Connect with us

Cinema News

ಗಣೇಶ್–ದೇವಿಕಾ ಭಟ್ ‘ಒಂದೇ ಒಂದು’ ಹಾಡಿಗೆ ಹೆಜ್ಜೆ: ಅಕ್ಟೋಬರ್ 16ಕ್ಕೆ ‘ಬೃಂದಾವಿಹಾರಿ’

Published

on

ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ಅಭಿನಯದ ಬಹುನಿರೀಕ್ಷಿತ ‘ಬೃಂದಾವಿಹಾರಿ’ ಚಿತ್ರದ ಐದನೇ ಹಾಡು ‘ಒಂದೇ ಒಂದು’ ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ಅನಾವರಣಗೊಂಡಿದೆ. ಸಮೃದ್ಧಿ ಮಂಜುನಾಥ್ ನಿರ್ಮಾಣದ ಹಾಗೂ ಶ್ರೀನಿವಾಸ ರಾಜು ನಿರ್ದೇಶನದ ಈ ಸಿನಿಮಾದ ಹಾಡನ್ನು ನಿರ್ಮಾಪಕರ ಪತ್ನಿ ಪದ್ಮ ಮಂಜುನಾಥ್ ಬಿಡುಗಡೆ ಮಾಡಿದರು. ಕವಿರತ್ನ ಡಾ. ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ, ಹೇಶಮ್ ಅಬ್ದುಲ್ ವಹಾಬ್ ಸಂಗೀತ, ಕೆ.ಎಸ್. ಚಿತ್ರ ಹಾಗೂ ಜಸ್ಕರಣ್ ಸಿಂಗ್ ಗಾಯನದಲ್ಲಿ ಮೂಡಿಬಂದಿರುವ ಈ ಹಾಡಿಗೆ ಗಣೇಶ್ ಹಾಗೂ ದೇವಿಕಾ ಭಟ್ ಹೆಜ್ಜೆ ಹಾಕಿದ್ದಾರೆ. ಆನಂದ್ ಆಡಿಯೋ ಮೂಲಕ ಚಿತ್ರದ ಹಾಡುಗಳು ಬಿಡುಗಡೆಯಾಗುತ್ತಿವೆ.

ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ನಾಲ್ಕು ಹಾಡುಗಳು ಪ್ರೇಕ್ಷಕರ ಗಮನ ಸೆಳೆದಿದ್ದು, ಇದೀಗ ಐದನೇ ಹಾಡಾಗಿ ಬಿಡುಗಡೆಯಾಗಿರುವ ‘ಒಂದೇ ಒಂದು’ ಕೂಡ ಮೆಚ್ಚುಗೆ ಪಡೆಯುತ್ತಿದೆ. ಹಾಡಿನ ಸಾಹಿತ್ಯ ಮತ್ತು ಸಂಗೀತಕ್ಕೆ ತಕ್ಕಂತೆ ಗಣೇಶ್ ಹಾಗೂ ದೇವಿಕಾ ಭಟ್ ಅವರ ನೃತ್ಯ ಸಂಯೋಜನೆ ಗಮನ ಸೆಳೆಯುವಂತಿದೆ. ‘ಕೃಷ್ಣಂ ಪ್ರಣಯ ಸಖಿ’ ಬಳಿಕ ಗಣೇಶ್ ಹಾಗೂ ಶ್ರೀನಿವಾಸ ರಾಜು ಜೋಡಿ ಮತ್ತೊಮ್ಮೆ ಒಂದಾಗಿರುವುದು ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ನಾಡಹಬ್ಬ ದಸರಾ ಸಂದರ್ಭದಲ್ಲಿ ಅಕ್ಟೋಬರ್ 16ರಂದು ‘ಬೃಂದಾವಿಹಾರಿ’ ವಿಶ್ವದಾದ್ಯಂತ ತೆರೆಗೆ ಬರಲಿದೆ.

ಹಾಡು ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಗಣೇಶ್, ಅದ್ಭುತ ಸಾಹಿತ್ಯ ನೀಡಿರುವ ಡಾ. ನಾಗೇಂದ್ರ ಪ್ರಸಾದ್, ಸಂಗೀತ ನಿರ್ದೇಶಕ ಹೇಶಮ್ ಅಬ್ದುಲ್ ವಹಾಬ್, ಗಾಯಕ ಜಸ್ಕರಣ್ ಸಿಂಗ್, ನಿರ್ದೇಶಕ ಶ್ರೀನಿವಾಸ ರಾಜು ಹಾಗೂ ನಿರ್ಮಾಪಕ ಸಮೃದ್ಧಿ ಮಂಜುನಾಥ್ ಅವರಿಗೆ ಧನ್ಯವಾದ ಸಲ್ಲಿಸಿದರು. ತಮ್ಮ ಕೆಲಸ ತೆರೆಯ ಮೇಲೆ ಚೆನ್ನಾಗಿ ಮೂಡಿಬರಲು ಪ್ರೇಕ್ಷಕರು ತೋರುವ ಪ್ರೀತಿಯೇ ಕಾರಣ ಎಂದು ಹೇಳಿದ ಗಣೇಶ್, ಅಕ್ಟೋಬರ್ 16ರಂದು ಚಿತ್ರವನ್ನು ಚಿತ್ರಮಂದಿರಗಳಲ್ಲಿ ವೀಕ್ಷಿಸಿ ಪ್ರೋತ್ಸಾಹಿಸುವಂತೆ ಮನವಿ ಮಾಡಿದರು. ನಿರ್ಮಾಪಕ ಸಮೃದ್ಧಿ ಮಂಜುನಾಥ್ ಮಾತನಾಡಿ, ಗಣೇಶ್ ಅವರೊಂದಿಗಿನ ತಮ್ಮ ಸ್ನೇಹ ಕ್ರಿಕೆಟ್ ಮೂಲಕ ಆರಂಭವಾಗಿದ್ದು, ತಮ್ಮ ಸಂಸ್ಥೆಯ 15ನೇ ವರ್ಷದ ಸಂಭ್ರಮದ ಸಂದರ್ಭದಲ್ಲಿ ‘ಒಂದೇ ಒಂದು’ ಹಾಡು ಬಿಡುಗಡೆಯಾಗಿರುವುದು ವಿಶೇಷ ಸಂತಸ ತಂದಿದೆ ಎಂದರು.

ನಿರ್ದೇಶಕ ಶ್ರೀನಿವಾಸ ರಾಜು ಅವರ ಪ್ರಕಾರ, ‘ಒಂದೇ ಒಂದು’ ಹಾಡು ಪ್ರೀತಿಸುವ ದಂಪತಿಗಳ ನಡುವಿನ ಭಾವನೆಗಳನ್ನು ಪ್ರತಿಬಿಂಬಿಸುವಂತಿದೆ. ಈ ಹಾಡಿಗಾಗಿ ನಾಗೇಂದ್ರ ಪ್ರಸಾದ್ ಅವರು ಸುಮಾರು ಎರಡು ತಿಂಗಳು ಕೆಲಸ ಮಾಡಿದ್ದಾರೆ. ಚಿತ್ರದಲ್ಲಿ ಒಟ್ಟು ಏಳು ಹಾಡುಗಳಿದ್ದು, ಪ್ರತಿಯೊಂದು ಹಾಡಿನಲ್ಲೂ ದ್ವಿರುಕ್ತಿ ಪದ ಬಳಕೆಗೆ ವಿಶೇಷ ಒತ್ತು ನೀಡಲಾಗಿದೆ ಎಂದು ಗೀತರಚನೆಕಾರ ವಿ. ನಾಗೇಂದ್ರ ಪ್ರಸಾದ್ ತಿಳಿಸಿದರು. ನಾಯಕಿ ದೇವಿಕಾ ಭಟ್ ಕೂಡ ಸಿನಿಮಾ ಹಾಗೂ ಹಾಡುಗಳ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ ಗಾಯಕ ಜಸ್ಕರಣ್ ಸಿಂಗ್ ‘ಒಂದೇ ಒಂದು’ ಹಾಡಿನ ಕೆಲವು ಸಾಲುಗಳನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು.

Spread the love

Continue Reading