Connect with us

Cinema News

“ನಟ ಭಯಂಕರ” ನಿಗೆ ಸಾಥ್ ನೀಡಿದ “ಮದಗಜ”.

Published

on

ತಮ್ಮ ಮಾತಿನ‌ ಮೂಲಕವೇ ಮನೆಮಾತಾಗಿರುವ ಒಳ್ಳೆ ಹುಡುಗ ಪ್ರಥಮ್ ಪ್ರಥಮ ಬಾರಿಗೆ ನಿರ್ದೇಶಿಸಿರುವ ಚಿತ್ರ ” ನಟ ಭಯಂಕರ”. ಈ ಚಿತ್ರದ ನಾಯಕ ಕೂಡ ಪ್ರಥಮ್ ಅವರೆ.

ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. “ಮದಗಜ” ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಡುಗಳನ್ನು ಬಿಡುಗಡೆ ಮಾಡಿದರು.‌ ಲಹರಿ ಸಂಸ್ಥೆಯ ವೇಲು, ಜಿಲ್ಲಾಧಿಕಾರಿ ದಯಾನಂದ್, ಗೀತರಚನೆಕಾರ ಡಾ||ವಿ.ನಾಗೇಂದ್ರಪ್ರಸಾದ್, ಗಿರೀಶ್, ಅರ್ಜುನ್ ಕುಮಾರ್ ಬಂಗಾರಪ್ಪ ಸೇರಿದಂತೆ ಅನೇಕ ಗಣ್ಯರು ಆಡಿಯೋ ರಿಲೀಸ್ ಗೆ ಸಾಕ್ಷಿಯಾದರು.

ಪ್ರಥಮ್ ಕಾನ್ಫಿಡೆನ್ಸ್ ಇರುವ ಹುಡುಗ. ಬಿಗ ಬಾಸ್ ನ ಆರಂಭದಲ್ಲಿ ಇವರನ್ನು ನೋಡಿ, ಏನಪ್ಪಾ, ಹೀಗೆ ಮಾತಾಡುತ್ತಾರೆ? ಅಂದು ಕೊಂಡೆ. ನಂತರ ನಾನೇ ಅವರ ಅಭಿಮಾನಿಯಾದೆ. ಈಗ ನಟನೆ ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ. ರಘು ದೀಕ್ಷಿತ್ ಹಾಗೂ ನಾನು ಇಷ್ಟಪಡುವ ಉಪ್ಪಿ ಸರ್ ಹಾಡಿರುವ ಹಾಡುಗಳು ನನಗೆ ಇಷ್ಟವಾಯಿತು. ಸಿನಿಮಾ ಕೂಡ ಉತ್ತಮವಾಗಿ ಮೂಡಿಬಂದಿರುತ್ತದೆ ಎಂಬ ನಂಬಿಕೆಯಿದೆ ಎಂದ ಶ್ರೀಮುರಳಿ, ಪ್ರಥಮ್ ಸೇರಿದಂತೆ ಇಡೀ ಚಿತ್ರತಂಡಕ್ಕೆ ಒಳಿತನ್ನು ಹಾರೈಸಿದರು.

ಜಿಲ್ಲಾಧಿಕಾರಿ ದಯಾನಂದ್, ಲಹರಿ ವೇಲು ಹಾಗೂ ವಿ.ನಾಗೇಂದ್ರಪ್ರಸಾದ್ ಸಹ ಪ್ರಥಮ್ ಬಗ್ಗೆ ಮೆಚ್ಚುಗೆಯ ಮಾತನಾಡಿ ಚಿತ್ರಕ್ಕೆ ಶುಭ ಕೋರಿದರು.

ಇದು ನಮ್ಮ ಚಿತ್ರದ ಮೊದಲ ಪತ್ರಿಕಾಗೋಷ್ಠಿ. ನನ್ನ ಮೊದಲ ನಿರ್ದೇಶನದ ಚಿತ್ರ ಕೂಡ.
ಬಾರಿ ಅಹಂಕಾರವಿರುವ ಮನುಷ್ಯ ಒಬ್ಬರಿಗೆ ಮಾತು ಕೊಟ್ಟಾಗ ಹೇಗೆ ಬದಲಾಗುತ್ತಾನೆ ಎಂಬುದೇ ಚಿತ್ರದ ಮುಖ್ಯ ಕಥಾವಸ್ತು. ಇನ್ನೊಂದು ಕಡೆ ಸ್ಟುಪಿಡ್ ಸೂಪರ್ ಸ್ಟಾರ್ ಹಾಗೂ ಕುರುಡಿ ದೆವ್ವದ ನಡುವೆ ನಡೆಯುವ ಕಥೆ ಕೂಡ ಅನ್ನಬಹುದು. ಇಂದು ಆಡಿಯೋ ಬಿಡುಗಡೆ ಮಾಡಿದ್ದೇವೆ. ಸದ್ಯದಲ್ಲೇ ಟ್ರೇಲರ್ ಅನಾವರಣಗೊಳಿಸುತ್ತೇವೆ. ಮೇ ಹದಿಮೂರರಂದು ಚಿತ್ರವನ್ನು ತೆರೆಗೆ ತರುತ್ತೇವೆ ಎಂದ ಪ್ರಥಮ್, ಕಾರ್ಯಕ್ರಮಕ್ಕೆ ಆಗಮಿಸಿದ್ದ ಶ್ರೀಮುರಳಿ ಸೇರಿದಂತೆ ಎಲ್ಲಾ ಗಣ್ಯರಿಗೆ ಧನ್ಯವಾದ ತಿಳಿಸಿದರು.

ನಾಯಕಿ ಫ್ರಾನ್ಸ್ ನಿವಾಸಿ ನಿಹಾರಿಕ, ಪ್ರಮುಖ ಪಾತ್ರಧಾರಿ ಚಂದನ, ಸಂಗೀತ ನೀಡಿರುವ ಪ್ರದ್ಯೋತನ್ ಚಿತ್ರದ ಕುರಿತು ಮಾತನಾಡಿದರು.

Spread the love

Continue Reading
Click to comment

Leave a Reply

Your email address will not be published. Required fields are marked *