Cinema News

ಈ ವಾರ ತೆರೆಗೆ “ಮರ್ದಿನಿ”.

Published

on

ಅಂಕಿತ್ ಫಿಲಂಸ್ ಲಾಂಛನದಲ್ಲಿ ಭಾರತಿ ಜಗ್ಗಿ ನಿರ್ಮಾಣ ಮಾಡಿರುವ, ಕಿರಣ್ ಕುಮಾರ್ ವಿ ನಿರ್ದೇಶಿಸಿರುವ “ಮರ್ದಿನಿ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

 

 

“ಮರ್ದಿನಿ” ಇದೊಂದು ಮಹಿಳಾ ಪ್ರಧಾನ ಚಿತ್ರ. ರಿತನ್ಯ ಹೂವಣ್ಣ “ಮರ್ದಿನಿ” ಪಾತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಮನೋಹರ್ , ಅಕ್ಷಯ್, ಇಂಚರ, ಮನಮೋಹನ್ ರೈ, ಸುಶ್ಮಿತಾ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

 

 

ಅರುಣ್ ಸುರೇಶ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಹಿತನ್ ಹಾಸನ್ ಸಂಗೀತ ನಿರ್ದೇಶನ, ಎನ್ ಎಂ ವಿಶ್ವ ಸಂಕಲನ ಹಾಗೂ ಅಶೋಕ್ ಅವರ ಸಾಹಸ ನಿರ್ದೇಶನವಿದೆ. ಕರಣ್ ಗಜ ಸಂಭಾಷಣೆ ಬರೆದಿದ್ದಾರೆ.

 

Spread the love
Click to comment

Copyright © 2019 PopcornKannada.com