Connect with us

Cinema News

ಕಾಶಿನಾಥ್ ಮಗನ ಹೊಸ ಸಿನಿಮಾಗೆ ಸಾಥ್ ಕೊಟ್ಟ ಕೋಮಲ್…ಸೆಟ್ಟೇರಿತು ಅಭಿಮನ್ಯು s/o ಕಾಶಿನಾಥ್

Published

on

ಕನ್ನಡ ಚಿತ್ರರಂಗದ ದಂತಕಥೆ ಕಾಶಿನಾಥ್ ಸುಪುತ್ರ ಅಭಿಮನ್ಯು ಕಾಶಿನಾಥ್ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಎಲ್ಲಿಗೆ ಪಯಣ ಯಾವುದೋ ದಾರಿ ಚಿತ್ರ ಬಿಡುಗಡೆಗೆ ಎದುರು ನೋಡುತ್ತಿರುವ ಅಭಿಮನ್ಯು ಈಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ‌ ಮುಹೂರ್ತ ಸಮಾರಂಭ ನಿನ್ನೆ ನೆರವೇರಿದೆ. ಬೆಂಗಳೂರಿನ ಸಹಕಾರ ನಗರದ ಛೇರ್ಮನ್ ಕ್ಲಬ್ ನಲ್ಲಿ ನಡೆದ ಮುಹೂರ್ತಕ್ಕೆ ವಿಶೇಷ ಅತಿಥಿಯಾಗಿ ಕೋಮಲ್ ಕುಮಾರ್ ಆಗಮಿಸಿದ್ದರು. ಅಭಿಮನ್ಯು ಹೊಸ ಚಿತ್ರಕ್ಕೆ ಕೋಮಲ್ ಕ್ಲ್ಯಾಪ್ ಮಾಡಿ ಶುಭ ಹಾರೈಸಿದರು.

ಕೋಮಲ್ ಕುಮಾರ್ ಮಾತನಾಡಿ, ನಾನು ಇಂಡಸ್ಟ್ರಿಗೆ ಬಂದು 32 ವರ್ಷವಾಯ್ತು. ಕ್ಲ್ಯಾಪ್ ಮಾಡಿದ್ದು ಇದೇ ಮೊದಲು. ಸಿನಿಮಾ ಚೆನ್ನಾಗಿ ಆಗಬೇಕು. ಯಾರು ಕ್ಲ್ಯಾಪ್ ಹೊಡೆದಿದ್ದು ಅಂತಾ ಆಗಬಾರದು. ಅಭಿಮನ್ಯು ಯಾರೋ ನನಗೆ ಸಪೋರ್ಟ್ ಮಾಡುತ್ತಿಲ್ಲ ಸರ್. ನಮ್ಮ ತಂದೆ ಇದ್ದಿದ್ದರೆ ಸಪೋರ್ಟ್ ಮಾಡುತ್ತಿದ್ದರು ಎಂದರು. ನನಗೆ ಅದು ಬಹಳ ಕನೆಕ್ಟ್ ಆಯಿತು. ಡೋಂಟ್ ವರಿ ದೇವರು ಇದ್ದಾನೆ. ಯಾವತ್ತು ಮೆಟ್ಟಿಲ್ಲನ್ನೂ ನೋಡುತ್ತಾ ನಿಲ್ಲಬಾರದು. ಹತ್ತಿ ಪ್ರಯತ್ನಪಡಬೇಕು. ನಿಮಗೆ ಒಳ್ಳೆದಾಗುತ್ತದೆ. ಪ್ರಯತ್ನಪಡುತ್ತಾ ಇರಿ. ಯಾರಿಗೂ ಧೀಡಿರ್ ಎಂದು ಯಶಸ್ಸು ಸಿಗಲ್ಲ. ಯಾರು ಇಲ್ಲ ಎಂಬುದನ್ನು ತಲೆಯಿಂದ ತೆಗೆದು ದೇವರ ಇದ್ದಾನೆ ಎಂಬುದನ್ನು ಇಟ್ಟುಕೊಳ್ಳಿ. ನಿಮಗೋಸ್ಕರ‌ ನಾನು ಬಂದೆ. ಚಿತ್ರದ ನಿರ್ದೇಶಕರಿಗೆ, ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು.

ನಟ ಅಭಿಮನ್ಯು ಮಾತನಾಡಿ, ನಿರ್ದೇಶಕರ ರಾಜ್‌ಮುರಳಿಯವರು ಅಪ್ಪನ ಜಾನರ್ ಇಟ್ಕೊಂಡು ಈಗಿನ ಕಾಲದ ಹುಡುಗರಿಗೆ ಮಾಡಿದರೆ ಹೇಗಿರುತ್ತೆ? ಅದನ್ನು ನಿಮ್ಮನ್ನು ಇಟ್ಕೊಂಡು ಪ್ಲಾನ್ ಮಾಡಿಕೊಂಡಿದ್ದೀನಿ ಸರ್ ಅಂದರು. ಅಪ್ಪ ಇದ್ದಾಗ ನನಗೆ ಬರುತ್ತಿದ್ದ ಆಫರ್ ಇಂತಹದ್ದೇ. ಅಪ್ಪ ಡೈರೆಕ್ಷನ್ ಮಾಡಬೇಕು. ನಾನು ಆಕ್ಟಿಂಗ್ ಮಾಡಬೇಕು. ಅನಂತನ ಅವಾಂತರ ಪಾರ್ಟ್ 2 ಮಾಡಬೇಕು. ಅನುಭವ ಪಾರ್ಟ್‌ 2 ಮಾಡಬೇಕು ಇದೇ ತರ ಹೆಚ್ಚು ಬರುತ್ತಿತ್ತು. ಅಪ್ಪನಿಗೂ ಆ ಕ್ಯಾರೆಕ್ಟರ್ ನನಗೆ ಸೂಟ್ ಆಗಲ್ಲ ಅಂತ ಅನಿಸುತ್ತಿತ್ತು. ನನಗೂ ಅದನ್ನು ಮಾಡುತ್ತೇನೆ ಅನ್ನೋ ಕಾನ್ಫಿಡೆನ್ಸ್ ಇರಲಿಲ್ಲ. ಸನ್ ಆಫ್ ಕಾಶೀನಾಥ್ ಸಿನಿಮಾ ಟೈಟಲ್ ರಿಜೆಸ್ಟರ್ ಮಾಡೋಣ ಅಂತ ಹೋದಾಗ ಯಾರೋ ಮಾಡಿಬಿಟ್ಟಿದ್ದರು. ಎಲ್ಲರೂ ಹೇಳ್ತಾರೆ ಕಾಶೀನಾಥ್ ಮಗನಿಗೆ ಸನ್ ಆಫ್‌ ಕಾಶೀನಾಥ್ ಸಿಗಲಿಲ್ಲ ಅಂತಾರೆ. ನಿರ್ದೇಶಕರು ಟೈಟಲ್ ಇಲ್ಲ ಸರ್ ಯಾರೋ ರಿಜಿಸ್ಟರ್ ಮಾಡಿಸಿದ್ದಾರೆ. ಸುಮ್ಮನೆ ಏನೋ ಸರಿಸುವುದಕ್ಕೆ ಆಗಲ್ಲ ಅಂದರು. ಆಮೇಲೆ ಅವರೇ ಯೋಚನೆ ಮಾಡಿ ಅಭಿಮನ್ಯು ಸನ್ ಆಫ್ ಕಾಶೀನಾಥ್ ಅಂತ ಹೇಳಿದರು.

Spread the love

Continue Reading
Click to comment

Leave a Reply

Your email address will not be published. Required fields are marked *