Cinema News
*ಏಪ್ರಿಲ್ ಒಂದಕ್ಕೆ “ಹೋಮ್ ಮಿನಿಸ್ಟರ್” ಬರುತ್ತಿದ್ದಾರೆ ರಿಯಲ್ ಸ್ಟಾರ್ ಉಪೇಂದ್ರ – ವೇದಿಕ ಅಭಿನಯದ ಚಿತ್ರ 350ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆ.
ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ “ಹೋಮ್ ಮಿನಿಸ್ಟರ್” ಚಿತ್ರ ಏಪ್ರಿಲ್ ಒಂದರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಬಿಡುಗಡೆ ದಿನಾಂಕ ಘೋಷಣೆ ಮಾಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಸೂಪರ್ ಸ್ಟಾರ್ ಉಪೇಂದ್ರ ಬಿಡುಗಡೆ ದಿನಾಂಕವುಳ್ಳ ಪೋಸ್ಟರನ್ನು ಅನಾವರಣಗೊಳಿಸಿದರು.
ಇದು ನಾನು ಈವರೆಗೂ ಮಾಡಿರದ ಪಾತ್ರ. ಇಲ್ಲಿನ ನಿರ್ಮಾಪಕರು ಬೇರೆ ಕಡೆ ಹೋಗಿ ಚಿತ್ರ ನಿರ್ಮಾಣ ಮಾಡುತ್ತಾರೆ. ಆದರೆ ತೆಲುಗಿನ ನಿರ್ಮಾಪಕರು ಕನ್ನಡದ ಮೇಲಿನ ಅಭಿಮಾನದಿಂದ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇನ್ನೂ ನೂರು ಜನ ತೆಲುಗಿನ ನಿರ್ಮಾಪಕರು ಬಂದು ಕನ್ನಡ ಚಿತ್ರ ನಿರ್ಮಾಣ ಮಾಡಬೇಕು. ಆ ರೀತಿಯಲ್ಲಿ “ಹೋಂ ಮಿನಿಸ್ಟರ್” ಚಿತ್ರವನ್ನು ಯಶಸ್ವಿ ಮಡೋಣ ಎಂದು ತಿಳಿಸಿದ ನಾಯಕ ಉಪೇಂದ್ರ ನಾಯಕಿ ವೇದಿಕ ಅವರ ಅಭಿನಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
ನನಗೆ ಬಹಳ ದಿನಗಳ ನಂತರ ನಿಮ್ಮ ಮುಂದೆ ಮಾತನಾಡಲು ಖುಷಿಯಾಗುತ್ತಿದೆ. ಸೂಪರ್ ಸ್ಟಾರ್ ಉಪೇಂದ್ರ ಅವರ ಜೊತೆ ನಟಿಸಿದ್ದು, ಹೆಚ್ಚಿನ ಖುಷಿ ತಂದಿದೆ. ಇಡೀ ಚಿತ್ರತಂಡದ ಪರಿಶ್ರಮದಿಂದ ಚಿತ್ರ ಚೆನ್ನಾಗಿ ಬಂದಿದೆ. ನಾನು ಜರ್ನಲಿಸ್ಟ್ ಪಾತ್ರ ನಿರ್ವಹಣೆ ಮಾಡಿದ್ದೀನಿ ಎಂದರು ವೇದಿಕ.
ನಿರ್ಮಾಪಕರಾದ ಪೂರ್ಣಚಂದ್ರ ನಾಯ್ಡು ಹಾಗೂ ಶ್ರೀಕಾಂತ್ ವೀರಮಾಚನೆನಿ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು.
ಕರ್ನಾಟಕದಾದ್ಯಂತ ಸುಮಾರು 350ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ “ಹೋಮ್ ಮಿನಿಸ್ಟರ್”
ಚಿತ್ರವನ್ನು ಶ್ರೇಯಾ ಚಿತ್ರ ಮೂಲಕ ಬೆಂಗಳೂರು ಕುಮಾರ್ ಫಿಲಂಸ್ ಸಂಸ್ಥೆ ಬಿಡುಗಡೆ ಮಾಡುತ್ತಿರುವುದಾಗಿ ಬೆಂಗಳೂರು ಕುಮಾರ್ ತಿಳಿಸಿದರು.
ಸುಜಯ್ ಕೆ ಶ್ರೀಹರಿ ನಿರ್ದೇಶನದ ಈ ಚಿತ್ರಕ್ಕೆ ಜಿಬ್ರಾನ್ ಸಂಗೀತ ನೀಡಿದ್ದಾರೆ. ಕುಂಟುನಿ ಎಸ್ ಕುಮಾರ್ ಛಾಯಾಗ್ರಹಣ ಹಾಗೂ ಅಂಟೋನಿ ಅವರ ಸಂಕಲನ ಈ ಚಿತ್ರಕ್ಕಿದೆ.
ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಈ ಚಿತ್ರದ ಮೂಲಕ ಅಭಿಮಾನಿಗಳ ಚಕ್ರವರ್ತಿ ಎಂದು ಬಿರುದು ನೀಡಲಾಗಿದೆ. ವೇದಿಕ, ಸುಮನ್ ರಂಗನಾಥ್, ತಾನ್ಯ ಹೋಪ್, ಸಾಧುಕೋಕಿಲ, ಅವಿನಾಶ್, ಮಾಳವಿಕ ಅವಿನಾಶ್, ತಿಲಕರು, ಲಾಸ್ಯ, ಸುಧಾ ಬೆಳವಾಡಿ, ಶ್ರೀನಿವಾಸ ಮೂರ್ತಿ, ವಿಜಯ್ ಚಂಡೂರ್, ಬೇಬಿ ಆದ್ಯ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.