Cinema News
ಆಸ್ಪತ್ರೆಗೆ ದಾಖಲಾದ ನಿರ್ಮಾಪಕ ಜಾಕ್ ಮಂಜು

ಸ್ಯಾಂಡಲ್ ವುಡ್ ನಿರ್ಮಾಪಕರ ಜಾಕ್ ಮಂಜು ಆಸ್ಪತ್ರೆಗೆ ದಾಖಲಾಗಿದ್ದು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. . ಕಳೆದ 20 ದಿನಗಳ ಹಿಂದೆ ಕಾರ್ಯಕ್ರಮವೊಂದಕ್ಕೆ ತೆರೆಳಿದ್ದ ವೇಳೆ ಎಡವಿ ಬಿದ್ದು ಕಾಲು ಮುರಿದುಕೊಂಡಿದ್ದರು. ಸಾಕಷ್ಟು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ನೋವು ಕಡಿಮೆಯಾಗದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ಬನ್ನೇರುಘಟ್ಟದ ಬಳಿ ಇರೋ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅಪೇರೇಷನ್ ಮಾಡಸಿಕೊಂಡಿರೋ ಜಾಕ್ ಮಂಜು ವಿಶ್ರಾಂತಿ ಪಡೆಯುತ್ತಿದ್ದಾರೆ.
ಜಾಕ್ ಮಂಜು ಬೇಗ ಗುಣಮುಖರಾಗಿ ವಾಪಾಸ್ ಆಗಲಿ ಎಂದ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ನಿರ್ಮಾಪಕ ಜಾಕ್ ಮಂಜು ಮತ್ತು ಸುದೀಪ್ ಇಬ್ಬರು ಉತ್ತಮ ಸ್ನೇಹಿತರು. ಇಬ್ಬರ ನಡುವೆ ಉತ್ತಮ ಬಾಂಧವ್ಯವಿದೆ. ಸುದೀಪ್ ನಟನೆಯ ಅನೇಕ ಸಿನಿಮಾಗಳಿಗೆ ಜಾಕ್ ಮಂಜು ಬಂಡವಾಳ ಹೂಡಿದ್ದಾರೆ. ಇದೀಗ ಪ್ಯಾನ್ ಇಂಡಿಯಾ ವಿಕ್ರಾಂತ್ ರೋಣ ಸಿನಿಮಾದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

Continue Reading