News

ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ .

Published

on

ನಿರ್ದೇಶಕರಾಗಿ, ನಿರ್ಮಾಪಕರಾಗಿ ಹಾಗೂ ನಟರಾಗಿ ಜನಮನಸೂರೆಗೊಂಡಿರುವ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ತಮ್ಮ ಹುಟ್ಟುಹಬ್ಬದ ದಿನ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಆಗಮಿಸಿ ಕುಟುಂಬ ಸಮೇತ ದೇವರ ದರ್ಶನ ಪಡೆದುಕೊಂಡಿದ್ದಾರೆ.

 

 

 

ಇದರ ಜೊತೆಗೆ ಅಭಿಮಾನಿಗಳ ಜೊತೆಗೂ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ತಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಹ ವಿಶೇಷ ರೀತಿಯಲ್ಲಿ ಆಚರಿಸಿದ್ದಾರೆ. ಆನೆಗುಡ್ಡೆ ವಿನಾಯಕನ ದೇವಸ್ಥಾನದಲ್ಲಿ 108 ತೆಂಗಿನಕಾಯಿ ಒಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ಅನೇಕ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಅಗತ್ಯ ವಸ್ತುಗಳನ್ನು ನೀಡಿ ಅನ್ನದಾನ ಮಾಡಿದ್ದಾರೆ.

 

 

ಶಾಲಾ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ಪದಾರ್ಥಗಳನ್ನು ನೀಡಿದ್ದಾರೆ. ಇದೇ ರೀತಿ ಅನೇಕ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ರಿಷಬ್ ಶೆಟ್ಟಿ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಾರ್ಥಕ ರೀತಿಯಲ್ಲಿ ಆಚರಿಸಿದ್ದಾರೆ. “ಕಾಂತಾರ” ದಂತಹ ಸೂಪರ್ ಹಿಟ್ ಚಿತ್ರದ ಮೂಲಕ ವಿಶ್ವದ ಗಮನ ಸೆಳೆದಿರುವ ರಿಷಬ್ ಶೆಟ್ಟಿ ಅವರ ನಿರ್ದೇಶನ, ನಟನೆಯ ಹಾಗು ಹೊಂಬಾಳೆ ಫಿಲಂಸ್ ನಿರ್ಮಾಣದ ಬಹು ನಿರೀಕ್ಷಿತ “ಕಾಂತಾರ ಚಾಪ್ಟರ್ ೧” ಚಿತ್ರ ಸಹ ಇದೇ ವರ್ಷ ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗುಲಿದ್ದು, ಅಭಿಮಾನಿಗಳು ಆ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

 

Spread the love
Click to comment

Copyright © 2019 PopcornKannada.com