Cinema News

‘ಹುಬ್ಬಳ್ಳಿ ಹಂಟರ್ಸ್’ ಶೂಟಿಂಗ್ ಪೂರ್ಣ; ಪೋಸ್ಟ್ ಪ್ರೊಡಕ್ಷನ್‌ಗೆ ಚಾಲನೆ

Published

on

ಗೋಲ್ಡನ್ ಹಾರ್ಸ್ ಸಿನಿಮಾ ಬ್ಯಾನರ್ ಅಡಿಯಲ್ಲಿ ನಿರ್ಮಾಪಕ ಸಂತೋಷ್ ಕುಮಾರ್ ಕೆ.ಸಿ. ನಿರ್ಮಿಸುತ್ತಿರುವ ‘ಹುಬ್ಬಳ್ಳಿ ಹಂಟರ್ಸ್’ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ. ‘ಬೆಲ್ ಬಾಟಮ್’ ಚಿತ್ರದ ಬಳಿಕ ಮತ್ತೊಂದು ವಿಭಿನ್ನ ಕಥೆಯನ್ನು ಪ್ರೇಕ್ಷಕರ ಮುಂದೆ ತರುತ್ತಿರುವ ಚಿತ್ರತಂಡ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿದೆ.

 

ಸಮರ್ಥ್ ಬಿ. ಕಡ್ಕೋಲ್ ಈ ಚಿತ್ರವನ್ನು ನಿರ್ದೇಶಿಸಿದ್ದು, ಕಥೆಯನ್ನೂ ಅವರೇ ರಚಿಸಿದ್ದಾರೆ. ಚೇತನ್ ಮಾರಂಬೀಡ್, ಪವನ್ ಕುಲಕರ್ಣಿ, ಸುಮಿತ್ ಸಂಕೋಜಿ, ನಮನ್ ಅರೋರ, ದೀಪಕ್ ರಾವ್, ಶಿವು ಗುಂಡಣ್ಣನವರ್, ವಿನಯ್ ದೊಡ್ಡಮನಿ, ಧನ್ಯ ಸುಜೀತ್, ಪವನ್ ಅಣ್ಣೆಗೇರಿ, ‘ಮಹಾನಟಿ’ ಖ್ಯಾತಿಯ ಧನ್ಯಶ್ರೀ ಸುಜಿತ್ ಹಾಗೂ ವನು ಪಾಟೀಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಜೊತೆಗೆ ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್ ಮತ್ತು ಕೃಷ್ಣ ಹೆಬ್ಬಾಳೆ ಅವರೂ ಚಿತ್ರದ ಪ್ರಮುಖ ತಾರಾಗಣದಲ್ಲಿ ಇದ್ದಾರೆ.

 

 

 

 

 

ಉತ್ತರ ಕರ್ನಾಟಕದ ಹಿನ್ನೆಲೆಯ ಕಥೆಯನ್ನು ಹೊಂದಿರುವ ಈ ಸಿನಿಮಾದ ಚಿತ್ರೀಕರಣವನ್ನು ಹುಬ್ಬಳ್ಳಿ, ಶಿರಸಿ ಹಾಗೂ ಧಾರವಾಡದ ವಿವಿಧ ಸ್ಥಳಗಳಲ್ಲಿ ನಡೆಸಲಾಗಿದೆ. ಹುಬ್ಬಳ್ಳಿಯಲ್ಲಿ ಆರಂಭವಾದ ಮೊದಲ ಹಂತದ ಬಳಿಕ ಶಿರಸಿಯಲ್ಲಿ ದೀರ್ಘ ವೇಳಾಪಟ್ಟಿ ಮತ್ತು ಧಾರವಾಡದಲ್ಲಿ ಅಂತಿಮ ಹಂತದ ಶೂಟಿಂಗ್ ಪೂರ್ಣಗೊಂಡಿದ್ದು, ಇದೀಗ ಸಂಪೂರ್ಣ ಚಿತ್ರೀಕರಣಕ್ಕೆ ತೆರೆ ಬಿದ್ದಿದೆ.

 

 

 

 

 

ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಛಾಯಾಗ್ರಹಣ ನೀಡಿದ್ದು, ಪ್ರಸನ್ನ ಕೇಶವ ಸಂಗೀತ ಸಂಯೋಜಿಸಿದ್ದಾರೆ. ರಾಹುಲ್ ವಿ. ಪಾರ್ವತಿಕರ್, ಅಮಿತ್ ಕಾರ್ವ್ಕರ್ ಹಾಗೂ ಚೇತನ್ ಮಾರಂಬೀಡ್ ಅವರೊಂದಿಗೆ ಸಮರ್ಥ್ ಬಿ. ಕಡ್ಕೋಲ್ ಸಂಭಾಷಣೆ ಬರೆದಿದ್ದಾರೆ. ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ವೇಗವಾಗಿ ನಡೆಯುತ್ತಿದ್ದು, ಶೀಘ್ರದಲ್ಲೇ ಚಿತ್ರದ ಟೀಸರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.

Spread the love

Copyright © 2019 PopcornKannada.com