Cinema News

“ಉಸಿರೇ ಉಸಿರೇ” ಚಿತ್ರದಲ್ಲಿ ಕಿಚ್ಚ ಸುದೀಪ್ ಅಭಿನಯ .

Published

on

ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ ಎಂ ವಿಜಯ್ ನಿರ್ದೇಶನದ “ಉಸಿರೇ ಉಸಿರೇ” ಚಿತ್ರದಲ್ಲಿ ಕಿಚ್ಚ ಸುದೀಪ್ ಅಭಿನಯಿಸುತ್ತಿದ್ದಾರೆ.

 

ಸದ್ಯ ಈಗಾಗಲೇ “ಉಸಿರೇ ಉಸಿರೇ” ಚಿತ್ರಕ್ಕೆ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದ್ದು, ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಕಿಚ್ಚ ಸುದೀಪ್ ನಟಿಸುತ್ತಿದ್ದಾರೆ. ಕೊನೆಯ ಹಂತದ ಚಿತ್ರೀಕರಣ ಭರದಿಂದ ಸಾಗುತ್ತಿದೆ..

 

 

“ಬಿಗ್ ಬಾಸ್” ಖ್ಯಾತಿಯ ರಾಜೀವ್ ಈ ಚಿತ್ರದ ನಾಯಕ. ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಆಲಿ,ಬ್ರಹ್ಮಾನಂದಮ್,ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಮುಂತಾದವರು ತಾರಾಬಳಗದಲ್ಲಿದ್ದಾರೆ. ಕಿಚ್ಚ ಸುದೀಪ್ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

 

 

ಸಿ.ಎಂ.ವಿಜಯ್ ನಿರ್ದೇಶನದ ಈ ಚಿತ್ರಕ್ಕೆ ಮನು ಬಿ ಕೆ ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನವಿದೆ ವಿವೇಕ್ ಚಕ್ರವರ್ತಿ ಅವರ ಸಂಗೀತ ನಿರ್ದೇಶನ “ಉಸಿರೇ ಉಸಿರೇ” ಚಿತ್ರಕ್ಕಿದೆ.

 

Spread the love
Click to comment

Copyright © 2019 PopcornKannada.com