Cinema News
ಯುಗಾದಿಗೆ ಬಂತು ಪೃಥ್ವಿ ಅಂಬರ್ – ಮಿಲನಾ ನಾಗರಾಜ್ ಅಭಿನಯದ “F0R REGN” ಚಿತ್ರದ ಫಸ್ಟ್ ಲುಕ್.

2020ರ ಸೂಪರ್ ಹಿಟ್ ಚಿತ್ರಗಳಾದ “ದಿಯಾ” ಹಾಗೂ “ಲವ್ ಮಾಕ್ಟೇಲ್” ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ ಮತ್ತೊಂದು ಸದಭಿರುಚಿಯ ಚಿತ್ರ “F0R REGN”. (ಫಾರ್ ರಿಜಿಸ್ಟರೇಷನ್).

ವರ್ಷದ ಮೊದಲ ಹಬ್ಬ ಯುಗಾದಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಯಾಗಿದೆ. ಚಿತ್ರದ ಫಸ್ಟ್ ಲುಕ್ ಗೆ
ಮೀರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ಒಂದು ಮಿಲಿಯನ್ ಗೂ ಅಧಿಕ ಲೈಕ್ಸ್ ದೊರಕಿದೆ. ಬಹುತೇಕ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಚಿತ್ರದಲ್ಲಿ ಪೃಥ್ವಿ ಆಶು ಪಾತ್ರದಲ್ಲಿ ಹಾಗೂ ಮಿಲನಾ ಅವರು ಅನ್ವಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ನಿಶ್ಚಲ್ ಫಿಲಂಸ್ ಮೂಲಕ
ಎನ್ .ನವೀನ್ ರಾವ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.
ದ್ವಾರಕನಾಥ್ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಆರ್.ಕೆ.ಹರೀಶ್ ಸಂಗೀತ ನಿರ್ದೇಶನ, ಅಭಿಷೇಕ್ ಕಳತ್ತಿ ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನವಿರುವ ಈ ಚಿತ್ರದ ಕಾರ್ಯಕಾರ ನಿರ್ಮಾಪಕರಾಗಿ ನಿರಂಜನ್ ರಾಧಾಕೃಷ್ಣ ಇದ್ದಾರೆ.
