News

ಕೆವಿಎನ್ ಪ್ರಸ್ತುತ ಬೆಂಗಳೂರಿನಲ್ಲಿ ಅನಿರುದ್ಧ್ ಮ್ಯೂಸಿಕ್ ಹಬ್ಬ..60 ನಿಮಿಷದಲ್ಲೇ ಟಿಕೆಟ್ ಸೋಲ್ಡ್ ಔಟ್!

Published

on

ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರಸ್ತುತಪಡಿಸುತ್ತಿರುವ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಹಬ್ಬ ಬೆಂಗಳೂರಿನಲ್ಲಿ ಮೇ 31ರಂದು ನಡೆಯಲಿದೆ.
ದುಬೈ, ಆಸ್ಟ್ರೇಲಿಯಾ. ಅಮೆರಿಕ, ಪ್ಯಾರಿಸ್, ಸ್ವಿಟ್ಜರ್ಲ್ಯಾಂಡ್ ಮುಂತಾದ ದೇಶಗಳಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದ ಇದೇ ಹುಕುಂ ಟೂರ್ ಮೊತ್ತ ಮೊದಲ ಬಾರಿಗೆ ಭಾರತಕ್ಕೆ ಬರುತ್ತಿದೆ. ಅದೂ ಕೂಡ ನಮ್ಮ ಬೆಂಗಳೂರಿಗೆ. ಅನಿರುದ್ಧ್ ಮೊದಲ ಬಾರಿಗೆ ಸಿಲಿಕಾನ್ ಸಿಟಿಯಲ್ಲಿ ಮ್ಯೂಸಿಕ್ ಜಾತ್ರೆ ಮಾಡಲು ರೆಡಿಯಾಗಿದ್ದಾರೆ.
ಮೇ 31ರಂದು ಟೆರಾಫಾರ್ಮ್ ಅರೇನಾದಲ್ಲಿ ನಡೆಯುವ ಮ್ಯೂಸಿಕ್ ಕನ್ಸರ್ಟ್ ಈಗಾಗಲೇ ಬೃಹತ್ ದಾಖಲೆ ಕ್ರಿಯೇಟ್ ಮಾಡಿದೆ.

ಬೆಂಗಳೂರಿನಲ್ಲಿ ನಡೆಯಲಿರುವ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಕನ್ಸರ್ಟ್ ನ್ನು ಕೆವಿಎನ್ ಸಂಸ್ಥೆ ಪ್ರಸ್ತುಪಡಿಸಿದೆ. ವಿಶೇಷ ಅಂದರೆ ʼಅನಿರುದ್ಧ್ ಅವರ ಹುಕುಂ ಟೂರ್ ಬೆಂಗಳೂರು ಅವತರಣಿಕೆಯ 16 ಸಾವಿರಕ್ಕೂ ಅಧಿಕ ಟಿಕೆಟ್ಗಳು ಕೇವಲ 60 ನಿಮಿಷದಲ್ಲೇ ಮಾರಾಟವಾಗಿದೆ ʼ ಅಂತ ಕೆವಿಎನ್ ಸಂಸ್ಥೆ ನಿರ್ಮಾತೃ ವೆಂಕಟ ಕೆ ನಾರಾಯಣ ಖಚಿತಪಡಿಸಿದ್ದಾರೆ. ಅನಿರುದ್ಧ್ ರವಿಚಂದರ್ ಅವರ ಸಂಗೀತ ಸಂಜೆಗೆ ಕಾದಿದ್ದ ಸಿಲಿಕಾನ್ ಸಿಟಿಯ ಮಂದಿ, ವೇಗವಾಗಿ ಟಿಕೆಟ್ಸ್ಗಳನ್ನು ಖರೀದಿಸಿದ್ದಾರೆ. ಬೀಸ್ಟ್ ಮ್ಯೂಸಿಕ್ ಮೂಡ್ ಗೆ ಸಿಲಿಕಾನ್ ಸಿಟಿ ಮಂದಿ ಯಾವ ರೀತಿ ಕುತೂಹಲಕಾರಿಯಾಗಿ ಕಾಯುತ್ತಿದ್ದಾರೆ ಎಂಬುವುದು ಗೊತ್ತಾಗುತ್ತಿದೆ.

ಮನೋರಂಜನೆ ವಿಷಯವಾಗಿ ಮತ್ತೊಂದಿಷ್ಟು ಸರ್ಪ್ರೈಸ್ಗಳು ಕೆವಿಎನ್ ಸಂಸ್ಥೆಯ ಕಡೆಯಿಂದ ಬರುವ ನಿರೀಕ್ಷೆಗಳಿವೆ. ಇನ್ನು ಹೆಚ್ಚಿನ ಮಾಹಿತಿಗಳಿಗಾಗಿ ಕೆವಿಎನ್ ಪ್ರೊಡಕ್ಷನ್ಸ್ ಸಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಿ.

Spread the love
Click to comment

Copyright © 2019 PopcornKannada.com