್ ಹಾಗೂ ಕವಿರಾಜ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ.
ಚಿರಂಜೀವಿ ಸರ್ಜಾ, ಅಮೃತ ಐಯ್ಯಂಗಾರ್, ಅಕ್ಷತ ಶ್ರೀನಿವಾಸ್, ಕಿಶೋರ್, ತಾರಾ, ಅವಿನಾಶ್, ಕುರಿ ಪ್ರತಾಪ್, ದಿನೇಶ್ ಮಂಗಳೂರು, ಸಾಧುಕೋಕಿಲ, ರವಿ ಕಿಶನ್, ತರಂಗ ವಿಶ್ವ, ಕೆ.ಆರ್.ಪೇಟೆ ಶಿವರಾಜ್, ನಯನ ಮುಂತಾದವರಿದ್ದಾರೆ.

 
 
																	
																															
															Continue Reading
														
																																																																																																
															 
			 
											 
											 
											 
											 
											 
											 
											 
											