Cinema News

‘ಕನಕರಾಜ’ ಮೊದಲ ಹಾಡಿಗೆ ಭರ್ಜರಿ ಮೆಚ್ಚುಗೆ; ಮೋಷನ್ ಪೋಸ್ಟರ್‌ಗೆ ಸಿನಿಪ್ರಿಯರ ಫಿದಾ

Published

on

ಸುಕೃತಿ ಚಿತ್ರಾಲಯ ಬ್ಯಾನರ್ ಅಡಿಯಲ್ಲಿ ಎಸ್.ಆರ್. ಸನತ್ ಕುಮಾರ್ ನಿರ್ಮಾಣ ಮಾಡಿರುವ, ಡಾ. ವಿ. ನಾಗೇಂದ್ರಪ್ರಸಾದ್ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಸಂಗೀತ ನೀಡಿರುವ ‘ಕನಕರಾಜ’ ಚಿತ್ರದ ಮೊದಲ ಹಾಡು ಮತ್ತು ಮೋಷನ್ ಪೋಸ್ಟರ್ ಇತ್ತೀಚೆಗೆ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ಅನಾವರಣಗೊಂಡಿತು. ನಿರ್ದೇಶಕ ಆರ್. ರವೀಂದ್ರ ಸಾರಥ್ಯದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ ಎಚ್.ಎಂ. ರೇವಣ್ಣ ಅವರ ಪುತ್ರ ಅನೂಪ್ ರೇವಣ್ಣ ನಾಯಕನಾಗಿ ಅಭಿನಯಿಸಿದ್ದಾರೆ. ಮಾಜಿ ಸಚಿವ ಎಚ್.ಎಂ. ರೇವಣ್ಣ ಹಾಡನ್ನು ಬಿಡುಗಡೆ ಮಾಡಿದರೆ, ಹಿರಿಯ ನಟ ದೊಡ್ಡಣ್ಣ ಮೋಷನ್ ಪೋಸ್ಟರ್ ಅನಾವರಣಗೊಳಿಸಿದರು.

 

ಕಾರ್ಯಕ್ರಮದಲ್ಲಿ ರಾಜಕೀಯ ಮುಖಂಡ ವೆಂಕಟೇಶ್, ನಿರ್ಮಾಪಕರ ಸಂಘದ ಉಪಾಧ್ಯಕ್ಷ ನಂದಿಹಾಳ್ ಹಾಗೂ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇಗೌಡ ಸೇರಿದಂತೆ ಹಲವರು ಭಾಗವಹಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಮೋಷನ್ ಪೋಸ್ಟರ್ ಮತ್ತು ಮೊದಲ ಹಾಡು ಈಗಾಗಲೇ ಸಿನಿಪ್ರಿಯರ ಗಮನ ಸೆಳೆಯುತ್ತಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

 

 

 

 

 

 

ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕ ಸನತ್ ಕುಮಾರ್, ಇದು ಯುವಜನತೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡು ರೂಪಿಸಿರುವ ವಿಭಿನ್ನ ಕಥೆಯ ಸಿನಿಮಾ ಎಂದು ಹೇಳಿದರು. ನಾಯಕಿಯಾಗಿ ನಿಮಿಷ ಅಭಿನಯಿಸಿದ್ದು, ಶ್ರೀನಾಥ್, ರಾಮಕೃಷ್ಣ, ಪದ್ಮಾವಾಸಂತಿ, ಯಮುನ ಶ್ರೀನಿಧಿ ಸೇರಿದಂತೆ ಹಲವು ಅನುಭವಿ ಕಲಾವಿದರು ತಾರಾಗಣದಲ್ಲಿ ಇದ್ದಾರೆ. ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿದ್ದು, ಮುಂದಿನ ತಿಂಗಳು ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆ ಇದೆ ಎಂದು ತಿಳಿಸಿದರು.

 

 

 

 

 

 

ಡಾ. ವಿ. ನಾಗೇಂದ್ರಪ್ರಸಾದ್ ಮಾತನಾಡಿ, ಇಂದಿನ ಯುವಪೀಳಿಗೆಗೆ ಹತ್ತಿರವಾಗುವ ಕಥೆಯನ್ನು ಈ ಚಿತ್ರ ಹೊಂದಿದೆ ಎಂದರು. ನಾಯಕ ಅನೂಪ್ ರೇವಣ್ಣ ತಮ್ಮ ಪಾತ್ರದ ಬಗ್ಗೆ ಮಾತನಾಡಿ, ಚಿತ್ರದಲ್ಲಿ ತಾವು ವಕೀಲನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಮುಖ್ಯಮಂತ್ರಿ ರಾಮಯ್ಯ ಅವರ ಅಭಿಮಾನಿಯಾಗಿ ಅಭಿನಯಿಸಿದ್ದೇನೆ ಎಂದು ಹೇಳಿದರು. ನಿರ್ದೇಶಕ ಆರ್. ರವೀಂದ್ರ, ನಾಯಕಿ ನಿಮಿಷ, ಸುಂದರರಾಜ್, ಪದ್ಮಾವಾಸಂತಿ, ಯಮುನ ಶ್ರೀನಿಧಿ, ಮಂಜುನಾಥ್ ಅರಸ್, ಛಾಯಾಗ್ರಾಹಕ ಪ್ರಮೋದ್ ಭಾರತೀಯ ಹಾಗೂ ಗಾಯಕ ಚೇತನ್ ನಾಯಕ್ ಕೂಡ ಚಿತ್ರದ ವಿಶೇಷತೆಗಳನ್ನು ಹಂಚಿಕೊಂಡರು.

Spread the love

Copyright © 2019 PopcornKannada.com