Cinema News

ಕನ್ನಡ ಮತ್ತು ತೆಲುಗಿನಲ್ಲಿ ತಯಾರಾಗುತ್ತಿದೆ ‘ಇಬ್ಬರ ನಡುವಿನ ಮುದ್ದಿನ ರಾಣಿ’

Published

on

ಕೊರೋನ ಆರ್ಭಟದಿಂದ ಮಂಕಾಗಿದ್ದ ಕನ್ನಡ ಚಲನಚಿತ್ರರಂಗ ಈಗ ನಿಧಾನವಾಗಿ ಸುಧಾರಿಸಿಕೊಳ್ಳುತ್ತಿದೆ. ಸಾಕಷ್ಟು ನೂತನ ಚಿತ್ರಗಳು ಕೆಲವು ದಿನಗಳಿಂದ ಆರಂಭವಾಗುತ್ತಿದೆ.‌ ಈ ಸಾಲಿಗೆ ಸೇರ್ಪಡೆಯಾಗಿರುವ ಮತ್ತೊಂದು ನೂತನ ಚಿತ್ರ ‘ಇಬ್ಬರ ನಡುವಿನ‌ ಮುದ್ದಿನ ರಾಣಿ’. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ದೊಡ್ಡಬಳ್ಳಾಪುರ ಬಳಿಯಿರುವ ಅಂಗಾಸನ ರೆಸಾರ್ಟ್ ನಲ್ಲಿ ನೆರವೇರಿತು. ಕನ್ನಡ ‌ಹಾಗೂ ತೆಲುಗು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರದ ಮೊದಲ ಸನ್ನಿವೇಶಕ್ಕೆ ysrcp state joint Secretary ಕರ್ಮೂರು ವೆಂಕಟ ರೆಡ್ಡಿ ಆರಂಭ ಫಲಕ ತೋರುವ ಮೂಲಕ ಚಾಲನೆ ‌ನೀಡಿದರು.

 

 

ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸೌರಭ್ ಕಿಶೋರ್ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಪಿ.ಎಂ.ಆರ್ ಕೋಣ್ಣಾರೆಡ್ಡಿ ಈ ಚಿತ್ರದ ಸಹ ನಿರ್ಮಾಪಕರು. ವಿಜಯ್ ಕುಮಾರ್ ಹಾಗೂ ಮಧುಬಾಬು ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ರೊಮ್ಯಾಂಟಿಕ್ ಲವ್ ಸ್ಟೋರಿ ಆಧಾರಿತ ಕಥಾಹಂದರ ಹೊಂದಿರುವ ಈ‌‌ ಚಿತ್ರವನ್ನು ಎಂ.ಎಸ್.ಎನ್ ರಾಜಾ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ. ಬೆಂಗಳೂರು, ದೊಡ್ಡಬಳ್ಳಾಪುರ, ಮಡಿಕೇರಿ ಮುಂತಾದ ಕಡೆ ೧೫ ‌ದಿನಗಳ ಕಾಲ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ.

 

 

ನಾಲ್ಕು ಹಾಡುಗಳಿರುವ ಈ‌ ಚಿತ್ರಕ್ಕೆ ಎಂ.ಎಂ.ಮೋಹನ್ ಸಂಗೀತ ನೀಡುತ್ತಿದ್ದಾರೆ. ಬಾಲು‌ ಸುರೇಶ್ ಛಾಯಾಗ್ರಹಣ, ಸತ್ಯಬಾಬು ಸಂಕಲನ ಹಾಗೂ ಭೂಪತಿ ಯಾದಗಿರಿ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
ನಿರ್ಮಾಪಕ ಸೌರಭ್ ಕಿಶೋರ್ ಅವರು ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಆಕಾಶ್ ಆರಾಧ್ಯ, ದಿವ್ಯ ರಾವ್, ರೂಪ ರಾಯಪ್ಪ, ಸಂಜನ ನಾಯ್ಡು, ಮಹೇಂದರ್, ವಿಕ್ಚರಿ ವಾಸು, ಶೇಷಗಿರಿ, ಅಂಜಲಿ, ಲೋರ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Spread the love
Click to comment

Copyright © 2019 PopcornKannada.com