Cinema News

ನಿರೀಕ್ಷೆ ಹೆಚ್ಚಿಸಿರುವ ‘ಹೋಪ್’ ಜುಲೈ 8ಕ್ಕೆ ತೆರೆಗೆ…ಸ್ನೂಕರ್ ಪಟು ವರ್ಷ ಚೊಚ್ಚಲ ಸಿನಿ ಕನಸು ಅನಾವರಣಕ್ಕೆ ದಿನಗಣನೆ

Published

on

ಒಂದಷ್ಟು ನಿರೀಕ್ಷೆಗಳ ಒಡ್ಡೋಲಗದ ನಡುವೆ ಬಿಡುಗಡೆಗೆ ಸಜ್ಜಾಗಿರುವ ಸಿನಿಮಾ ಹೋಪ್. ಟ್ರೇಲರ್ ಮೂಲಕವೇ ನಾನಾ ದೆಸೆಯಲ್ಲಿ ಕುತೂಹಲ ಹುಟ್ಟಿಸಿರುವ ಚಿತ್ರ ಇದೇ ಜುಲೈ 8ಕ್ಕೆ ತೆರೆಗೆ ಬರ್ತಿದೆ. ಪ್ರಾಮಾಣಿಕ ಅಧಿಕಾರಿ ವರ್ಗಾವಣೆ, ಅದರ ಸುತ್ತ ನಡೆಯುವ ರಾಜಕೀಯ ಆಟ, ಕಾನೂನು ಹೋರಾಟದ ಕಥಾಹಂದರವನ್ನು ಚಿತ್ರದಲ್ಲಿ ಕಟ್ಟಿಕೊಡಲಾಗಿದೆ.

ಚಿತ್ರರಂಗದಿಂದ ಒಂದಷ್ಟು ಗ್ಯಾಪ್ ತೆಗೆದುಕೊಂಡಿದ್ದ ಶ್ವೇತಾ ಶ್ರೀವಾಸ್ತವ್ ಹೋಪ್ ಸಿನಿಮಾ ಮೂಲಕ ಮತ್ತೆ ಕಂಬ್ಯಾಕ್ ಮಾಡ್ತಿದ್ದು, ಕೆಎಎಸ್ ಅಧಿಕಾರಿಯಾಗಿ ನಟಿಸಿದ್ದಾರೆ. ಕೆಎಎಸ್ ಅಧಿಕಾರಿ ವರ್ಗಾವಣೆ ಜನ ಸಾಮಾನ್ಯರ ಏನೆಲ್ಲಾ ಎಂಬ ಕಥಾವಸ್ತುವನ್ನು ಇಟ್ಕೊಂಡು ಸಿನಿಮಾ ಮಾಡಲಾಗಿದೆ. ಸುಮಲತಾ ಅಂಬರೀಷ್, ಪ್ರಮೋದ್ ಶೆಟ್ಟಿ, ಗೋಪಾಲ ಪಾಂಡೆ, ಪ್ರಕಾಶ್ ಬೆಳವಾಡಿ, ಸಿರಿ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿದ್ದಾರೆ.

ಖ್ಯಾತ ಸ್ನೂಕರ್ ಆಟಗಾರ್ತಿ ವರ್ಷಾ ಸಂಜೀವ್, ಹೋಪ್ ಸಿನಿಮಾಗೆ ಕಥೆ ಬರೆದು ನಿರ್ಮಾಣ ಮಾಡಿದ್ದಾರೆ. ಈ ಹಿಂದೆ ಜಲ್ವಂತ ಸಿನಿಮಾ ನಿರ್ದೇಶಿಸಿದ ಅಂಬರೀಶ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಎಸ್.ಹಲ್ಲೇಶ್ ಕ್ಯಾಮರಾ ವರ್ಕ್ ಮಾಡಿದ್ದು, ರಿತ್ವಿಕ್ ಮುರಳೀಧರ್ ಸಂಗೀತ ನೀಡಿದ್ದಾರೆ. ಮಹಿಳಾ ಪ್ರಧಾನ ಸಿನಿಮಾವಾಗಿರುವ ಹೋಪ್ ಇದೇ ಜುಲೈ 8ರಂದು ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿದೆ.

Spread the love

Copyright © 2019 PopcornKannada.com