Cinema News

ಪ್ಯಾಕಪ್ ಎಂದ ವಂಶಿ…ಫೈರ್ ಫ್ಲೈ ಕುಂಬಳಕಾಯಿ ಇವೆಂಟ್ ನಲ್ಲಿ ಶಿವಣ್ಣ-ಗೀತಕ್ಕ ಭಾಗಿ

Published

on

ಶಿವಣ್ಣನ ಪುತ್ರಿ ನಿವೇದಿತಾ ನಿರ್ಮಾಣದ ಮೊದಲ ಸಿನಿಮಾ ‘ಫೈರ್‌ ಫ್ಲೈ’ಗೆ ಕುಂಬಳಕಾಯಿ ಪ್ರಾಪ್ತಿಯಾಗಿದೆ. ಕುಂಬಳಕಾಯಿ ಇವೆಂಟ್ ನಲ್ಲಿ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ನಿವೇದಿತಾ ಶಿವರಾಜ್ ಕುಮಾರ್, ನಿರ್ದೇಶಕ ವಂಶಿ, ಸಂಗೀತ ನಿರ್ದೇಶಕ ಚರಣ್ ರಾಜ್, ನಾಯಕಿ ರಚನಾ ಸೇರಿದಂತೆ ಇಡೀ ತಂಡ ಭಾಗಿಯಾಗಿತ್ತು.

ಈ ಸಿನಿಮಾದಲ್ಲಿ ಯುವ ಪ್ರತಿಭೆ ವಂಶಿ ನಾಯಕನಾಗಿ ನಟಿಸುತ್ತಿದ್ದಾರೆ. ಇದರೊಂದಿಗೆ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದಾರೆ. ‘ಫೈರ್ ಫ್ಲೈ’ನಲ್ಲಿ ವಂಶಿ ನಟ ಕಮ್ ನಿರ್ದೇಶಕನಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ವಂಶಿ ಜೊತೆ ಸುಧಾರಾಣಿ, ಅಚ್ಯುತ್ ಕುಮಾರ್, ಶೀತಲ್ ಶೆಟ್ಟಿ ಸೇರಿದಂತೆ ಹಲವು ಹಿರಿಯ ನಟರು ಕೂಡ ಅಭಿನಯಿಸಿದ್ದಾರೆ. ಇನ್ನು ವಂಶಿಗೆ‌ ನಾಯಕಿಯಾಗಿ ರಚನಾ ಇಂದರ್ ಜೊತೆಯಾಗಿದ್ದಾರೆ.

ಫೈರ್ ಫ್ಲೈ’ ಸಿನಿಮಾಗೆ ಅಭಿಲಾಷ್ ಕಳತ್ತಿ ಕ್ಯಾಮರಾ ವರ್ಕ್ ಇದ್ದರೆ, ಚರಣ್ ರಾಜ್ ಈ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ರಘು ನಿಡುವಳ್ಳಿ ಅವರ ಸಂಭಾಷಣೆಯಿದೆ. ಈ ಸಿನಿಮಾವನ್ನು ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡಲು ಮುಂದಾಗಿದೆ.

Spread the love
Click to comment

Copyright © 2019 PopcornKannada.com