Cinema News

ನಟ ವಿಕ್ರಮ್ ಆರೋಗ್ಯ ಈಗ ಹೇಗಿದೆ?

Published

on

ಸದಾ ಫಿಟ್ ಆಗಿದ್ದ ನಟ ವಿಕ್ರಮ್ ಅವರಿಗೆ ಹೃದಯಾಘಾತವಾಗಿದೆ ಅನ್ನೋ ಸುದ್ದಿ ಕೇಳಿ ಅಭಿಮಾನಿಗಳು ಶಾಕ್ ಆಗಿದ್ರು. ಈ ಸುದ್ದಿ ಸುಳ್ಳಗಿರಲಿ ಅಂತ ಅದೆಷ್ಟೋ ಮಂದಿ ಅಂದುಕೊಂಡಿದ್ರು. ಇದೀಗ ಅಭಿಮಾನಿಗಳ ಪ್ರಾರ್ಥನೆ ಸಲ್ಲಿಸಿದ್ದು ವಿಕ್ರಮ್ ಅವರಿಗೆ ಹೃದಯಾಘಾತವಾಗಿದ್ದು ಸುಳ್ಳು ಅನ್ನೋ ಸುದ್ದಿಯನ್ನ ಸ್ವತಃ ವಿಕ್ರಮ್ ಮ್ಯಾನೇಜರ್ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ವಿಕ್ರಮ್ ಮ್ಯಾನೇಜರ್ ಸೂರ್ಯ ನಾರಾಯಣ್ ಈ ಬಗ್ಗೆ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ವಿಕ್ರಮ್ ಅವರಿಗೆ ಚೆಸ್ಟ್ ಡಿಸ್ ಕಂಫರ್ಟ್ ಆಗಿತ್ತು ಅಷ್ಟೇ. ಹಾರ್ಟ್ ಅಟ್ಯಾಕ್ ಆಗಿದೆ ಅನ್ನೋದು ಸುಳ್ಳು ಸುದ್ದಿ. ವಿಕ್ರಮ್ ಅವರ ಆರೋಗ್ಯ ಸ್ಥಿರವಾಗಿದ್ದು ಒಂದು ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿಸಿದ್ದಾರೆ.

ವಿಕ್ರಮ್ ಆರೋಗ್ಯದ ಬಗ್ಗೆ ತಿಳಿದು ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ ವಿಕ್ರಮ್ ಕೋಬ್ರಾ ಹಾಗೂ ಪೊನ್ನಿಯಿನ್ ಸೆಲ್ವನ್ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ.

Spread the love
Click to comment

Copyright © 2019 PopcornKannada.com