Cinema News

ಚಿರು ಸರ್ಜಾ ಅಭಿನಯದ `ಶಿವಾರ್ಜುನ’ ಪಕ್ಕಾ ಕಮರ್ಷಿಯಲ್ ಎಂಟರ್‌ಟೇನರ್

Published

on

ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಎಂ.ಬಿ.ಮಂಜುಳಾ ಶಿವಾರ್ಜುನ್ ಅವರು ನಿರ್ಮಿಸಿರುವ, ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸಿರುವ ಪಕ್ಕಾ ಕಮರ್ಷಿಯಲ್ ಎಂಟರ್‌ಟೇನರ್ `ಶಿವಾರ್ಜುನ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

 

ಶಿವತೇಜಸ್ ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಹೆಚ್.ಸಿ.ವೇಣು ಅವರ ಛಾಯಾಗ್ರಹಣವಿದೆ. ಸುರಾಗ್ ಸಂಗೀತ ನಿರ್ದೇಶನ, ಸಾಧುಕೋಕಿಲ ಹಿನ್ನೆಲೆ ಸಂಗೀತ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ, ವಿನೋದ್, ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಯೋಗರಾಜ್ ಭಟ್, ಡಾ||ವಿ.ನಾಗೇಂದ್ರಪ್ರಸಾದ್ ಹಾಗೂ ಕವಿರಾಜ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ.

 

ಚಿರಂಜೀವಿ ಸರ್ಜಾ, ಅಮೃತ ಐಯ್ಯಂಗಾರ್, ಅಕ್ಷತ ಶ್ರೀನಿವಾಸ್, ಕಿಶೋರ್, ತಾರಾ, ಅವಿನಾಶ್, ಕುರಿ ಪ್ರತಾಪ್, ದಿನೇಶ್ ಮಂಗಳೂರು, ಸಾಧುಕೋಕಿಲ, ರವಿ ಕಿಶನ್, ತರಂಗ ವಿಶ್ವ, ಕೆ.ಆರ್.ಪೇಟೆ ಶಿವರಾಜ್, ನಯನ ಮುಂತಾದವರಿದ್ದಾರೆ.

 

Spread the love
Click to comment

Copyright © 2019 PopcornKannada.com