Cinema News
ಅಲ್ಲು ಅರ್ಜುನ್ ವಿರುದ್ಧ ಎಫ್ ಐ ಆರ್ ದಾಖಲು

ಪುಷ್ಪ ಸಿನಿಮಾ ಸೂಪರ್ ಡ್ಯೂಪರ್ ಹಿಟ್ ಆದ ಬಳಿಕ ನಟ ಅಲ್ಲು ಅರ್ಜನ್ ಗೆ ಡಿಮ್ಯಾಂಡ್ ಹೆಚ್ಚಾಗಿದೆ. ಜಾಹಿರಾತುಗಳಿಂದ ಸಖತ್ ಆಫರ್ ಗಳು ಬರ್ತಿದ್ದು ಇದೀಗ ಅದೇ ಜಾಹಿರಾತಿನಿಂದ ಅಲ್ಲು ಅರ್ಜುನ್ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಶಿಕ್ಷಣ ಸಂಸ್ಥೆಯೊಂದರ ವಿಶೇಷ ಜಾಹೀರಾತಿನಲ್ಲಿ ದಾರಿ ತಪ್ಪಿಸುವ ಮತ್ತು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಕೋತಾ ಉಪೇಂದ್ರ ರೆಡ್ಡಿ ನಟ ಅಲ್ಲು ಅರ್ಜುನ್ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.
ಅಂಬರ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿರುವ ಕೋತಾ ಉಪೇಂದ್ರ ರೆಡ್ಡಿ, ಇಂತಹ ದಾರಿ ತಪ್ಪಿಸುವ ಜಾಹೀರಾತುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಜಾಹೀರಾತಿನಲ್ಲಿ ಕಾಣಿಸಿಕೊಂಡಿರುವ ಅಲ್ಲು ಅರ್ಜುನ್ ಹಾಗೂ ಸುಳ್ಳು ಮಾಹಿತಿ ನೀಡಿದ ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆಯ ವಿರುದ್ಧ ದೂರು ದಾಖಲಿಸಿದ್ದು ಶೀಘ್ರವೇ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.
ಜಾಹೀರಾತಿನಲ್ಲಿ ನೀಡಲಾಗಿರುವ ಐಐಟಿ ಹಾಗೂ ಎನ್ ಐಟಿಗಳ ಶ್ರೇಯಾಂಕಗಳ ಬಗ್ಗೆ ತಪ್ಪಾಗಿ ಮಾಹಿತಿ ನೀಡಲಾಗಿದೆ. ಇದನ್ನು ಪರಿಶೀಲನೆ ನಡೆಸದೆ ಅಲ್ಲು ಅರ್ಜುನ್ ತಪ್ಪು ಮಾಹಿತಿ ನೀಡಿದ್ದಾರೆ. ಇಂತಹ ಜಾಹೀರಾತು ದಾರಿ ತಪ್ಪಿಸುವ ಹಾಗೂ ಸಮಾಜಕ್ಕೆ ತಪ್ಪು ಮಾಹಿತಿ ನೀಡುತ್ತಿದೆ. ಹೀಗಾಗಿ ಶಿಕ್ಷಣ ಸಂಸ್ಥೆ ಹಾಗೂ ಅಲ್ಲು ಅರ್ಜುನ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋತಾ ಉಪೇಂದ್ರ ರೆಡ್ಡಿ ಆಗ್ರಹಿಸಿದ್ದಾರೆ.
