Cinema News
ವಿಶೇಷ ಪ್ರತಿಭೆ ಮೆಹಬೂಬ್ ಸಾಬ್ ಹಾಡಿರುವ `ಕೃಷ್ಣ ಗಾರ್ಮೆಂಟ್ಸ್` ಚಿತ್ರದ ಹಾಡಿಗೆ ಅಪಾರ ಮೆಚ್ಚುಗೆ
ಆದಿತ್ಯ ಸಿನಿ ಕಂಬೈನ್ಸ್ ಲಾಂಛನದಲ್ಲಿ ಷಣ್ಮುಖ ಜಿ ಬೆಂಡಿಗೇರಿ ಅವರು ನಿರ್ಮಿಸಿರುವ `ಕೃಷ್ಣ ಗಾರ್ಮೆಂಟ್ಸ್` ಚಿತ್ರಕ್ಕಾಗಿ ಸಿದ್ದು ಪೂರ್ಣಚಂದ್ರ ಅವರು ಬರೆದಿರುವ `ಹಾಯಾದ ಹಾದಿಯಲಿ` ಹಾಡನ್ನು ಖ್ಯಾತ ಗಾಯಕ ಮೆಹಬೂಬ್ ಸಾಬ್ ಹಾಡಿದ್ದಾರೆ ಈ ಹಾಡಿನ ಲಿರಿಕಲ್ ವೀಡಿಯೋ ಆನಂದ್ ಆಡಿಯೋ ಮೂಲಕ ಇತ್ತೀಚೆಗೆ ಯೂಟ್ಯೂಬ್‍ನಲ್ಲಿ ಬಿಡುಗಡೆಯಾಗಿದ್ದು, ಕೇಳುಗರ ಮನ ಗೆದ್ದಿದೆ. ಚಿತ್ರ ಜೂನ್ ತಿಂಗಳಲ್ಲಿ ತೆರೆಗೆ ಬರಲಿದೆ.
ಪ್ರಶಾಂತ್ ರಾವ್ ಅವರು ನಿರ್ಮಾಣದ ನಿರ್ವಹಣೆಯ(ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್) ಜವಾಬ್ದಾರಿ ಹೊತ್ತಿದ್ದಾರೆ.
ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಸಿದ್ದು ಪೂರ್ಣಚಂದ್ರ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ. ಹಾಸನ, ದೊಡ್ದಬಳ್ಳಾಪುರ, ಬೆಂಗಳೂರು, ಶ್ರವಣ ಬೆಳಗೊಳ, ಚನ್ನಪಟ್ಟಣದಲ್ಲಿ 35ದಿನಗಳ ಕಾಲ ಚಿತ್ರೀಕರಣ ನಡೆದಿದೆ.
`ಶ್ರೀಮಾನ್ ಶ್ರೀಮತಿ` ಧಾರಾವಾಹಿ ಖ್ಯಾತಿಯ ಭಾಸ್ಕರ್ ನೀನಾಸಂ ಚಿತ್ರದ ನಾಯಕರಾಗಿ ನಟಿಸಿದ್ದು, `ಬ್ರಹ್ಮಾಸ್ತ್ರ` ಧಾರಾವಾಹಿಯ ರಶ್ಮಿತ ನಾಯಕಿಯಾಗಿ ಅಭಿನಯಿಸಿದ್ದಾರೆ. ಚಂದು(ಲಕ್ಷ್ಮೀ ಬಾರಮ್ಮ), ರಾಜೇಶ್ ನಟರಂಗ, ಪ್ರಮಿಳಾ ಸುಬ್ರಮಣ್ಯಂ, ಲಕ್ಷ್ಮೀನರಸಿಂಹ, ರಜನಿಕಾಂತ್, ವರ್ಧನ್ ತೀರ್ಥಹಳ್ಲಿ, ಹೆಚ್.ಎಂ.ಟಿ.ವಿಜಯ್, ಕಿರಣ್ ಹೊನ್ನಾವರ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿದಾನಂದ್ ಹಾಗೂ ಚಂದ್ರಶೇಖರ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಅವರ ಸಂಕಲನವಿದೆ.