Cinema News
ಕಪಿಲ್ ದೇವ್ ಪತ್ನಿಯ ಪಾತ್ರದಲ್ಲಿ ದೀಪಿಕಾ

ರಣ್ ವೀರ್ ಸಿಂಗ್ ನಟನೆಯ ‘83’ ಸಿನಿಮಾದಲ್ಲಿ ನಾಯಕಿಯಾಗಿ ದೀಪಿಕಾ ಪಡುಕೋಣೆ ನಟಿಸುವುದು ಕನ್ಫರ್ಮ್ ಆಗಿದೆ.

83 ಚಿತ್ರ 1983ರಲ್ಲಿ ವಿಶ್ವಕಪ್ ಗೆದ್ದ ಕಥೆಯನ್ನು ಆಧರಿಸಿದೆ. ಈ ಸಿನಿಮಾದಲ್ಲಿ ರಣ್‌ವೀರ್ ಸಿಂಗ್ ಕಪಿಲ್ ದೇವ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಕಬೀರ್ ಖಾನ್ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಕಪಿಲ್ ದೇವ್ ಪತ್ನಿಯ ರೊಮಿ ದೇವ್ ಪಾತ್ರದಲ್ಲಿ ದೀಪಿಕಾ ಕಾಣಿಸಿಕೊಳ್ಳಲಿದ್ದಾರಂತೆ. ಈ ವಿಷಯವನ್ನು ಸ್ವತಃ ದೀಪಿಕಾ ಪಡುಕೋಣೆ ಟ್ವೀಟರ್ ಮೂಲಕ ಅನೌನ್ಸ್ ಮಾಡಿದ್ದಾರೆ.
ಇನ್ನು ಇದೇ ಸಮಯದಲ್ಲಿ ಬ್ಯಾಟ್‌ನಲ್ಲಿ ರಣ್‌ವೀರ್ ಸಿಂಗ್‌ಗೆ ಹೊಡೆಯುತ್ತಿರುವ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದು ಈಗ ವೈರಲ್ ಆಗಿದೆ. ಅಲ್ಲದೆ ದೀಪಿಕಾ ಮತ್ತು ರಣ್‌ವೀರ್ ಮದುವೆಯಾದ ಮೇಲೆ ಒಟ್ಟಿಗೆ ನಟಿಸುತ್ತಿರುವ ಮೊದಲ ಚಿತ್ರ ಇದಾಗಲಿದೆ.

Continue Reading